ಲಿಂಗಾಯತ ಮತ್ತು ಒಕ್ಕಲಿಗ ನಾಯಕತ್ವಕ್ಕೆ ಆರ್‌ಎಸ್‌ಎಸ್‌ನಿಂದ ಕಡಿವಾಣ- ಹಳ್ಳಿಹಕ್ಕಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಲಿಂಗಾಯತ ಮತ್ತು ಒಕ್ಕಲಿಗ ನಾಯಕತ್ವಕ್ಕೆ ಕಡಿವಾಣ ಹಾಕುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಎ.ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ವರುಣಾ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರ ವಿರುದ್ಧ ಎರಡು ಸಮುದಾಯಗಳಲ್ಲಿ ಉದಯೋನ್ಮುಖ ನಾಯಕರಾದ ವಿ.ಸೋಮಣ್ಣ ಮತ್ತು ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವ ಮೂಲಕ ಲಿಂಗಾಯತ ಮತ್ತು ಒಕ್ಕಲಿಗ ನಾಯಕತ್ವವನ್ನು ಹತ್ತಿಕ್ಕುವ ಹಿಡನ್ ಅಜೆಂಡಾವನ್ನು ಆರ್‌ಎಸ್‌ಎಸ್ ಅನುಸರಿಸುತ್ತಿದೆ ಎಂದು ಎ.ಎಚ್.ವಿಶ್ವನಾಥ್ ಆರೋಪಿಸಿದರು.

ಮೈಸೂರಿನಲ್ಲಿ ಶನಿವಾರ (ಏಪ್ರಿಲ್ 15) ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವನಾಥ್, ಆರ್‌ಎಸ್‌ಎಸ್‌ಗೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಶಾಸಕರು ಮಾತ್ರ ಬೇಕು, ಆದರೆ ನಾಯಕರಲ್ಲ. ವರುಣಾದಲ್ಲಿ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಾಗೂ ಕನಕಪುರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ.
ವರುಣಾದ ಲಿಂಗಾಯತರು ಮತ್ತು ಸುತ್ತೂರು ಮಠದ ಶ್ರೀಗಳು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಿದ್ದರೂ ಬಿಜೆಪಿಯು ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ ಎಂದು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ವಿಶ್ವನಾಥ್ ಕಿಡಿಕಾರಿದರು. ಅದೇ ರೀತಿ, ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಅಶೋಕ್ ಕಣಕ್ಕಿಳಿದಿದ್ದಾರೆ, ಅಲ್ಲಿ ಡಿಕೆ ಶಿವಕುಮಾರ್ ಅವರು ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಹೀಗೆ ಸ್ಥಳೀಯವಾಗಿ ಪ್ರಬಲ ಹೊಂದಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ವಿ.ಸೋಮಣ್ಣ ಮತ್ತು ಆರ್.ಅಶೋಕ್ ಉದಯೋನ್ಮುಖ ನಾಯಕರಾಗಿದ್ದಾರೆ ಎಂದು ಹಳ್ಳಿಹಕ್ಕಿ ಹೇಳಿದೆ.
ಬಿಜೆಪಿಯು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಯತ್ನಿಸುತ್ತಿದ್ದು, ತಲಾ ಎರಡು ಕ್ಷೇತ್ರಗಳಲ್ಲಿ ಸೋಮಣ್ಣ ಮತ್ತು ಅಶೋಕ್ ಅವರನ್ನು ಕಣಕ್ಕಿಳಿಸುವ ಮೂಲಕ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ ಎಂದು ಆರೋಪಿಸಿದರು.
"ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಕೂಡ ಸೋಮಣ್ಣ ಅವರನ್ನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಅವಶ್ಯಕತೆ ಏನಿದೆ ಎಂದು ಕೇಳಿದ್ದರು" ಎಂದು ವಿಶ್ವನಾಥ್ ಹೇಳಿದ್ದಾರೆ. ಆದರೆ, ಸೋಮಣ್ಣ ಅವರನ್ನು ವರುಣಾದಿಂದ ನಾಮನಿರ್ದೇಶನ ಮಾಡುವ ಬಿಜೆಪಿ ಹೈಕಮಾಂಡ್ ನಿರ್ಧಾರವನ್ನು ತಿರಸ್ಕರಿಸುವ ಆಯ್ಕೆ ಇರಲಿಲ್ಲ ಎಂದು ಅವರು ಹೇಳಿದರು.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.












Click it and Unblock the Notifications