ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರ ಗಮನಕ್ಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 16; ಕೋವಿಡ್ ಪ್ರಕರಣಗಳು ಹೆಚ್ಚಿರುವ ಕೇರಳ ಮತ್ತು ಮಹಾರಾಷ್ಟ್ರಗಳಿಂದ ಕರ್ನಾಟಕಕ್ಕೆ ಆಗಮಿಸುವ ರೈಲು ಪ್ರಯಾಣಿಕರ ಮೇಲೆ ವಿಶೇಷ ಕಣ್ಗಾವಲು ಇಡಲಾಗಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ರೈಲು ಪ್ರಯಾಣಿಕರ ಮೇಲೆ ನಿಗಾ ವಹಿಸುವಂತೆ ಕರ್ನಾಟಕ ಸರ್ಕಾರ ರೈಲ್ವೆ ಇಲಾಖೆಗೆ ಮನವಿ ಮಾಡಿತ್ತು.

ನೈಋತ್ಯ ರೈಲ್ವೆ ಸೋಮವಾರ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ 31/7/2021ರ ಮಾರ್ಗಸೂಚಿಯಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವ ರೈಲು ಪ್ರಯಾಣಿಕರು 72 ಗಂಟೆಗಳ ಮೊದಲಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರಬೇಕು.

ಕೋವಿಡ್ 3ನೇ ಅಲೆ; ರೈಲ್ವೆ ಇಲಾಖೆಗೆ ಕರ್ನಾಟಕದ ಮನವಿ ಏನು? ಕೋವಿಡ್ 3ನೇ ಅಲೆ; ರೈಲ್ವೆ ಇಲಾಖೆಗೆ ಕರ್ನಾಟಕದ ಮನವಿ ಏನು?

ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಈ ಕುರಿತು ನೈಋತ್ಯ ರೈಲ್ವೆ, ಕೇಂದ್ರಿಯ ರೈಲ್ವೆ, ಪಶ್ಚಿಮ ರೈಲ್ವೆಗೆ ನಿರ್ದೇಶನಗಳನ್ನು ನೀಡಿದ್ದಾರೆ. ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರೈಲು ಹತ್ತಲು ಅವಕಾಶ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು-ಶಿವಮೊಗ್ಗ ನಡುವೆ ಮತ್ತೊಂದು ರೈಲು; ವೇಳಾಪಟ್ಟಿ ಬೆಂಗಳೂರು-ಶಿವಮೊಗ್ಗ ನಡುವೆ ಮತ್ತೊಂದು ರೈಲು; ವೇಳಾಪಟ್ಟಿ

RT-PCR Negative Test Report Must For Passengers To Karnataka

ಈ ಕುರಿತು ರೈಲು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಟಿಟಿಇ ರೈಲು ನಿಲ್ದಾಣದಲ್ಲಿಯೇ ಪ್ರಯಾಣಿಕರು ಆರ್‌ಟಿಪಿಸಿಆರ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಾತ್ರ ಇದು ಅನ್ವಯವಾಗಲಿದೆ.

 ಕೇರಳ ಗಡಿ ಬಂದ್ ವಿಚಾರ: ಕರ್ನಾಟಕ ಸರ್ಕಾರಕ್ಕೆ ಕೇರಳ ಹೈಕೋರ್ಟ್ ತರಾಟೆ ಕೇರಳ ಗಡಿ ಬಂದ್ ವಿಚಾರ: ಕರ್ನಾಟಕ ಸರ್ಕಾರಕ್ಕೆ ಕೇರಳ ಹೈಕೋರ್ಟ್ ತರಾಟೆ

ಕೋವಿಡ್ ಹರಡುವಿಕೆ ತಡೆಯಲು ರೈಲ್ವೆ ಇಲಾಖೆ ರಾಜ್ಯ ಸರ್ಕಾರಕ್ಕೆ ಅಗತ್ಯ ಸಹಕಾರವನ್ನು ನೀಡಲಿದೆ. ರೈಲು ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ತಪಾಸಣೆ ನಡೆಸಲು ಸೂಕ್ತ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಸಂಜೀವ್ ಕಿಶೋರ್ ಹೇಳಿದ್ದಾರೆ.

ಪ್ರಯಾಣಿಕರ ತಪಾಸಣೆ ನಡೆಸಲು ಸ್ಥಳ ನೀಡುವ ಕುರಿತು, ಆರ್‌ಟಿಸಿಆರ್ ವರದಿ ಇರುವುದನ್ನು ಖಚಿತಪಡಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವಂತೆ ವಿಭಾಗಗಳಿಗೆ ಸಂಜೀವ್ ಕಿಶೋರ್ ನಿರ್ದೇಶವನ್ನು ನೀಡಿದ್ದಾರೆ. ಬಸ್, ವಾಹನಗಳ ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರನ್ನು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಕಳೆದ ವಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರೈಲ್ವೆ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ರೈಲು ಹತ್ತುವ ಮೊದಲೇ ಪ್ರಯಾಣಿಕರು 72 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರುವ ಕುರಿತು ಖಚಿತಪಡಿಸಿಕೊಳ್ಳಬೇಕು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿಯನ್ನು ಮಾಡಿದ್ದರು.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯಕ್ಕೆ ಆಗಮಿಸುವವರು 72 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ವರದಿಯನ್ನು ಕಡ್ಡಾಯವಾಗಿ ತರಬೇಕು ಎಂದು ಆದೇಶ ಹೊರಡಿಸಿತ್ತು.

ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೊತೆ ಗಡಿ ಹಂಚಿಕೊಳ್ಳುವ ಕರ್ನಾಟಕ 8 ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಮವಾರದ ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ 1065 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ.

ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಜ್ಯದ ಪಾಸಿಟಿವಿಟಿ ದರ ಶೇ 0.93 ಆಗಿದೆ. ಆದರೆ ಅಕ್ಕಪಕ್ಕದ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣ ಹೆಚ್ಚಳವಾಗಿರುವುದು ಕರ್ನಾಟಕದಲ್ಲಿ ಆತಂಕಕ್ಕೆ ಕಾರಣವಾಗಿದೆ.

Recommended Video

Virat Kohli ಪಂದ್ಯ ಮುಗಿದ ಮೇಲೆ ಗೆಲುವಿನ ಮುಖ್ಯ ಕಾರಣ ತಿಳಿಸಿದರು | Oneindia Kannada

ಕೇರಳದಲ್ಲಿ ಪುನಃ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಸೋಮವಾರದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 12,294 ಹೊಸ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ. 18,542 ಜನರು ಗುಣಮುಖಗೊಂಡಿದ್ದಾರೆ. 142 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 1,72,239 ಆಗಿದೆ. ರಾಜ್ಯದ ಪಾಸಿಟಿವಿಟಿ ದರ ಶೇ 14.03 ಆಗಿದೆ.

English summary
The South Western Railway (SWR) said that RT-PCR negative test report must for passengers to Karnataka from Kerala and Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X