Gruha Lakshmi Scheme: ಮಹಿಳೆಯರ 2000 ರೂ ಗೃಹಲಕ್ಷ್ಮಿ ಹಣ ದುರುಪಯೋಗ; 11 ಸಾವಿರ ಕೋಟಿ ರೂ. ನಾಪತ್ತೆ: ಸಿ ಟಿ ರವಿ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣದ ದುರುಪಯೋಗ, 2 ವರ್ಷದಲ್ಲಿ 11 ಸಾವಿರ ಕೋಟಿ ರೂ. ಹಣ ನಾಪತ್ತೆಯಾಗಿದೆ. ಇದು ಸುರೇಶ್ ಕುಮಾರ್ ಅವರು ಹೇಳಿದಂತೆ ಹೈದರಾಲಿ ಲೆಕ್ಕ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಡ ಮಹಿಳೆಯರಿಗೆ ಕೊಡಬೇಕಾದ ಹಣ ನುಂಗಿದ ಸರಕಾರದ ನೀತಿಯ ವಿರುದ್ಧ, ಬ್ರ್ಯಾಂಡ್ ಬೆಂಗಳೂರು ಡ್ರಗ್ಸ್ ಬೆಂಗಳೂರಾಗಿ, ಬಾಂಗ್ಲಾ ನಿವಾಸಿಗಳ ಬೆಂಗಳೂರಾಗಿ, ಕೊಲೆ ಅತ್ಯಾಚಾರದ ಬೆಂಗಳೂರಾಗಿ, 750 ಮೀಟರ್ ಪ್ರಯಾಣ ಮಾಡಲು 86 ನಿಮಿಷ ತೆಗೆದುಕೊಳ್ಳುವ ಬೆಂಗಳೂರಾಗಿ, ಬ್ಯಾಡ್ ಬೆಂಗಳೂರಾಗಿ ಪರಿವರ್ತನೆ ಮಾಡುತ್ತಿರುವ ಕಾಂಗ್ರೆಸ್ ನೀತಿಯನ್ನು ಖಂಡಿಸಲಾಗಿದೆ. ನಾವು ಬೆಂಗಳೂರು ಉಳಿಸಬೇಕಾಗಿದೆ ಎಂದು ತಿಳಿಸಿದರು.

ಈ ವಿಷಯವನ್ನು ಆಧರಿಸಿ ಬಗರ್ ಹುಕುಂ ಚಳವಳಿ, ಬಿಪಿಎಲ್ ಕಾರ್ಡ್ ರದ್ದು, ಅತಿವೃಷ್ಟಿ ಪರಿಹಾರವನ್ನು ಸಮರ್ಪಕವಾಗಿ ವಿತರಿಸದೇ ಇರುವುದು, ಎಂಎಸ್‍ಪಿಯನ್ನು ಕೇಂದ್ರ ಸರಕಾರ ಪ್ರಕಟಿಸಿದ್ದರೂ ಖರೀದಿ ಕೇಂದ್ರವನ್ನು ನೆಪ ಮಾತ್ರಕ್ಕೆ ತೆರೆದು ಮೆಕ್ಕೆ ಜೋಳ ಖರೀದಿ ಕೇಂದ್ರವನ್ನು ಬಂದ್ ಮಾಡಿರುವುದು- ಇತ್ಯಾದಿ ಎಲ್ಲ ವಿಷಯಗಳನ್ನು ಇಟ್ಟುಕೊಂಡು ರಾಜ್ಯದ ಉದ್ದಗಲಕ್ಕೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಭಾಗದಲ್ಲಿ ಹೋರಾಟ ಸಂಘಟಿಸುವ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಇದೆಲ್ಲದರ ಅಂತಿಮ ಯೋಜನೆ ತಯಾರಿಸಿ ನಾವು ಹೋರಾಟಕ್ಕೆ ಇಳಿಯುತ್ತೇವೆ. 'ಕರ್ನಾಟಕ ಉಳಿಸಿ, ಕಾಂಗ್ರೆಸ್ ತೊಲಗಿಸಿ' ಹಾಗೂ 'ಕೆಟ್ಟ ಸರಕಾರ- ಕೆಟ್ಟ ಜನರಿಂದ ಬೆಂಗಳೂರು ಉಳಿಸಿ' ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದರು. ಬಾಗಲಕೋಟೆ, ದಾವಣಗೆರೆಯ ಮುಂಬರುವ ಉಪ ಚುನಾವಣೆ ಕುರಿತು ಚರ್ಚಿಸಿದ್ದೇವೆ. ಈ ಸಂಬಂಧ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಅಭ್ಯರ್ಥಿ ಕುರಿತು, ವಾತಾವರಣ ನಿರ್ಮಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಬಳ್ಳಾರಿಯ ಅಹಿತಕರ ಘಟನಾವಳಿಗಳ ಕುರಿತು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕಳವಳ ವ್ಯಕ್ತಪಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿಯವರ ಹತ್ಯೆಗೆ ಪ್ರಯತ್ನ ಆಗಿದೆ. ಗುರಿ ತಪ್ಪಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಆಗಿದೆ. ಇದೆಲ್ಲ ನೋಡಿದಾಗ ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂಬ ತೀರ್ಮಾನವನ್ನು ಕೋರ್ ಕಮಿಟಿ ಬಂದಿದೆ. ರಾಜ್ಯ ಕೋರ್ ಕಮಿಟಿ ಸಿಬಿಐ ತನಿಖೆಗೆ ಆಗ್ರಹಿಸಿ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದರು.
ವಿಧಾನಸಭೆ, ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಅಕಾಂಕ್ಷಿಗಳ ಕುರಿತು ಆರ್.ಅಶೋಕ್ ಅವರ ನೇತೃತ್ವದಲ್ಲಿ ಗೋವಿಂದ ಕಾರಜೋಳ, ನಾನು, ನಳಿನ್‍ಕುಮಾರ್ ಕಟೀಲ್ ಮೊದಲಾದವರು ಪ್ರವಾಸ ಮಾಡಿದ್ದೇವೆ. ವರದಿಯನ್ನೂ ಕೊಟ್ಟಿದ್ದು, ಆ ವರದಿ ಆಧರಿಸಿ ಎನ್‍ಡಿಎ ಘಟಕದ ಜೆಡಿಎಸ್ ಜೊತೆಗೂ ಸಮಾಲೋಚನೆ ಮಾಡಿ ಶೀಘ್ರವೇ ಬಿಜೆಪಿ ಸಂಸದೀಯ ಮಂಡಳಿಗೆ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲು ತೀರ್ಮಾನಿಸಲಾಗಿದೆ. ಪಟ್ಟಿ ಕಳಿಸುವ ಮತ್ತು ಜೆಡಿಎಸ್ ಜೊತೆ ಮಾತನಾಡುವ ಅಧಿಕಾರವನ್ನು ರಾಜ್ಯ ಘಟಕದ ಅಧ್ಯಕ್ಷರಿಗೆ ಕೋರ್ ಕಮಿಟಿ ಕೊಟ್ಟಿದೆ ಎಂದು ತಿಳಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications