ಬೆಂಗಳೂರು-ಮಂಗಳೂರು ನಡುವೆ ಹೆಚ್ಚು ರೈಲು ಓಡಿಸಿ

ಬೆಂಗಳೂರು, ಜೂ.23 : ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಓಡಿಸುವ ಕುರಿತು ಪರಿಶೀಲನೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ರೈಲ್ವೆ ಇಲಾಖೆಗೆ ಸೂಚನೆ ನೀಡಿದೆ. ಹೆಚ್ಚುವರಿ ರೈಲು ಓಡಿಸಲು ಆದೇಶ ನೀಡಬೇಕು ಎಂದು ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್ ಇತ್ಯರ್ಥಗೊಳಿಸಿದೆ.

ವಕೀಲರಾದ ಲತಾ ರಮೇಶ್ ಮತ್ತು ಎಸ್.ಪ್ರದೀಪ್ ಕುಮಾರ ಕಲ್ಲೂರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. [ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಏಕಿಲ್ಲ?]

high court

ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ಕಾಮಗಾರಿ ಪೂರ್ಣಗೊಳ್ಳುವ ತನಕ ಈ ಮಾರ್ಗದಲ್ಲಿ ಹೆಚ್ಚುವರಿ ರೈಲು ಓಡಿಸುವಂತೆ ಕೋರ್ಟ್ ಸೂಚನೆ ನೀಡಿತು. ಅರ್ಜಿದಾರರು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಬೇಕು. ಇಲಾಖೆ ತಾಂತ್ರಿಕ ಅಂಶಗಳನ್ನು ಆಧರಿಸಿ ರೈಲು ಓಡಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಕೋರ್ಟ್‌ ಆದೇಶದಲ್ಲಿ ಸ್ಪಷ್ಟಪಡಿಸಿದೆ. [ಶಿರಾಡಿಯಲ್ಲಿ ವಾಹನ ಸಂಚಾರಕ್ಕೆ ಹೊಸ ಮುಹೂರ್ತ]

ರೈಲು ಓಡಿಸಲು ಮನವಿ ಮಾಡಲಾಗಿತ್ತು : ವಕೀಲರು ಸಲ್ಲಿಸಿದ್ದ ಅರ್ಜಿಯಲ್ಲಿ ಆರು ತಿಂಗಳಿನಲ್ಲಿ ಶಿರಾಡಿ ಘಾಟ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ಹೇಳಿತ್ತು. ಆದರೆ, ಇದುವರೆಗೂ ಕಾಮಗಾರಿ ಮುಗಿದಿಲ್ಲ. ಇದರಿಂದ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ವಿವರಿಸಲಾಗಿತ್ತು. [ಶಿರಾಡಿ ಘಾಟ್ ಕಾಮಗಾರಿ ಚಿತ್ರಗಳು]

ಈ ಮಾರ್ಗದಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ವಿಶೇಷ ರೈಲು ಸೇವೆಯನ್ನು ಆರಂಭಿಸಲು ರೈಲ್ವೆ ಇಲಾಖೆಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ರೈಲು ಓಡಿಸುವ ಕುರಿತು ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿರುವ ಕೋರ್ಟ್ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

ಅಂದಹಾಗೆ ಕಾಂಕ್ರಿಟ್ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟ್‌ನಲ್ಲಿ 2015ರ ಜ.2ರಿಂದಲೇ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. 2015ರ ಮೇ 15ರೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿತ್ತು. ಆದರೆ, ಗುಡುವು ಮುಗಿದರೂ ಕಾಮಗಾರಿ ಪೂರ್ಣಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+