ಉತ್ತರ ಕರ್ನಾಟಕ ಭಾಗಕ್ಕೆ ಖರ್ಚಾಗಿದ್ದೆಷ್ಟು? ಅಂಕಿ ಅಂಶಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ
ಬೆಳಗಾವಿ: ಬೆಳಗಾವಿಯಲ್ಲಿ ಅಧಿವೇಶನ ನಡೆದರೆ. ಭರವಸೆಗಳು ಮೂಡುತ್ತವೆ. ಆದರೆ ಅಧಿವೇಶನ ಮುಗಿದ ಮೇಲೆ ಮತ್ತೆ ಅದೇ ಮೌನ...ಅದೇ ಸಮಸ್ಯೆಗಳು...ಅದೇ ನಿರ್ಲಕ್ಷ್ಯ... ಉತ್ತರ ಕರ್ನಾಟಕ ಮೊದಲಿನಿಂದಲೂ ಅನುದಾನ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಇದೆ. ಈ ಬಗ್ಗೆ ಶುಕ್ರವಾರ ವಿಧಾನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಬಿಡುಗಡೆಯಾದ ಹಣ ಎಷ್ಟು ಎಂಬ ಬಗ್ಗೆ ಅಂಕಿ ಅಂಶಗಳ ಮೂಲಕ ಮಾಹಿತಿಯನ್ನ ನೀಡಿದ್ದಾರೆ.
ಬೆಳಗಾವಿಯ ವಿಧಾನಮಂಡಲದ ಅಧಿವೇಶನದ ವಿಧಾನ ಸಭೆ ಕಲಾಪಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂ.1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಹಣ ವ್ಯಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಾಮಾಜಿಕ ಹಾಗೂ ಅರ್ಥಿಕ ಅಸಮತೋಲನ ಸರಿಪಡಿಸುವ ಸಲುವಾಗಿಯೇ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ದಕ್ಷಿಣ ಭಾಗದಲ್ಲಿ ಶೇ.58 ರಷ್ಟು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಶೇ.42 ರಷ್ಟು ಜನಸಂಖ್ಯೆಯಿದೆ. ಆದರೆ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಡಿ ಶೇ.43.63 ರಷ್ಟು ಹಣವನ್ನು ಉತ್ತರ ಕರ್ನಾಟಕ ಭಾಗಕ್ಕೆ ಖರ್ಚು ಮಾಡಿದೆ.

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಾದ್ಯಂತ 1,24,12,543 ಫಲಾನುಭವಿಗಳು ಇದ್ದಾರೆ. ಈ ಪೈಕಿ ಉತ್ತರ ಕರ್ನಾಟಕ ಭಾಗದಲ್ಲಿ 58,92,156 ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ರೂ.52,400 ಕೋಟಿ ಖರ್ಚು ಮಾಡಿದ್ದು, ಇದರಲ್ಲಿ ಉತ್ತರ ಕರ್ನಾಟಕ ಭಾಗದ ಫಲಾನುಭವಿಗಳ ಖಾತೆಗೆ ರೂ.24,631 ಕೋಟಿ ಜಮೆ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದ್ಯಂತ 1,65,24,547 ಮನೆಗಳಿಗೆ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಪೈಕಿ ಉತ್ತರ ಕರ್ನಾಟಕ ಭಾಗದ 56,70,211 ಮನೆಗಳು ಉಚಿತ ವಿದ್ಯುತ್ ಪಡೆಯುತ್ತಿವೆ. ಇದಕ್ಕಾಗಿ ರಾಜ್ಯದ್ಯಂತ ರೂ.20,639 ಕೋಟಿ ವೆಚ್ಚ ಮಾಡಿದ್ದು ಈ ಪೈಕಿ ರೂ.6038 ಉತ್ತರ ಕರ್ನಾಟಕ ಭಾಗಕ್ಕೆ ಖರ್ಚಾಗಿದೆ.
ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ 2,84,802 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ ಉತ್ತರ ಕರ್ನಾಟಕದಲ್ಲಿ 1,73,722 ನಿರುದ್ಯೋಗಿ ಫಲಾನುಭವಿಗಳು ಯೋಜನೆಯಡಿ ಭತ್ಯೆ ಪಡೆಯುತ್ತಿದ್ದಾರೆ. ಯೋಜನೆಗೆ ರಾಜ್ಯದಲ್ಲಿ ರೂ.750 ಕೋಟಿ ಖರ್ಚಾಗಿದ್ದು, ರೂ.456 ಕೋಟಿಯನ್ನು ಉತ್ತರ ಕರ್ನಾಟಕ ಫಲಾನುಭವಿಗಳ ಖಾತೆ ಜಮೆ ಮಾಡಲಾಗಿದೆ. ಇದೇ ರೀತಿ ಅನ್ನಭಾಗ್ಯ ಯೋಜನೆಯಡಿ ಉತ್ತರ ಕರ್ನಾಟಕಕ್ಕೆ ರೂ.7848 ಕೋಟಿ, ಶಕ್ತಿ ಯೋಜನೆಯಡಿ ರೂ.7027 ಕೋಟಿ ವ್ಯಯಿಸಲಾಗಿದೆ ಎಂದರು.
ರಾಜ್ಯದ ಜನಸಂಖ್ಯೆ 6.95 ಕೋಟಿ ಎಂದು ಅಂದಾಜಿಸಲಾಗಿದೆ. ಈ ಪೈಕಿ ಉತ್ತರ ಕರ್ನಾಟಕ ಭಾಗದ ಜನಸಂಖ್ಯೆ 2,96,28,767 ಆಗಿದೆ. ಸುಮಾರು 4 ಕೋಟಿಗೂ ಅಧಿಕ ಜನರು ದಕ್ಷಿಣ ಕರ್ನಾಟಕ ಭಾಗದಲ್ಲಿ ವಾಸವಾಗಿದ್ದಾರೆ. 31 ಜಿಲ್ಲೆಗಳ ಪೈಕಿ 14 ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲಿವೆ. 224 ವಿಧಾನಸಭೆ ಕ್ಷೇತ್ರಗಳ ಪೈಕಿ 97 ವಿಧಾನಸಭೆ ಕ್ಷೇತ್ರಗಳು ಉತ್ತರ ಕರ್ನಾಟಕದಲ್ಲಿವೆ. ರಾಜ್ಯದ ಸರಾಸರಿ ತಲಾ ಆದಾಯ ರೂ.3,39,813 ಗಳಾಗಿದೆ. ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.
ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಫಲವಾಗಿ ತಲಾ ಆದಾಯ ಹೆಚ್ಚಾಗಿದೆ. ಆದರೆ ಉತ್ತರ ಕರ್ನಾಟಕದ 10 ಜಿಲ್ಲೆಗಳ ತಲಾ ಆದಾಯ ರೂ.2 ಲಕ್ಷಕ್ಕಿಂತ ಕಡಿಮೆಯಿದೆ. ಕಲಬುರ್ಗಿ ತಲಾ ಆದಾಯದಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು ಪ್ರಾದೇಶಿಕ ಅಸಮತೋಲವನ್ನು ಎತ್ತಿ ತೋರಿಸುತ್ತದೆ. ಅಸಮಾನತೆ ಇದ್ದರೆ ಸಂವಿಧಾನ ಧ್ಯೇಯೊದ್ದೇಶಗಳು ಈಡೇರಿಕೆಯಾಗುವುದಿಲ್ಲ. ಸ್ವಾತಂತ್ರ್ಯ ಪಡೆದಿದ್ದಕ್ಕೆ ಸಾರ್ಥಕತೆ ಇರುವುದಿಲ್ಲ ಎಂದು ಮುಖ್ಯಮುಂತ್ರಿ ಸಿದ್ದರಾಮಯ್ಯ ಹೇಳಿದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications