ದೊಡ್ಡಬಳ್ಳಾಪುರದಲ್ಲಿ 5 ಕೋಟಿ ಮೌಲ್ಯದ ರಕ್ತ ಚಂದನ ವಶ
ಬೆಂಗಳೂರು, ಅಕ್ಟೋಬರ್ 12 : ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು 5 ಕೋಟಿ ರೂ. ಮೌಲ್ಯದ ರಕ್ತಚಂದನವನ್ನು ವಶಪಡಿಸಿಕೊಂಡಿದ್ದಾರೆ. ರಕ್ತಚಂದನ ಕಳ್ಳ ಸಾಗಣೆಯ ಹಲವಾರು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಚಿತ್ತೂರಿನ ಸ್ಪೆಷಲ್ ಟಾಸ್ಕ್ ಫೋರ್ಸ್ ಭಾನುವಾರ ರಾತ್ರಿ ಈ ಕಾರ್ಯಾಚರಣೆ ನಡೆಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಅಲ್ತಾಫ್ ಹುಸೈನ್ (36) ಎಂದು ಗುರುತಿಸಲಾಗಿದೆ. ರಕ್ತ ಚಂದನ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. [ರಕ್ತ ಚಂದನ ಮಾಫಿಯ ಜೊತೆ ನಟಿ ನಂಟು, ನಾಪತ್ತೆ!]

ಪೊಲೀಸರು ನೀಡಿರುವ ಮಾಹಿತಿಯಂತೆ ಮೊಹಮ್ಮದ್ ಹುಸೈನ್ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಮದನಪಲ್ಲಿಯ ನಿವಾಸಿಯಾದ ಮೊಹಮ್ಮದ್ ರಕ್ತ ಚಂದನ ಕಳ್ಳಸಾಗಣೆ ಮಾಡಿದ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ನಡುವೆ ರಕ್ತ ಚಂದನ ಕಳ್ಳಸಾಗಣೆ ನಡೆಯುತ್ತಿದ್ದು, ಮೊಹಮ್ಮದ್ ಹುಸೈನ್ 2010ರಿಂದಲೂ ಇದರಲ್ಲಿ ತೊಡಗಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. [ಆಂಧ್ರ -ತಮಿಳುನಾಡು ಸಂಬಂಧಕ್ಕೆ ಬೆಂಕಿ ಹಚ್ಚಿದ ರಕ್ತ ಚಂದನ]
ದೊಡ್ಡಬಳ್ಳಾಪುರದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡ ರಕ್ತಚಂದನವನ್ನು ಆಂಧ್ರಪ್ರದೇಶದ ಕಾಡಿನಿಂದ ತರಲಾಗಿತ್ತು. ಮುನ್ನಾ ಎಂಬುವವರ ಗೋಡಾನ್ನಲ್ಲಿ ಸಂಗ್ರಹಣೆ ಮಾಡಲಾಗಿತ್ತು. ಗೋಡಾನ್ನಲ್ಲಿ ಸಿಕ್ಕಿ ಸುಮಾರು 3 ಟನ್ ರಕ್ತಚಂದನವ ಮೌಲ್ಯ ಮಾರುಕಟ್ಟೆಯಲ್ಲಿ 5 ಕೋಟಿ ರೂ.ಗಳು.
ಪೊಲೀಸರು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಚಿತ್ತೂರು ಬಳಿ ಇಬ್ಬರನ್ನು ಬಂಧಿಸಲಾಗಿದೆ. ಇವರು ತಮಿಳುನಾಡು ಮೂಲದವರಾಗಿದ್ದು, ಹಲವಾರು ವರ್ಷಗಳಿಂದ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದರು. ಬಂಧಿತರ ವಿಚಾರಣೆ ನಡೆಯುತ್ತಿದೆ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ












Click it and Unblock the Notifications