ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂದ್ ಗೆ ಬೆಂಬಲ ಇದೆಯೋ, ಇಲ್ವೋ : ನಿಲುವು ಸ್ಪಷ್ಟ ಪಡಿಸಿದ ಆಡಳಿತಾರೂಢ ಕಾಂಗ್ರೆಸ್

ಬಂದ್ ಗೆ ಬೆಂಬಲ ಇದೆಯೋ, ಇಲ್ವೋ : ನಿಲುವು ಸ್ಪಷ್ಟ ಪಡಿಸಿದ ಆಡಳಿತಾರೂಢ ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ಜ 7: ಹನ್ನೆರಡು ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ಕಾರ್ಮಿಕ ಸಂಘಟನೆಗಳು ಕರೆನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಆಡಳಿತಾರೂಢ ಕಾಂಗ್ರೆಸ್ ತನ್ನ ಬೆಂಬಲವನ್ನು ಸೂಚಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ, ಕಾರ್ಮಿಕರ ಹೋರಾಟಕ್ಕೆ ನಾವು ಬೆಂಬಲ ನೀಡಲಿದ್ದೇವೆ ಎಂದಿದ್ದಾರೆ.

ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ

Ruling Congress Party supports two days nation wide strike called by trade unions

ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನದ ಮುಷ್ಕರಕ್ಕೆ ಕರೆನೀಡಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ಕೇಂದ್ರದ ಜನವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲವೂ ಇದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜನವರಿ 8, 9ಕ್ಕೆ ದೇಶವ್ಯಾಪಿ ಮುಷ್ಕರ : ಏನಿರುತ್ತೆ, ಏನಿರಲ್ಲ?ಜನವರಿ 8, 9ಕ್ಕೆ ದೇಶವ್ಯಾಪಿ ಮುಷ್ಕರ : ಏನಿರುತ್ತೆ, ಏನಿರಲ್ಲ?

ಜನವರಿ 8 ರ ಬೆಳಿಗ್ಗೆ 6 ರಿಂದ ಜನವರಿ 9 ರ ಸಂಜೆ 5 ರವರೆಗೆ ಬಂದ್ ನಡೆಯಲಿದೆ. ಮುಷ್ಕರದ ವೇಳೆ ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬುಲೆನ್ಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.

ಜನವರಿ 8, 9ರ ಭಾರತ್ ಬಂದ್ : ಯಾರು ಏನು ಹೇಳಿದರು?ಜನವರಿ 8, 9ರ ಭಾರತ್ ಬಂದ್ : ಯಾರು ಏನು ಹೇಳಿದರು?

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಷ್ಕರಕ್ಕೆ ಬೆಂಬಲ ನೀಡಿರುವುದರಿಂದ ಜೊತೆಗೆ, ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

English summary
Congress Party will supports two days nation wide strike called by trade unions, KPCC Chief Dinesh Gundurao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X