ಸದ್ಯದಲ್ಲೇ ದುಬೈಯಲ್ಲಿ ರಾಫೆಲ್ ಜೊತೆ ರಮ್ಯಾ ಮದುವೆ! ಸುದ್ದಿ ನಿಜಾನಾ?
ಬೆಂಗಳೂರು, ಆಗಸ್ಟ್ 14: ಕನ್ನಡ ನಟಿ, ಕಾಂಗ್ರೆಸ್ ನ ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಸದ್ಯದಲ್ಲೇ ದುಬೈಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ತಮ್ಮ ಬಹುಕಾಲದ ಸ್ನೇಹಿತ ಪೋರ್ಚುಗಲ್ ನ ರಾಫೆಲ್ ಎಂಬ ಉದ್ಯಮಿಯನ್ನು ರಮ್ಯಾ ಕೈಹಿಡಿಯಲಿದ್ದಾರೆ ಎನ್ನಲಾಗುತ್ತಿದೆ.
ಕನ್ನಡ ಚಿತ್ರರಂಗಕ್ಕೆ ಅಭಿ, ಅರಸು, ಜೊತೆ ಜೊತೆಯಲಿ, ಮುಸ್ಸಂಜೆ ಮಾತಲ್ಲಿ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನೀದಿದ್ದ ರಮ್ಯಾ, ಕೊನೆಯದಾಗಿ ಕಾಣಿಸಿಕೊಂಡಿದ್ದು ನಾಗರಹಾವು ಸಿನೆಮಾದಲ್ಲಿ. ನಂತರ ರಾಜಕೀಯ ಬದುಕಿನತ್ತಲೇ ಹೆಚ್ಚು ಗಮನ ಹರಿಸಿದ ಅವರು 2013 ರಲ್ಲಿ ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ನಂತರ 2014 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಮ್ಯಾ, ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಹೆಡ್ ಆಗಿ ಸಾಕಷ್ಟು ಖ್ಯಾತಿ ಗಳಿಸಿದ್ದರು. ಆದರೆ 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡ ನಂತರ ಅವರು ಇದ್ದಕ್ಕಿದ್ದಂತೆ ಟ್ವಿಟ್ಟರ್ ಖಾತೆಯನ್ನು ಮುಚ್ಚಿ, ನಾಪತ್ತೆಯಾಗಿದ್ದರು. ಅವರು ವಿಶ್ರಾತಿಗಾಗಿ ತೆರಳಿದ್ದಾರೆ ಎಂದು ಕಾಂಗ್ರೆಸ್ ನ ಕೆಲವು ಮೂಲಗಳು ತಿಳಿಸಿದ್ದವು. ಆದರೆ ಇದೀಗ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ ಎನ್ನಲಾಗುತ್ತಿದ್ದು, ಈ ಸುದ್ದಿಯ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications