ಆರ್‌ಟಿಇ: ಅರ್ಜಿ ಸಲ್ಲಿಕೆ ದಿನಾಂಕ ಮಾ.15ರವರೆಗೆ ವಿಸ್ತರಣೆ
ಬೆಂಗಳೂರು, ಮಾ.2: ಶಿಕ್ಷಣ ಹಕ್ಕು ಕಾಯ್ದೆ (RTE) ಯಡಿ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
2022-23ನೇ ಸಾಲಿಗೆ ಆರ್‌ಟಿಇ ಅಡಿ ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನವಾಗಿತ್ತು. ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾರ್ಚ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ದಾಖಲಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಚ್ಛಿಸುವ ಪೋಷಕರು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‌ಸೈಟ್ http://www.schooleducation.kar.nic.in/ ಮೂಲಕ ವಿವರ ಸಲ್ಲಿಕೆ ಮಾಡಬಹುದು.

RTE 2022ನೇ ಸಾಲಿನ ವೇಳಾಪಟ್ಟಿ:
ಫೆ.3ರಿಂದ ಮಾರ್ಚ್ 15: ಆರ್‌ಟಿಇ ಅಡಿ ಉಚಿತ ಸೀಟಿಗಾಗಿ ಅರ್ಜಿ ಸಲ್ಲಿಕೆಗೆ ಅವಧಿ
ಫೆ.4ರಿಂದ ಮಾರ್ಚ್ 16: ಸಲ್ಲಿಕೆಯಾಗಿರುವ ಅರ್ಜಿಗಳ ಮೂಲ ದಾಖಲೆಗಳ ನೈಜತೆ ಪರಿಶೀಲನೆ
ಮಾ.25: ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ
ಏ.4: ಆನ್‌ಲೈನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ
ಏ.5ರಿಂದ 16: ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ
ಮೇ 4: ಆನ್‌ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ
ಮೇ 5ರಿಂದ 16: ಎರಡನೇ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ದಾಖಲಾಗುವ ಅವಧಿ.












Click it and Unblock the Notifications