Get Updates
Get notified of breaking news, exclusive insights, and must-see stories!

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಸಾವಿರ ರು. ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಧೂಮಪಾನ ಪ್ರಕರಣಗಳ ಮೇಲೆ ನಿಯಂತ್ರಣ ಹೇರಲು ರಾಜ್ಯಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಫೆಬ್ರವರಿ 13: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ ವರ್ಷಗಳೇ ಉರುಳಿದ್ದರೂ ಈ ಚಾಳಿ ಮಾತ್ರ ಸಂಪೂರ್ಣವಾಗಿ ನಿಂತಿಲ್ಲ. ಅಲ್ಲಿ, ಇಲ್ಲಿ, ಪೋಲಿಸರ ಕಣ್ತಪ್ಪಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದುವವರಿಗೇನೂ ಕಮ್ಮಿಯಿಲ್ಲ.

ನಿಯಮಗಳನ್ನು ಮೀರಿ, ಬಸ್ಸು, ಆಸ್ಪತ್ರೆ, ಚಿತ್ರ ಮಂದಿರ, ಗ್ರಂಥಾಲಯ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು, ಬೀಡಿ, ಚುಟ್ಟಾ ಸೇದುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿತ್ತು.

Rs. 1000 fine for smoking in public places

ಇಂಥ ಅಧಿಕ 'ಧೂಮ' ಪ್ರಸಂಗಗಳಿಗೆ ಕಟ್ಟುನಿಟ್ಟಾಗಿ ಕಡಿವಾಣ ಹಾಕಲೆಂದೇ ನಿರ್ಧರಿಸಿರುವ ಕರ್ನಾಟಕ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದುಬಾರಿ ದಂಡ ವಿಧಿಸಲು ಸಜ್ಜಾಗಿದ್ದಾರೆ.

ಈವರೆಗೆ ನಿಯಮ ಉಲ್ಲಂಘನೆಗೆ ಸುಮಾರು 200 ರು. ದಂಡ ವಿಧಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಇಂಥ ಪ್ರಕರಣಗಳಲ್ಲಿ ಸಿಕ್ಕಿಬೀಳುವ ವ್ಯಕ್ತಿಗಳಿಗೆ 1000 ರು. ದಂಡ ವಿಧಿಸಲು ನಿರ್ಧರಿಸಲಾಗಿದೆ.

ಇತ್ತೀಚೆಗೆ ನಡೆದ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+