ರೈತರಿಗೆ ಗುಡ್ ನ್ಯೂಸ್; 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಜಮೆ: ಕೃಷ್ಣ ಬೈರೇಗೌಡ
ಬೆಳಗಾವಿ ಡಿಸೆಂಬರ್ 12: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು.
ಶುಕ್ರವಾರ ವಿಧಾನ ಪರಿಷತ್ನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಕೃಷ್ಣ ಬೈರೇಗೌಡ ಅವರು, ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಎಸ್ಡಿಆರ್ಎಫ್ ನಿಯಮದ ಪ್ರಕಾರ ಬೆಳೆಹಾನಿಗೆ ರೂ.257.90 ಕೋಟಿ ಪರಿಹಾರ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ. 245.75 ಕೋಟಿ ಪರಿಹಾರ ಹಣ ಸೇರಿ ಒಟ್ಟಾರೆ ರೂ.498.73 ಕೋಟಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಅಂಕಿಅಂಶವನ್ನೂ ನೀಡಿದ ಅವರು, "ರಾಜ್ಯಾದ್ಯಂತ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 14,21,000 ರೈತರಿಗೆ ಎಸ್ಡಿಆರ್ಎಫ್ ನಿಯಮದ ಪ್ರಕಾರ ರೂ.1,218 ಕೋಟಿ ಹಣ ಪರಿಹಾರ ರೂಪದಲ್ಲಿ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ.1,033 ಕೋಟಿ ಸೇರಿ ಒಟ್ಟಾರೆಯಾಗಿ ರೂ. 2249 ಕೋಟಿ ಹಣವನ್ನು ಪರಿಹಾರದ ರೂಪದಲ್ಲಿ 14,21,000 ಲಕ್ಷ ರೈತರಿಗೆ ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.
ಇದರ ಜೊತೆಗೆ, ಜಾನುವಾರಗಳ ಹಾನಿಗೆ ರೂ.1.89 ಕೋಟಿ, ಮನೆಹಾನಿಗೆ ರೂ.40.86 ಕೋಟಿ, ಅಲ್ಪ ಪ್ರಮಾಣದ ಮನೆಹಾನಿಗಳಿಗೆ ರೂ.5.79 ಕೋಟಿ, ಕಾಳಜಿ ಕೇಂದ್ರಗಳಿಗೆ ರೂ.1.20 ಕೋಟಿ ರೂ ಹಾಗೂ ಮಳೆಯಿಂದ ಉಂಟಾದ ಎಲ್ಲಾ ಪ್ರಾಣಹಾನಿಗಳನ್ನೂ ಸೇರಿಸಿದರೆ ಒಟ್ಟಾರೆಯಾಗಿ ರೂ.2,300 ಕೋಟಿ ಹಣವನ್ನು ಪರಿಹಾರವಾಗಿ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ರಾಜ್ಯಾದ್ಯಂತ ಕೇವಲ ಶೇ.03 ರಷ್ಟು ರೈತರಿಗೆ ಪರಿಹಾರ ಹಣ ಪಾವತಿಯಾಗಿಲ್ಲ ಎಂಬುದು ನಿಜ. ಕೆಲವು ರೈತರ ಆಧಾರ್ ಹೆಸರು ಮತ್ತು ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿನ ಹೆಸರು ತಾಳೆಯಾಗುತ್ತಿಲ್ಲ. ಮತ್ತೂ ಕೆಲವರದ್ದು ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿಲ್ಲ. ಹೀಗಾಗಿ 26,394 ರೈತರಿಗೆ ಪರಿಹಾರದ ಹಣ ಪಾವತಿ ಆಗಿಲ್ಲ. ಇದಲ್ಲದೆ, ಸರ್ಕಾರದವರು ಎನ್ಪಿಸಿಐ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ 8,000 ರೈತರಿಗೆ ಹಣ ಪಾವತಿಯಾಗಿಲ್ಲ. ಈ ಎಲ್ಲಾ ಕಾರಣದಿಂದ ಒಟ್ಟಾರೆ 14,21,000 ರೈತರ ಪೈಕಿ 44,208 ರೈತರದ್ದು ಬಾಕಿ ಇದೆ. ಸರ್ಕಾರ ಈಗಾಗಲೇ ಹಣ ಪಾವತಿ ಮಾಡಿಯಾಗಿದ್ದು, ರೈತರ ಈ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿದ ಕೂಡಲೇ ರೈತರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಕೃಷಿ ವಿಮೆ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ವಿಮೆ ಕೂಡ ಈ ವರ್ಷ ನಾವು ತ್ವರಿತ ಪಾವತಿ ಮಾಡುವ ಕೆಲಸ ಮಾಡಿದ್ದೇವೆ. ಕೃಷಿ ಇಲಾಖೆ ಜೊತೆ ಮಾತನಾಡಿ ಎಷ್ಟು ಶೀಘ್ರ ಸಾಧ್ಯವೋ ಅಷ್ಟು ಶೀಘ್ರ ರೈತರ ಖಾತೆಗೆ ಬೆಳೆ ವಿಮೆ ಪಾವತಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications