ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ವೈ ಪದಚ್ಯುತಿಗೆ RSS ಸಮೀಪವರ್ತಿ ನಾಯಕರ ಪ್ರಯತ್ನ: ಗಂಭೀರ ಆರೋಪ

|
Google Oneindia Kannada News

ಬೆಂಗಳೂರು, ಆ 19: ದೇವರಜೀವನಹಳ್ಳಿ ಮತ್ತು ಕಾಡುಗೊಂಡನಹಳ್ಳಿ ಭಾಗದಲ್ಲಿ ಗಲಭೆ ನಡೆದು ಒಂದು ವಾರವಾದರೂ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಕಾವು ದಿನದಿಂದ ದಿನಕ್ಕೆ ಹೊಸಹೊಸ ರೂಪ ಪಡೆಯುತ್ತಿದೆ.

Recommended Video

ಗಣಪತಿ ಹಬ್ಬ ಮಾಡೋರು ಈ ನಿಯಮ ಪಾಲಿಸಲೇ ಬೇಕು | Oneindia Kannada

ಕಾಂಗ್ರೆಸ್ ಮತ್ತು ಬಿಜೆಪಿಯವರು ಸಮಿತಿಯನ್ನು ರಚಿಸಿಕೊಂಡು ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಬಂದಿದ್ದಾಗಿದೆ. ಇದರ ಜೊತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ವಿಸಿಟ್ ಹಾಕಿ ಬಂದಿದ್ದಾರೆ.

"1600 ಸಮಾಜಘಾತಕರ ವಿರುದ್ಧ 175 ಕ್ರಿಮಿನಲ್ ಕೇಸ್ ರದ್ದು"!

ಘಟನೆಯ ಸಂಬಂಧ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಲುಸಾಲು ಟ್ವೀಟ್ ಮಾಡಿದ್ದಾರೆ. ಜೊತೆಗೆ, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪದಚ್ಯುತಗೊಳಿಸಲು, ಬಿಜೆಪಿಯವರೇ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದಾರೆ ಎನ್ನುವ ಗಂಭೀರ ಟ್ವೀಟ್ ಅನ್ನು ಮಾಡಿದ್ದಾರೆ.

"ನಾವು ದೀಪ ಹಚ್ಚುವವರ ಪರವೇ ಹೊರತೂ, ಬೆಂಕಿ ಹಚ್ಚುವವರ ಪರವಲ್ಲ"

ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ:, "ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು @BJP4Karnataka ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು,ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ".

ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ

ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ

"ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ @BJP4Karnataka ನಾಯಕರು ತಲೆಕೆಡಿಸಿಕೊಂಡಿದ್ದಾರೆ"ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಎಸ್ವೈ ಪದಚ್ಯುತಿಗೆ ಆರ್ ಎಸ್ ಎಸ್ ಸಮೀಪವರ್ತಿ ನಾಯಕರ ಪ್ರಯತ್ನ

"@BJP4Karnataka ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. @BSYBJP ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ" ಇದು ಸಿದ್ದರಾಮಯ್ಯ ಮಾಡಿರುವ ಟ್ವೀಟ್.

ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು?

ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು?

"ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು?

ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ" - ಸಿದ್ದರಾಮಯ್ಯ ಟ್ವೀಟ್.

ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ

ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ

"ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ @BJP4Karnataka ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ?" - ಸಿದ್ದರಾಮಯ್ಯ ಟ್ವೀಟ್.

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ

"ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ?" ಇದು ಸಿದ್ದರಾಮಯ್ಯ ಮಾಡಿರುವ ಟ್ವೀಟ್.

English summary
RSS Close Aids Trying To Remove Yediyurappa From Chief Ministership:Siddaramaiah Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X