ಹೋರಿಗಳ ವೀರ್ಯ ಸಂಸ್ಕರಣೆಗೆ 3 ಕೋಟಿ ರು ಅನುದಾನ

ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್‌ಗಿಡ್ಡ, ಕೃಷ್ಣಾ ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ.

ಕೊಪ್ಪಳ, ಫೆಬ್ರವರಿ 20 : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಎ. ಮಂಜು ಅವರು ಹೇಳಿದ್ದಾರೆ.

ತಾಲೂಕಿನ ಮುನಿರಾಬಾದಿನ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಆವರಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ದೇಶಿ ತಳಿಗಳಿಂದ ಗುಣಮಟ್ಟದ ಹಾಲು ಉತ್ಪಾದನೆಯ ಜೊತೆಗೆ ಜನರ ಆರೋಗ್ಯ ಸುಧಾರಣೆ ಸಾಧ್ಯ ಎನ್ನುವ ಅಂಶವನ್ನು ತಜ್ಞರು ಸಂಶೋಧನೆಗಳಿಂದ ದೃಢಪಡಿಸಿದ್ದಾರೆ ಎಂದು ಅವರು ನುಡಿದರು. [ಬ್ರಾಹ್ಮಣ ಹುಡುಗನ ವೀರ್ಯಕ್ಕೆ ಭಾರೀ ಬೇಡಿಕೆ]

Rs 3 crore allocated for collecting sperm of bullock

ದೇಶಿ ತಳಿ ದನಗಳ ಸಂರಕ್ಷಣೆ ಹಾಗೂ ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್‌ಗಿಡ್ಡ, ಕೃಷ್ಣಾ ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ.

ಇದಕ್ಕಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಕಟ್ಟಡ ಹಾಗೂ ಅಗತ್ಯ ಉಪಕರಣಗಳ ಖರೀದಿಗೆ 3 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಬರುವ 6 ತಿಂಗಳ ಒಳಗಾಗಿ ಈ ಕೇಂದ್ರ ಪ್ರಾರಂಭಗೊಂಡು ಲೋಕಾರ್ಪಣೆಯಾಗಲಿದೆ. [ಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ]

ದೇಶಿ ಹೋರಿಗಳಿಂದ ವೀರ್ಯವನ್ನು ಸಂಗ್ರಹಿಸಿ, ಸಂಸ್ಕರಿಸಿ, ರಾಜ್ಯದ ಎಲ್ಲ ಜಿಲ್ಲೆಗಳಿಗೆ, ಆಯಾ ಪ್ರದೇಶದ ಭೌಗೋಳಿಕ ಹವಾಗುಣಕ್ಕೆ ಹೊಂದಿಕೊಳ್ಳುವಂತಹ ದೇಶೀಯ ತಳಿಗಳ ದನಗಳನ್ನು ಆಯಾ ಭಾಗಕ್ಕೆ ಪೂರೈಕೆಯಾಗುವ ರೀತಿಯಲ್ಲಿ ವೀರ್ಯ ಸಂಸ್ಕರಣಾ ಕೇಂದ್ರ ಕಾರ್ಯ ನಿರ್ವಹಿಸಲಿದೆ.

ಇದಕ್ಕಾಗಿ 6.55 ಕೋಟಿ ರೂ. ಅನುದಾನವನ್ನು 2017-18ನೇ ಸಾಲಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಈ ಹಿಂದೆ ದಿನವೊಂದಕ್ಕೆ 59 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿತ್ತು. ಇಲಾಖೆ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಇದೀಗ 72 ಲಕ್ಷ ಲೀ. ಹಾಲು ಸುಮಾರು 9 ಲಕ್ಷ ರೈತರಿಂದ ನಿತ್ಯ ಸಂಗ್ರಹವಾಗುತ್ತಿದೆ.

ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನ 4 ರು.ಗಳಿಂದ 5 ರು.ಗೆ ಹೆಚ್ಚಿಸಲಾಗಿದ್ದು, ನಿತ್ಯ 3.5 ಕೋಟಿ ರು. ಪ್ರೋತ್ಸಾಹಧನ ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ರೈತರು ಕೃಷಿಯ ಜೊತೆಗೆ ಹೈನುಗಾರಿಕೆ, ರೇಷ್ಮೆಯಂತಹ ಉಪ ಕಸುಬನ್ನು ಹೆಚ್ಚು, ಹೆಚ್ಚು, ಅಳವಡಿಸಿಕೊಂಡರೆ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಎ. ಮಂಜು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+