400 ಕೋಟಿ ರೂ. ದರೋಡೆ ಪ್ರಕರಣ: ಪ್ರಮುಖ ಆರೋಪಿ ಕಿಶೋರ್ ಶರಣಾಗತಿ, ಬಿಗ್ ಟ್ವಿಸ್ಟ್
ಬೆಳಗಾವಿ: ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಭಾರೀ ಸಂಚಲನ ಮೂಡಿಸಿರುವ 400 ಕೋಟಿ ರೂಪಾಯಿ ತುಂಬಿದ್ದ ಎರಡು ಕಂಟೇನರ್ ಕಳ್ಳತನ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಬೆಳವಣಿಗೆ ನಡೆದಿವೆ. ಈ ಕೇಸಿನ ಪ್ರಮುಖ ಆರೋಪಿ ಕಿಶೋರ್ ಸಾಳವೆ ಮೊನ್ನೆ ನಾಸಿಕ್ ತಾಲೂಕಿನ ಘೋಟಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಈತನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದ ಒಟ್ಟಾರೆ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆ ಆಗಿದೆ.
ಬೆಳಗಾವಿ ಜಿಲ್ಲೆಯ ಚೂರ್ಲಾ ಎಂಬಲ್ಲಿ ಅಂದರೆ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿಯಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಕೋಟಿ ನಗದು ಕಳ್ಳತನ ಪ್ರಕರಣದಲ್ಲಿ ಹಣದ ಮಾಲೀಕ ಎನ್ನಲಾದ ಪ್ರಮುಖ ಆರೋಪಿ ಬಿಲ್ಡರ್ ಕಿಶೋರ್ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಫೆ.3ರವರೆಗೆ ವಿಚಾರಣೆ ನಡೆಸಲು ಅನುಮತಿ ಪಡೆದಿದ್ದಾರೆ.

ಎಲ್ಲ ಆಯಾಮಗಳಲ್ಲಿ ತನಿಖೆ
ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಬಂಧನವಾಗಿದೆ. ಇನ್ನೊಬ್ಬ ಕಿಂಗ್‌ಪಿನ್ ವಿರಾಟ್ ಗಾಂಧಿಯ ಎಸ್‌ಐಟಿ ಕಸ್ಟಡಿ ಮುಕ್ತಾಯಗೊಂಡಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಆರೋಪಿಗಳ ಪೈಕಿ ಮಚ್ಛೇಂದ್ರ ಮಡವಿಯನ್ನು ಹೆಚ್ಚಿನ ವಿಚಾರಣೆಗಾಗಿ ಫೆಬ್ರವರಿ 2ರವರೆಗೆ ಪುನಃ ಪೊಲೀಸ್ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಕುರಿತಂತೆ ವೈರಲ್ ಆದ ಆಡಿಯೋ ಸಂಭಾಷಣೆ ಹಾಗೂ ಇಷ್ಟೊಂದು ಹಣ ಎಲ್ಲಿಂದ ಬಂತು/ ಇಷ್ಟು ಹಣ ಸಾಗಾಣೆ ಆಗುತ್ತಿದ್ದುದು ನಿಜವಾ? ಎಂಬೆಲ್ಲ ಆಯಾದಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಂಬಂಧಿಸಿದ ಆರೋಪಿಗಳು ಹಾಗೂ ಸಾಕ್ಷ್ಯಗಳ ಮೂಲಕ ಮಾಹಿತಿ ಕೆಲ ಹಾಕುತ್ತಿದ್ದಾರೆ.
ಈ ಪ್ರಕರಣ ಕಳೆದ ವರ್ಷ ಅಂದರೆ ಮೂರು ತಿಂಗಳ ಹಿಂದೆಯೇ ನಡೆದಿತ್ತು ಎನ್ನಲಾಗಿದೆ. ಆದರೆ ಇತ್ತೀಚೆಗೆ ಬೆಳಕಿಗೆ ಬಂದಿದ್ದು ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಈ ಬಗ್ಗೆ ಹೆಚ್ಚಿನ ತಲೆ ಕೆಡಸಿಕೊಂಡಿದ್ದಾರೆ. 'ಗಡಿ ಭಾಗದ ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ಸಾಗಿಸುತ್ತಿದ್ದ ಎರಡು ಕಂಟೇನರ್ ಹಣ ಕಳ್ಳತನವಾಗಿದೆ. ಅದನ್ನು ನಾನು ಮಾಡಿದ್ದೇನೆ ಎಂದು ಕಿಶೋರ್ ಸಾಳವೇ ಹಾಗೂ ಅವರ ತಂಡ ನನ್ನನ್ನು ಅಪಹರಣ ಮಾಡಿದ್ದರು ಎಂದು ಸಂದೀಪ್ ಪಾಟೀಲ್ ಕಳೆದ ಜನವರಿಯಲ್ಲಿ ದೂರು ನೀಡಿದ್ದರು. ಆಗ ಪ್ರಕರಣ ಬೆಳಕಿಗೆ ಬಂದಿತ್ತು.
ಖಾಕಿ ಮೇಲೆ ದೂರುದಾರ ಗಂಭೀರ ಆರೋಪ
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. 400 ಕೋಟಿ ಹಣಕ್ಕೆ ಬದಲಾಗಿ 35 ಕೋಟಿ ಎಂದು ತೋರಿಸಲು ಪೊಲೀಸರು ಮುಂದಾಗಿದ್ದಾರೆ. ಪ್ರಕರಣದ ತೀವ್ರತೆ ಕಡಿಮೆ ಮಾಡಲು ಪ್ಯ್ಲಾನ್ ಮಾಡಿದ್ದಾರೆ. ಈ ಮೂಲಕ ಸತ್ಯಾಂಶ ಮರೆಮಾಚಿ ಪ್ರಭಾವಿಗಳನ್ನು ರಕ್ಷಿಸಲು ಮುಂದಾಗಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಸಂಬಂಧ ದೂರುದಾರ ಸಂದೀಪ ಅವರು ಫೆಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಈ ಬಹುಕೋಟಿ ಹೈಜಾಕ್ ನಿತ್ಯ ಒಂದಿಲ್ಲ ಒಂದು ಟ್ವಿಸ್ಟ್ ಪಡೆಯುತ್ತಿದೆ. ಇದೀಗ ಪ್ರಮುಖ ಆರೋಪಿ ಕಿಶೋರ್ ಶರಣಾಗಿದ್ದು, ಇನ್ನಷ್ಟು ಮಾಹಿತಿಗಳು ಬಹಿರಂಗಗೊಳ್ಳಬೇಕಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications