ರಾಜಾಜಿನಗರದಿಂದ ಸಾ.ರಾ.ಗೋವಿಂದು ಚುನಾವಣಾ ಕಣಕ್ಕೆ?

Posted By: Gururaj
Subscribe to Oneindia Kannada

ಬೆಂಗಳೂರು, ಮಾರ್ಚ್ 29 : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೆಡಿಎಸ್ ಪಕ್ಷದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಅವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಜೆಡಿಎಸ್ ಸೇರಿದಂತೆ ಎರಡು ಪಕ್ಷಗಳಿಂದ ಅವರಿಗೆ ಆಹ್ವಾನ ಬಂದಿದೆ.

ಮಲ್ಲೇಶ್ವರಂನಿಂದ ರಾಕ್‌ಲೈನ್ ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿ?

ರಾಜಾಜಿನಗರ ಕ್ಷೇತ್ರದಿಂದ ಜೆಡಿಎಸ್ ಪಕ್ಷ ಸಾ.ರಾ.ಗೋವಿಂದು ಅವರಿಗೆ ಟಿಕೆಟ್ ನೀಡಲಿದೆಯೇ? ಕಾದು ನೋಡಬೇಕು. ಆನಂದ್ ಎನ್ನುವವರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಯಾರಿಗೆ ಟಿಕೆಟ್‌? ಎಂದು ಕಾದು ನೋಡಬೇಕಿದೆ.

Sa Ra Govindu may contest for Karnataka assembly elections 2018

ರಾಜಾಜಿನಗರ ಕ್ಷೇತ್ರ ಸದ್ಯ ಬಿಜೆಪಿ ವಶದಲ್ಲಿದೆ. ಮಾಜಿ ಸಚಿವ ಸುರೇಶ್ ಕುಮಾರ್ ಅವರು ಕ್ಷೇತ್ರದ ಶಾಸಕರು. ಈ ಬಾರಿಯೂ ಅವರಿಗೆ ಟಿಕೆಟ್ ಖಚಿತವಾಗಿದೆ. ಕಾಂಗ್ರೆಸ್‌ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ?. ಯಾರಿ ಅಭ್ಯರ್ಥಿ ಎಂದು ಕಾದು ನೋಡಬೇಕಿದೆ.

ರಾಜಾಜಿನಗರ ಕ್ಷೇತ್ರದಲ್ಲಿ ಜೆ.ಡಿ.ಎಸ್ ನಿಂದ ಸಾ.ರಾ.ಗೋವಿಂದು ಸ್ಪರ್ಧೆ?

ಕರ್ನಾಟಕ ಚಲನಚಿತ್ರ ವಾಣಿಜ್ಯ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಅವರು, ಕನ್ನಡ ಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಚಿತ್ರ ನಿರ್ಮಾಪಕರೂ ಹೌದು. ಜೆಡಿಎಸ್ ಏಪ್ರಿಲ್ 2ನೇ ವಾರದಲ್ಲಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಆಗ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Film Chamber of Commerce (KFCC) president, Kannada Film producer Sa.Ra. Govindu may contest for Karnataka assembly elections 2018 from Rajajinagar assembly constituency, Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ