Sachin Pilot: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಸಚಿನ್ ಪೈಲಟ್ ಔಟ್, ಜಗದೀಶ್ ಶೆಟ್ಟರ್ ಇನ್

ಬೆಂಗಳೂರು, ಏಪ್ರಿಲ್. 19: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಆದರೆ, ಇದರಲ್ಲಿ ಸಚಿನ್ ಪೈಲಟ್ ಹೆಸರು ಕಾಣುತ್ತಿಲ್ಲ. ಅದಕ್ಕೆ ಬದಲಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಕಾಣಿಸಿಕೊಂಡಿದೆ.

ಇತ್ತೀಚೆಗಷ್ಟೇ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಕಾರಣಕ್ಕೆ ಕಮಲ ಬಿಟ್ಟು ಕಾಂಗ್ರೆಸ್‌ ಸೇರಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೆಸರು ಪಟ್ಟಿಯಲ್ಲಿದ್ದರೆ, ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ರಹಸ್ಯ ವೈಷಮ್ಯದಿಂದ ಸುದ್ದಿಯಾಗುತ್ತಿರುವ ಸಚಿನ್‌ ಪೈಲಟ್‌ ಹೆಸರು ಪಟ್ಟಿಯಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.

Sachin Pilot Out from Congress Star Campaigners list

ಅಶೋಕ್ ಗೆಹ್ಲೋಟ್ ಸೇರಿದಂತೆ ಇತರ ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಛತ್ತೀಸ್‌ಗಢದ ಭೂಪೇಶ್ ಬಘೇಲ್ ಮತ್ತು ಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿ ಪಕ್ಷದ 40 ನಾಯಕರು ಸ್ಟಾರ್ ಪ್ರಚಾರಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ನಲವತ್ತು ಮಂದಿ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೋಡಗಿಸಿಕೊಳ್ಳಲಿದ್ದಾರೆ.

ಜಗದೀಶ್ ಶೆಟ್ಟರ್ ಹಲವಾರು ದಶಕಗಳಿಂದ ಜನಸಂಘ ಮತ್ತು ಬಿಜೆಪಿಯ ಭಾಗವಾಗಿದ್ದರು. ಅವರು ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಹವಣಿಸುತ್ತಿದೆ.

2018 ರ ಕರ್ನಾಟಕ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದ ಸಚಿನ್ ಪೈಲಟ್ ಈ ಬಾರಿ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. 45 ವರ್ಷದ ಅವರು ಇತ್ತೀಚೆಗೆ ಮುಕ್ತಾಯಗೊಂಡ ಅಸ್ಸಾಂ ಚುನಾವಣೆಯ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ರಾಜ್ಯದಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿರುವ ಬೆನ್ನಲ್ಲೇ ಅವರನ್ನು ಪ್ರಚಾರಕೆ ಪಟ್ಟಿಯಿಂದ ಹೊರಗಿಡಲಾಗಿದೆ.ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆ ಮಾಡಲು ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನು, ನಾಗಾಲ್ಯಾಂಡ್‌ನಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದ, ಕಾಂಗ್ರೆಸ್‌ನ ಗುಜರಾತ್ ತಾರಾ ಪ್ರಚಾರಕರ ಪಟ್ಟಿಯಿಂದ ಹೊರಹಾಕಲಾಗಿದ್ದ ಶಶಿ ತರೂರ್ ಅವರನ್ನು ರಾಜ್ಯದಲ್ಲಿ ಅವಕಾಶ ನೀಡಲಾಗಿದೆ. ಈ ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪಿ ಚಿದಂಬರಂ, ಜೈರಾಮ್ ರಮೇಶ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇತರರು ಇದ್ದಾರೆ.

ಕರ್ನಾಟಕ ಕಾಂಗ್ರೆಸ್‌ನ ಪ್ರಮುಖರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವೀರಪ್ಪ ಮೊಯ್ಲಿ, ಎಂಬಿ ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ಕೂಡ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ. ರಾಮಲಿಂಗಾ ರೆಡ್ಡಿ, ಡಿ.ಕೆ.ಸುರೇಶ್, ಜಿ.ಸಿ.ಚಂದ್ರಶೇಖರ್, ಸೈಯದ್ ನಸೀರ್ ಹುಸೇನ್, ಜಮೀರ್ ಅಹ್ಮದ್ ಖಾನ್, ಎಚ್.ಎಂ.ರೇವಣ್ಣ, ಉಮಾಶ್ರೀ, ರೇವಂತ್ ರೆಡ್ಡಿ, ರಮೇಶ್ ಚೆನ್ನಿತ್ತಲ, ಶ್ರೀನಿವಾಸ್ ಬಿ.ವಿ., ರಾಜ್ ಬಬ್ಬರ್, ಮೊಹಮ್ಮದ್ ಅಜರುದ್ದೀನ್, ರಮ್ಯಾ, ಇಮ್ರಾನ್ ಪ್ರತಾಪಘರ್ಹಿ, ಕನ್ಹಯ್ಯಾ ಕುಮಾರ್, ರೂಪಾ ಶಶಿಕಧರ್ ಮತ್ತು ಸಾಧು ಕೋಕಿಲ ಹೆಸರುಗಳು ಪಟ್ಟಿಯಲ್ಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+