SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ

ಬೆಂಗಳೂರು, ಡಿಸೆಂಬರ್‌ 10: ಬಹುದಿನಗಳಿಂ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು (ಮಂಗಳವಾರ) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಎಸ್‌ ಎಂ ಕೃಷ್ಣರವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

S M Krishna s funeral will be held tomorrow in his hometown of Mandya district

ಇನ್ನೂ ಬೆಳಗಾವಿಯ ಶೂನ್ಯ ರೆಸಾರ್ಟ್ನಲ್ಲಿ ಇಂದು ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಸ್.ಎಂ.ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+