ಗೌರಿ ಲಂಕೇಶ್ ಹತ್ಯೆ ಹಿಂದೆ ಸೇನೆಯ ನಿವೃತ್ತ ಕರ್ನಲ್?
ಬೆಂಗಳೂರು, ಜುಲೈ 6: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಸೇರಿದಂತೆ ನಾಲ್ವರು ಪ್ರಭಾವಿ ಮುಖಂಡರ ಕೈವಾಡ ಇರುವ ಬಗ್ಗೆಯೂ ವಿಶೇಷ ತನಿಖಾ ದಳದ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಮುಖರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಂದೇಹದಲ್ಲಿ ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ.
ಹಿಂದೂ ಧರ್ಮದ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಗೌರಿ ಅವರನ್ನು ಮುಗಿಸುವಂತೆ ಅಮೋಲ್ ಕಾಳೆಗೆ ನಾಲ್ವರು ಆದೇಶ ನೀಡಿದ್ದರು ಎಂದು ಶಂಕಿಸಲಾಗಿದೆ.

ಬಲಪಂಥೀಯ ಸಂಘಟನೆಯಲ್ಲಿ ಪ್ರಮುಖ ಹುದ್ದೆಯಲ್ಲಿ ಇರುವ ನಾಲ್ವರು ಈ ಸಂಚಿನಲ್ಲಿ ಭಾಗಿಯಾದ ಅನುಮಾನವಿದೆ. ಅವರಲ್ಲಿ ಒಬ್ಬರು ನಿವೃತ್ತ ಕರ್ನಲ್ ಆಗಿದ್ದಾರೆ. ಕೊಲೆಗಾರನಿಗೆ ಬಂದ ಫೋನ್ ಕರೆ ಅವರಿಂದ ಬಂದಿದೆ ಎಂದು ನಾವು ನಂಬಿದ್ದರೂ ಅದಕ್ಕೆ ಬಲವಾದ ಸಾಕ್ಷ್ಯ ಲಭ್ಯವಿಲ್ಲ. ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ನಿರತರಾಗಿದ್ದೇವೆ ಎಂದು ಎಸ್‌ಐಟಿಯ ಮೂಲಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಕನಿಷ್ಠ ಮೂರು ಮಂದಿ ಭಾಗಿಯಾಗಿದ್ದಾರೆ. ಅವರ ಬಂಧನವಾಗದಂತೆ ತಡೆದು ತಲೆಮರೆಸಿಕೊಳ್ಳಲು ಸಂಘಟನೆಯು ಸಹಾಯ ಮತ್ತು ಹಣಕಾಸಿನ ನೆರವು ನೀಡುತ್ತಿದೆ ಎನ್ನಲಾಗಿದೆ.
ಅಮೋಲ್ ಕಾಳೆ, ಗೌರಿ ಅವರ ಹತ್ಯೆಯ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತಂದಿದ್ದ. ಈ ಕೊಲೆಯ ಸಂಚನ್ನು ರೂಪಿಸಿದ್ದು ಆತನೇ ಆಗಿದ್ದರೂ, ಬೇರೆ ಸಂಚುಕೋರರ ಪರವಾಗಿ ಈ ಕೊಲೆ ಮಾಡಿದ್ದಾನೆ ಎಂದು ಎಸ್‌ಐಟಿ ಅನುಮಾನ ವ್ಯಕ್ತಪಡಿಸಿದೆ.
ಇಡೀ ಕಾರ್ಯಾಚರಣೆಗೆ ಬಲಪಂಥೀಯ ಸಂಘಟನೆಯೊಂದು ಹಣಕಾಸಿನ ನೆರವು ನೀಡಿದೆ.
ಗೌರಿ ಅವರ ಹತ್ಯೆ ಸಂಚು ಆರಂಭವಾದ 2017ರ ಜನವರಿಯಿಂದಲೂ ಅಮೋಲ್ ಕಾಳೆಗೆ ಪ್ರತಿ ತಿಂಗಳೂ ಕನಿಷ್ಠ 1.25 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ತನ್ನ ಕೆಲಸಕ್ಕೆ ಬೇಕಾದವರನ್ನು ನೇಮಿಸಿಕೊಳ್ಳಲು ಮತ್ತು ಇತರೆ ಕೆಲಸಗಳಿಗಾಗಿ ಹಣ ನೀಡಲಾಗುತ್ತಿತ್ತು ಎಂದು ಮೂಲಗಳು ಹೇಳಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications