ಈ ವರ್ಷದ ಬಜೆಟ್ ನಲ್ಲಿ 95000ಕೋಟಿ ರೂ. ಮೀಸಲು: ಮಹತ್ವ ಮಾಹಿತಿ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 28: ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95000ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. ಲಿಂಗ ತಾರಾತಮ್ಯ ಹೋಗಲಾಡಿಸಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ನಮ್ಮ ಸರ್ಕಾರ ಎಲ್ಲರನ್ನು ಒಳಗೊಂಡ, ಸಾಮಾಜಿಕ ಆರ್ಥಿಕ ಶಕ್ತಿ ನೀಡುತ್ತಿದೆ. ಜಾತಿ, ಲಿಂಗ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿಲ್ಲ. ಸಮಗ್ರ ಅಭಿವೃದ್ಧಿ ನಮ್ಮ ಗುರಿ. ಬಡವ ಬಲ್ಲಿದ ಎಂಬ ತಾರತಮ್ಯ ಹೋಗಲಾಡಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದರು.

ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ . ಐಸಿಡಿಎಸ್ ಕೇಂದ್ರ ಸರ್ಕಾರದ ಕಾರ್ಯಕ್ರಮವಾದರೂ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಕೊಡುತ್ತಿದೆ. ಕೇಂದ್ರದಿಂದ 2700 ರೂ ಬಂದರೆ, ರಾಜ್ಯ ಸರ್ಕಾರ 8500 ಒದಗಿಸುತ್ತಿದೆ. ಇಡೀ ದೇಶದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಹೆಚ್ಚಿನ ಗೌರವಧನವನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ ಎಂದರು.
ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಐಸಿಡಿಎಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿರುವ ರಾಜ್ಯಗಳಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಯಾದ ಮೇಲೆ ಉದ್ಯೋಗಕ್ಕೆ ಹೋಗುವ ಮಹಿಳೆಯರ ಪಾಲು ಶೇ 23% ಇದ್ದರೆ , ಗ್ರಾಮೀಣ ಭಾಗದಲ್ಲಿ 21% ಹೆಚ್ಚಾಗಿದೆ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.
ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ ಎಂದರು. ಮುಂದಿನ ದಿನಗಳಲ್ಲಿ ಮಕ್ಕಳು, ತಾಯಂದಿರ ಅಪೌಷ್ಟಿಕತೆ ತೊಲಗಿಸಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲಾಗುವುದು ಎಂದರು.ರಾಜ್ಯದ ಒಟ್ಟು 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ , ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ತರಗತಿಗಳನ್ನು ಇನ್ನೂ ಹೆಚ್ಚಿನ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಮಹಿಳೆಯರ ಬದುಕಿನಲ್ಲಿ ಚೈತನ್ಯ ತುಂಬಲು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದೆಂಬ ಸಾರ್ಥಕ ಉದ್ದೇಶವನ್ನು ಐಸಿಡಿಎಸ್ ಕಾರ್ಯಕ್ರಮ ಪೂರೈಸಿದೆ.
ಹೆಣ್ಣೊಂಬ್ಬಳು ವಿದ್ಯಾವಂತೆ ಯಾದರೆ ಇಡೀ ಕುಟುಂಬ ಶಿಕ್ಷಣ ಪಡೆಯುತ್ತದೆ. ನಮ್ಮ ಸರ್ಕಾರ ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಗೃಹಲಕ್ಷ್ಮಿಯೋಜನೆಯಡಿ 1 ಕೋಟಿ 26 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2000 ರೂ.ಗಳನ್ನು ಒದಗಿಸಲಾಗಿದೆ. ಹೆಣ್ಣುಮಕ್ಕಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕೆಂದು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬಂದು, ಸಮಾನ ಅವಕಾಶಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ.ಇಲ್ಲಿಯವರೆಗೆ ಗ್ಯಾರಂಟಿಗಳಿಗೆ ಸರ್ಕಾರ 1 ಲಕ್ಷ ನಾಲ್ಕು ಸಾವಿರ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರ ಕಣ್ಣು ತೆರೆಯಬೇಕು. ಬಿಜೆಪಿಯವರು, ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ವಿರೋಧಿಸಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಅಭಿವೃದ್ಧಿ ಯೋಜನೆಗೂ ವೆಚ್ಚ ಮಾಡಲಾಗುತ್ತಿದೆ. ಮಹಿಳೆಯರು ಸಬಲರಾದರೆ ಮಾತ್ರ ನಮಗೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications