BJP President: ಆರ್‌ಎಸ್‌ಎಸ್, ಕರಾವಳಿ ಹಿನ್ನೆಲೆಯವರಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನ?

ಬೆಂಗಳೂರು, ಜನವರಿ 04: ರಾಜ್ಯ ರಾಜಕಾರಣದಲ್ಲಿ ಮೂರು ಪಕ್ಷಗಳ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಚರ್ಚೆ ನಡೆಯುತ್ತಿದೆ. ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ದಿನದಿಂದಲೂ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದೆ.

ಹೌದು, ಕರ್ನಾಟಕ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ತಿಕ್ಕಾಟ ಜೋರಾಗಿದ್ದು, ಹೈಕಮಾಂಡ್​ಗೆ ದಿಕ್ಕುತೋಚದಂತಾಗಿದೆ. ಈಗಾಗಲೇ ಬಿ ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನ ಅಲಂಕರಿಸಿ ಬರೋಬ್ಬರಿ ಒಂದು ವರ್ಷ ಪೂರೈಸಿದ್ದು, ಜನವರಿಯಲ್ಲಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳು ಆಗಿವೆ ಎನ್ನುವ ಚರ್ಚೆ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್​ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ.

RSS leader V Sunil Kumar is likely to be elected as BJP state president

ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕುತ್ತಿದೆ. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಬಸನಗೌಡ ಪಾಟೀಲ್​ ಯತ್ನಾಳ್ ಪಟ್ಟು ಹಿಡಿದಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ.

ಜನವರಿಯಲ್ಲಿ ಮಹತ್ವದ ಬದಲಾವಣೆಗಳು ಆಗಲಿದೆ ಎಂದು ಯತ್ನಾಳ್​ ಅಂಡ್‌ ಟೀಂ ಹೇಳುತ್ತಿದೆ. ಈ ಎಲ್ಲಾ ಬೆಳವಣೆಗೆಗಳ ನಡುವೆ ಉತ್ತರ ಕರ್ನಾಟಕ ಭಾಗವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಬೇಕು ಎಂದು ಯಡಿಯೂರಪ್ಪ ಅವರ ವಿರೋಧಿ ಬಣ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದೆ. ಇನ್ನೂ ಬಿ ವೈ ವಿಜಯೇಂದ್ರ ಅವರನ್ನ ಕೆಳಗಿಳಿಸಲು ವಿರೋಧಿ ಬಣ ಬಹಿರಂಗವಾಗಿ ಪ್ರಯತ್ನಿಸುತ್ತಿದ್ದಾರೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ ಟಿ ರವಿ, ಅಶ್ವಥ್‌ ನಾರಾಯಣ್‌, ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ, ಅರವಿಂದ್‌ ಬೆಲ್ಲದ್‌ ಸೇರಿದಂತೆ ಹಲವು ನಾಯಕರು ರೇಸ್‌ ನಲ್ಲಿದ್ದಾರೆ.

ಕಮಲ ಕೋಟೆಯಲ್ಲಿನ ಈ ಎಲ್ಲಾ ಬೆಳವಣೆಗೆಗಳ ನಡುವೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ಆಗಮಿಸಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೇ ಹೊಸದಾಗಿ ಯಾರು ರಾಜ್ಯಾಧ್ಯಕ್ಷರಾದರೇ ಪಕ್ಷದಲ್ಲಿನ ನಾಯಕರ ಅಸಮಾಧಾನ ದೂರವಾಗಲಿದೆ ಎನ್ನುವ ಕುರಿತು ಆರ್‌ ಎಸ್‌ಎಸ್‌ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಆರ್‌ಎಸ್‌ಎಸ್‌ ಹಾಗೂ ಕರಾವಳಿ ಹಿನ್ನಲೆಯವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡುವ ಕುರಿತು ಕಮಲ ಪಾಳಯದಲ್ಲಿ ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆರ್‌ ಎಸ್‌ ಎಸ್‌ ಹಿನ್ನೆಲೆಯುಳ್ಳ ಮಾಜಿ ಸಚಿವ ಹಾಗೂ ಶಾಸಕರಾದ ವಿ ಸುನೀಲ್‌ ಕುಮಾರ್‌ ಅವರ ಹೆಸರು ಕೇಳಿ ಬರುತ್ತಿದೆ. ವಿ ಸುನೀಲ್‌ ಕುಮಾರ್‌ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡಿದ್ರೆ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ವಿರೋಧಿ ಬಣ ಫುಲ್‌ ಸೈಲೆಂಟ್‌ ಆಗುತ್ತದೆ. ಅಲ್ಲದೇ ಕರಾವಳಿ ಭಾಗದಲ್ಲಿ ಪಕ್ಷವನ್ನ ಇನ್ನಷ್ಟು ಸುಭದ್ರಗೊಳಿಸಲು ಹೆಚ್ಚು ಸಹಾಯಕವಾಗಲಿದೆ ಎಂಬುದು ಬಿಜೆಪಿ ಹೈಕಮಾಂಡ್‌ ನಾಯಕರ ಲೆಕ್ಕಾಚಾರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+