ಆರ್‌ಎಸ್‌ಎಸ್ ವಿಚಾರ; ಸಿ. ಟಿ. ರವಿಗೆ ಟ್ವೀಟ್ ಬಾಣ ಬಿಟ್ಟ ಎಚ್‌ಡಿಕೆ!

ಬೆಂಗಳೂರು, ಅಕ್ಟೋಬರ್ 06; 'ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು' ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಗೆ ತಿರುಗೇಟು ನೀಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ವಿಚಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮತ್ತು ಸಿ. ಟಿ. ರವಿ ನಡುವೆ ವಾಕ್ಸಮರ ನಡೆಯುತ್ತಿದೆ. ಬುಧವಾರ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಕ್ಸಮರ ಮುಂದುವರೆಸಿದ್ದಾರೆ.

ಆರ್‌ಎಸ್‌ಎಸ್‌ನವರು ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ ಎಂಬ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿ. ಟಿ. ರವಿ, "ರಾಷ್ಟ್ರೀಯ ಸ್ವಯಂ ಸೇವಕರು ಹಲವು ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ಸಂಘ ಸ್ವಯಂ ಸೇವಕರನ್ನು ನಿರ್ಮಾಣ ಮಾಡುತ್ತದೆ. ಅವರಿಗೆ ದೇಶ ಭಕ್ತಿಯ ಸಂಸ್ಕಾರ ನೀಡುತ್ತದೆ. ಇಷ್ಟೇ ಸಂಘದ ಕೆಲಸ, ಇದರಲ್ಲಿ ಹಿಡನ್ ಅಜೆಂಡಾ ಇಲ್ಲ" ಎಂದು ಸಮರ್ಥಿಸಿಕೊಂಡಿದ್ದರು.

ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ, 'ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ' ಎಂದು ಹೇಳಿದ್ದಾರೆ.

ನಾನು ಸತ್ಯದ ಪರ; ಕುಮಾರಸ್ವಾಮಿ

'ಸಿ. ಟಿ. ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ' ಎಂದು ಎಚ್‌. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

'ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇದಾ ನಿಮ್ಮ ಸಮಾಜ ಸೇವೆ?

ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ 'ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ?' ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಮಾಡಬಾರದು ಎಂದು ಸಲಹೆ

'ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ' ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ಗಳು

ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ಗಳು

'ಪ್ರಸ್ತುತ ದೇಶ ಹೋಗುತ್ತಿರುವ ಹಾದಿ ನೋಡಿದರೆ ಜನರ ಮುಂದೆ ಸತ್ಯ ಇಡುವುದು ಅತ್ಯಂತ ಅಗತ್ಯವೆಂದು ನನಗೆ ಅನಿಸಿತು. ವಾಸ್ತವವಾಗಿ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ. ಸತ್ಯ ಮುಚ್ಚಿಟ್ಟರೆ ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರಿಗೆ ಅಪಚಾರ ಮಾಡಿದಂತೆ ಆಗುತ್ತದೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

'ಯಾವತ್ತಿದ್ದರೂ ಜನರಿಗೆ ಸತ್ಯ ಗೊತ್ತಾಗಲೇಬೇಕು. ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ. ನನ್ನ ಹೇಳಿಕೆ ಯಾರ ಪರವೂ ಇಲ್ಲ ಅಥವಾ ವಿರೋಧವೂ ಇಲ್ಲ. ಸತ್ಯ ಚರ್ಚೆ ಆಗಬೇಕು ಎಂಬುದು ನನ್ನ ಅಭಿಲಾಷೆ. ನಾನು ಸತ್ಯದ ಪರ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಲಘುವಾಗಿ ನಾನು ಮಾತನಾಡಿಲ್ಲ

'ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೋರೋನ ಲಾಕ್ ಡೌನ್ ವೇಳೆಯಲ್ಲಿ ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆ' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+