ಕೇರಳ, ಮಹಾರಾಷ್ಟ್ರದಿಂದ ಬರಲು ಹೊಸ ಮಾರ್ಗಸೂಚಿ
ಬೆಂಗಳೂರು, ನವೆಂಬರ್ 28; ಓಮಿಕ್ರಾನ್ ರೂಪಾಂತರಿ ಪತ್ತೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ.
ಭಾನುವಾರ ಕರ್ನಾಟಕ ಸರ್ಕಾರ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು 72 ಗಂಟೆಗಳ ಮೊದಲ ಆರ್‌ಟಿಪಿಸಿಆರ್ ಪರೀಕ್ಷೆ ವರದಿಯನ್ನು ಕಡ್ಡಾಯವಾಗಿ ಗಡಿಯಲ್ಲಿ ಹಾಜರುಪಡಿಸಬೇಕು ಎಂದು ಹೇಳಿದೆ.
ಎರಡು ಡೋಸ್ ವ್ಯಾಕ್ಸಿನ್ ಪಡೆದಿದ್ದರೂ ಸಹ ಗಡಿಯಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹಾಜರುಪಡಿಸುವುದುದ ಕಡ್ಡಾಯವಾಗಿದೆ. ಕೇರಳದಿಂದ ಕಳೆದ 15 ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಿವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು.

ಮಾರ್ಗಸೂಚಿ ಪ್ರಮುಖ ಅಂಶಗಳು
* ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರು 72 ಗಂಟೆಗಳ ಒಳಗಿನ ಆರ್‌ಟಿಪಿಸಿಆರ್ ವರದಿಯನ್ನು ತೋರಿಸುವುದು ಕಡ್ಡಾಯವಾಗಿದೆ.
* ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ವೈದ್ಯಕೀಯ, ಪ್ಯಾರಾ ಮೆಡಿಕಲ್ ಕಾಲೇಜುಗಳಿಗೆ 15 ದಿನಗಳ ಹಿಂದೆ (ನವೆಂಬರ್ 12 ರಿಂದ 27ರ ತನಕ) ಆಗಮಿಸಿದವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು.
* ಯಾವುದೇ ಕ್ಲಸ್ಟರ್‌ನಲ್ಲಿ ಕೋವಿಡ್ ಸೋಂಕು ಪತ್ತೆಯಾದರೆ ಮಾರ್ಗಸೂಚಿಗಳ ಅನ್ವಯ ಚಿಕಿತ್ಸೆ ನೀಡಬೇಕು. ನೆಗೆಟಿವ್ ವರದಿ ಬಂದವರು ಸಹ ಕ್ವಾರಂಟೈನ್ ಆಗಬೇಕು. ಏಳು ದಿನಗಳ ಬಳಿಕ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಬೇಕು. ಕಂಟೈನ್ಮೆಂಟ್ ಝೋನ್ ಮಾರ್ಗಸೂಚಿ ಪಾಲನೆ ಮಾಡಬೇಕು.
* ಕೇರಳ ಗಡಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು (ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು) ಗಡಿಯಲ್ಲಿ ಚೆಕ್ ಪೋಸ್ಟ್ ತೆರೆದಿರುವ ಕುರಿತು ನಿಗಾವಹಿಸುವುದು. ರಾಜ್ಯಕ್ಕೆ ಆಗಮಿಸುವ ಎಲ್ಲರಿಗೂ ಮಾರ್ಗಸೂಚಿ ಅನ್ವಯ ಸ್ಕ್ರೀನಿಂಗ್ ಮಾಡುತ್ತಿರುವ ಕುರಿತು ಖಚಿತಪಡಿಸಿಕೊಳ್ಳುವುದು.
* ಪ್ರತಿದಿನ ಕರ್ನಾಟಕಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಉದ್ಯಮಿಗಳು, ಸಾಮಾನ್ಯ ಜನರು 14 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿವುದು. ಗಡಿಗಳಲ್ಲಿ ಅದನ್ನು ಕಡ್ಡಾಯವಾಗಿ ತೋರಿಸುವುದು.
ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ; ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಆರ್. ಟಿ. ನಗರದ ನಿವಾಸದಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು.
"ಕೇರಳ ರಾಜ್ಯದಿಂದ ಬರುವವರಲ್ಲಿ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆ ವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್‌ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು" ಎಂದರು.
"ದಕ್ಷಿಣ ಆಫ್ರಿಕಾ, ಹಾಂಕಾಂಗ್ ದೇಶಗಳಲ್ಲಿ ಕೋವಿಡ್‌ನ ಹೊಸ ಪ್ರಬೇಧ ಕಾಣಿಸಿಕೊಂಡಿದೆ. ಈ ಮೂರು ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಗಳು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
"ಧಾರವಾಡ, ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್‌ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್‌ಗಳನ್ನು ಕಂಟೈನ್ಮೆಂಟ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಎಸ್‌ಡಿಎಂ ಕಾಲೇಜನ ವೈದ್ಯರು, ನರ್ಸ್‌ಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರ ರೋಗಿಗಳನ್ನು ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೈನ್ಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೇ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ" ಎಂದು ತಿಳಿಸಿದರು.
"ಕೋವಿಡ್‌ನ ಹೊಸ ಪ್ರಬೇಧದ ಸಂಪರ್ಕಕ್ಕೆ ಬಂದಿರುವ ದೇಶದಿಂದ ವಿಮಾನಗಳ ಮೂಲಕ ನಗರಕ್ಕೆ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ" ಎಂದರು.
"ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಅನ್ನು ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಕೂಡ ಎರಡು ಡೋಸ್ ಪಡೆದಿರಬೇಕು. ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು" ಎಂದು ತಿಳಿಸಿದರು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications