MP Tejasvi Surya: ಪ್ರಖ್ಯಾತ ಸೆಲೆಬ್ರಿಟಿಯೊಂದಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ
ಜೆಪಿಪಿಯ 'ಯುವ ಮತ್ತು ಹುರುಪಿನ' ಸಂಸದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ ಖಚಿತವಾಗಿದ್ದು, ತೇಜಸ್ವಿ ಸೂರ್ಯ ಅವರ ಮದುವೆ ಯಾವಾಗ ಎನ್ನುವ ಪ್ರಶ್ನೆಯನ್ನ ಹಲವು ಬಾರಿ ಕೇಳಿದರು, ಮೌನವಾಗಿರುತ್ತಿದ್ದ ಅವರು, ಇದೀಗ ಸದ್ದಿಲ್ಲದೆ ಮದುವೆಗೆ ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಹೌದು, ಸಂಸದ ತೇಜಸ್ವಿ ಸೂರ್ಯ ಚೆನ್ನೈ ಮೂಲದ ಗಾಯಕ ಮತ್ತು ಭರತನಾಟ್ಯ ಕಲಾವಿದ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿಯ 'ಯಂಗ್ ಆ್ಯಂಡ್ ಡೈನಾಮಿಕ್' ಮತ್ತು 'ಮೋಸ್ಟ್ ಎಲಿಜಿಬಲ್ ಬ್ಯಾಚುಲರ್' ಸಂಸದ ಎಂದೇ ಕರೆಯಿಸಿಕೊಂಡಿರುವ ತೇಜಸ್ವಿ ಸೂರ್ಯ ಅವರಿಗೆ ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಕೊನೆಗೂ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ತೇಜಸ್ವಿ ಸೂರ್ಯ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನ ಮೂಲದ ಸ್ಕಂದಕುಮಾರ್ ಎನ್ನುವವರನ್ನು ಸಂಸದ ತೇಜಸ್ವಿ ಸೂರ್ಯ ಅವರು ವರಿಸಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದ್ದು, ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆಯ ಮುದ್ರೆ ಹಾಕಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ.
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿದ್ದು, ಮಾರ್ಚ್ 4 ರಂದು ಬೆಂಗಳೂರಿನಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಆರಂಭವಾಗಿವೆಯಂತೆ. ಇನ್ನೂ ಶಿವಶ್ರೀ ಸ್ಕಂದ ಪ್ರಸಾದ್ ಅವರು ಕರ್ನಾಟಕ ಸಂಗೀತ ಗಾಯಕಿ ಮತ್ತು ಭರತನಾಟ್ಯ ಕಲಾವಿದರು. ಅವರು ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿದ್ದಾರೆ.
ಶಿವಶ್ರೀ ಸ್ಕಂದ ಪ್ರಸಾದ್ ಅವರು ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ. ಸೈಕ್ಲಿಂಗ್, ಟ್ರೆಕ್ಕಿಂಗ್ ಮತ್ತು ವಾಕಿಂಗ್‌ನ್ನು ಸಹ ಅವರು ಇಷ್ಟಪಡುತ್ತಾರೆ. ಪೊನ್ನಿಸ್ ಸೆಲ್ವನ್ - ಭಾಗ 2 ರ ಕನ್ನಡ ಆವೃತ್ತಿಯಲ್ಲಿ ಹಾಡನ್ನೂ ಇವರು ಹಾಡಿದ್ದಾರೆ. ಶಿವಶ್ರೀ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.












Click it and Unblock the Notifications