ನೇಕಾರರ ಆತ್ಮಹತ್ಯೆಗೆ 5 ಲಕ್ಷ ರೂ ಪರಿಹಾರ: ಸಚಿವ ಶಿವಾನಂದ ಪಾಟೀಲ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 18: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ಭರವಸೆ ನೀಡಿದ್ದಾರೆ.
ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರಾದ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಭಿಮಾ ಯೋಜನೆಯಲ್ಲಿ ರೂ 2 ಲಕ್ಷ ಪರಿಹಾರ ವಿತರಣೆ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯ ವಿಮಾ ಕಂತನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ರೂ 2 ಲಕ್ಷ ಗಳೊಂದಿಗೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ರೂ 3 ಲಕ್ಷ ಪರಿಹಾರ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿತರಣೆ ಮಾಡುವ ಯೋಜನೆ ಜಾರಿಯಲ್ಲಿ ಇರಲಿಲ್ಲ. ಆದರೆ ಕೋವಿಡ್ ಅವಧಿಯಲ್ಲಿ 25 ಮೃತ ನೇಕಾರರ ಕುಟುಂಬಗಳಿಗೆ ತಲಾ ರೂ 5 ಲಕ್ಷಗಳಂತೆ ರೂ 1.25 ಕೋಟಿ ಪರಿಹಾರ ವಿತರಿಸಲಾಗಿದೆ. ಈ ಪರಿಹಾರ ವಿತರಣೆ ಯೋಜನೆ ಮುಂದುವರಿಕೆಗೆ ಆರ್ಥಿಕ ಇಲಾಖೆ ಅನುಮೋದನೆಗೆ ಪ್ರಯತ್ನಿಸಲಾಗುವುದು ಎಂದರು. ಆತ್ಮಹತ್ಯೆ ಮಾಡಿಕೊಂಡ ನೇಕಾರನ ಪತ್ನಿಗೆ ಪಿಂಚಣಿ ಅಥವಾ ಮೃತರ ಮಕ್ಕಳಿಗೆ ಉಚಿತಿ ಶಿಕ್ಷಣ ನೀಡುವ ಯೋಜನೆ ಇಲ್ಲ. ಆದರೆ ರೂ 2,500ಗಳಿಂದ ರೂ 11,000ಗಳವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 2022-23ನೇ ಸಾಲಿನಲ್ಲಿ 3,664 ವಿದ್ಯಾರ್ಥಿಗಳಿಗೆ ರೂ 1.63 ಕೋಟಿ ಹಾಗೂ 2023-24ನೇ ಸಾಲಿನಲ್ಲಿ 3,689 ವಿದ್ಯಾರ್ಥಿಗಳಿಗೆ ರೂ 1.99 ಕೋಟಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ವಿವರಿಸಿದರು.
ನಾಲ್ಕು ಕೃಷಿ ಉತ್ಪನ್ನ ಯಶವಂತಪುರದಿಂದ ಶಿಫ್ಟ್
ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು.
ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು.
ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗಿದೆ. ಎಪಿಎಂಸಿಗಳನ್ನು ಹೊರತುಪಡಿಸಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕಾಯ್ದೆ ಅಡಿ ವಿವಿಧ ಅವಕಾಶ ಕಲ್ಪಿಸಿ 4 ಖಾಸಗಿ ಮಾರುಕಟ್ಟೆ ಹಾಘೂ 65 ನೇರ ಖರೀದಿ ಕೇಂದ್ರಗಳನ್ನು ನಡೆಸಲು ಲೈಸೆನ್ಸ್ ನೀಡಲಾಗಿದೆ ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications