ಸಾಕಷ್ಟು ಹಣ ವೆಚ್ಚ ಮಾಡಿ ಆಮಿಷ ಒಡ್ಡಿದ ಕಾಂಗ್ರೆಸ್-ಬಿಜೆಪಿ ಮುಂದೆ ಸೋಲಾಯಿತು: HDK ಬೇಸರ
ಬೆಂಗಳೂರು, ಮೇ 25: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023 ಯಲ್ಲಿ ನಿರೀಕ್ಷೆಗಿಂತ ಕಡಿಮೆ ಸೀಟು ಪಡೆಯುವ ಮೂಲಕ ಹೀನಾಯ ಸೋಲು ಕಂಡ ಜೆಡಿಎಸ್ ಇದೀಗ ಜೆಡಿಎಸ್ ಆತ್ಮಾವಲೋಕನ ಸಭೆ ನಡೆಸಿತು. ಈ ವೇಳೆ ಭಾವುಕರಾದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮುಂಬರುವ ದಿನಗಳಲ್ಲಿ ರಾಜೀ ಇಲ್ಲದೇ ಪಕ್ಷವನ್ನು ಬಲಿಷ್ಟಗೊಳಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಹೇರಳವಾಗಿ ಹಣ ವೆಚ್ಚ ಮಾಡಿವೆ. ಆಮಿಷಗಳನ್ನು ಒಡ್ಡಿದವು. ಅವುಗಳಿಗೆ ಪೈಪೋಟಿ ಕೊಡಲು ನನ್ನಿಂದ ಸಾಧ್ಯವಾಗಲಿಲ್ಲ. ನಾನು ಅಂತಹ ಕೆಲಸ ಮಾಡಲು ಹೋಗಲಿಲ್ಲ. ವೈಯಕ್ತಿಕ ನೆಲೆಗಟ್ಟಿನಲ್ಲಿ ಯಾರನ್ನೂ ನಾವು ಟೀಕೆ ಮಾಡಲಿಲ್ಲ, ತೇಜೋವಧೆ ಮಾಡಲಿಲ್ಲ, ಅಭಿವೃದ್ಧಿ ವಿಷಯ ಇಟ್ಟುಕೊಂಡು ಹೋದೆವು. ಅದಕ್ಕಾಗಿ ನಾವು ಸೋಲಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಚುಣಾವಣೆಯಲ್ಲಿ ನಾವು ವಿಜಯ ಸಾಧಿಸಿದರೆ ಗೆಲುವಿನ ಕಾರಣ ಹುಡುಕುವುದಿಲ್ಲ. ಸೋತರೆ ಮಾತ್ರ ಕಾರಣಗಳನ್ನು ಹುಡುಕಬೇಕಾಗುತ್ತದೆ. ನಾನು ಹುಡುಕುತ್ತಿದ್ದೇನೆ, ಆ ಕಾರಣಗಳೇನು? ಎನ್ನುವುದು ನನಗೆ ಗೊತ್ತಿದೆ. ಈ ಸೋಲಿನಿಂದಲೇ ಮುಂದಿನ ದಿನಗಳಲ್ಲಿ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇವೆ ಎಂದರು.

ಎಚ್‌ಡಿಕೆ ತಿಳಿಸಿದ ಸೋಲಿನ ಕಾರಣಗಳು ಇವು
ಕೊನೆ ಕ್ಷಣದಲ್ಲಿ ನಾನು ನನ್ನ ಅಭ್ಯರ್ಥಿಗಳಿಗೆ ನಿರೀಕ್ಷಿತ ಆರ್ಥಿಕ ನೆರವು ಕೊಡಲಾಗಲಿಲ್ಲ. ಅಂತಿಮ ಕ್ಷಣದಲ್ಲಿ ನನ್ನ ಪಕ್ಷಗಳ ಅಭ್ಯರ್ಥಿಗಳಿಗೆ ನೆರವು ಕೊಡುವುದು ಕಷ್ಟವಾಯಿತು. ನಿಮ್ಮ ಸಹಾಯಕ್ಕೆ ನಿಲ್ಲದೆ ಹೋದ ಕಾರಣಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ. ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿತು. ಸುಳ್ಳು ಗ್ಯಾರಂಟಿಗಳು ಹಾಗೂ ಕೂಪನ್ ಗಳನ್ನು ಕೊಟ್ಟು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್ ಕುತಂತ್ರದಿಂದ ಗೆದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಕುತಂತ್ರಗಾರಿಕೆ ಮಾಡಿದರು ಎಂದು ಟೀಕಿಸಿದರು.
ಬಿಜೆಪಿಯಿಂದ ನಲುಗಿದ ಒಂದು ಸಮಾಜದ ಪರವಾಗಿ ನಾವು ದನಿ ಎತ್ತಿದೆವು. ಅಚಲವಾಗಿ ಬೆಂಬಲ ಕೊಟ್ಟೆವು, ಹೆಜ್ಜೆ ಹೆಜ್ಜೆಗೂ ಅವರಿಗೆ ಬಿಜೆಪಿ ಸರ್ಕಾರ ತೊಂದರೆ ಕೊಟ್ಟಾಗ ಧೈರ್ಯವಾಗಿ ನಿಂತೆವು. ಆರ್ಥಿಕ ಸಮಸ್ಯೆಗಳೂ ನಮ್ಮ ಸೋಲಿಗೆ ಕಾರಣವಾಗಿದೆ. ಅಭ್ಯರ್ಥಿಗಳ ಖರ್ಚಿಗೆ ನಾವು ಹಣ ಕೊಡಲಿಲ್ಲ. ಬಿಜೆಪಿ ಕಾಂಗ್ರೆಸ್ ಪಕ್ಷಗಳಿಗೆ ಸರಿ ಸಮವಾಗಿ ಖರ್ಚು ಮಾಡಲು ನಮ್ಮಿಂದ ಆಗಲಿಲ್ಲ. ಕೇವಲ 600 ಮತಗಳಲ್ಲಿ ಸೋತ ಕುಮಟಾ ಕ್ಷೇತ್ರದ ಸೂರಜ್ ನಾಯಕ್ ಸೋನಿ ಅವರ ಸೋಲು ನನಗೆ ಅತೀವ ನೋವು ಉಂಟು ಮಾಡಿದೆ ಎಂದು ವಿಷಾಧಿಸಿದರು.

2023 ಪಲಿತಾಂಶದಿಂದ ಫಲಿತಾಂಶದಿಂದ ಧೃತಿಗೆಡಬೇಕಿಲಿಲ್ಲ. 1989ರಲ್ಲಿ ದೇವೇಗೌಡರು ಎರಡು ಕ್ಷೇತ್ರಗಳಲ್ಲಿ ಸೋತಿದ್ದರು. ಆ ನಂತರ ಐದು ವರ್ಷಗಳಲ್ಲಿ ದೇವೇಗೌಡರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ ರಾಜ್ಯ ಸರ್ಕಾರ ರಚನೆಯಾಗಿತ್ತು. ಇಂಥ ಸೋಲು ಶಾಶ್ವತ ಅಲ್ಲ, ಹಾಗಂತ ಮೈಮರೆಯುವುದು ಬೇಡ ಎಂದು ತಮ್ಮ ಮುಖಂಡರನ್ನು ಎಚ್ಚರಿಸಿದರು.
ಲೋಕಸಭೆ ಚುನಾವಣೆ ನಂತರ ಮುಂದೇನು?
2024ರ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಕಾಂಗ್ರೆಸ್ ಸರ್ಕಾರದ ಭವಿಷ್ಯ ನಿಂತಿದೆ. ಈ ಸರ್ಕಾರ ಇರಬಹುದು ಅಥವಾ ಹೋಗಬಹುದು. ನಾನೇನು ಭವಿಷ್ಯ ಹೇಳುತ್ತಿಲ್ಲ, ಆ ನಂತರ ಏನೆಲ್ಲಾ ಬೆಳೆವಣಿಗೆ ನಡೆಯಿತ್ತೂ ಗೊತ್ತಿಲ್ಲ. 135 ಕ್ಷೇತ್ರ ಗೆದ್ದ ಕಾಂಗ್ರೆಸ್‌ನಲ್ಲಿ ವಿಶ್ವಾಸದ ಕೊರತೆ ಇದೆ. ಜನರ ಕೆಲಸ ಮಾಡಲು ಅವರಿಗೆ ಆಗುತ್ತಿಲ್ಲ. ಆದರೆ ನಾವು ಸಂಘಟನೆ ಕಡೆ ಗಮನಕ್ಕೆ ಕೊಡೋಣ, ವಿಷಯಾಧಾರಿತವಾಗಿ ನಾವು ಹೋರಾಟ ನಡೆಸಬೇಕು ಎಂದು ಮುಖಂಡರನ್ನು ಹುರಿದುಂಬಿಸಿದರು.
ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡುವಲ್ಲಿ, ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಲೋಪ ಎಸಗಿರುವ ಪಕ್ಷದ ಜಿಲ್ಲಾ ಅಧ್ಯಕ್ಷರುಗಳನ್ನು ಮಾಜಿ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. ಅಧ್ಯಕ್ಷಗಿರಿ ಎಂದರೆ ಸ್ವಂತ ಜಹಗೀರು ಅಲ್ಲ. ಸಂಘಟನೆಯನ್ನು ಸರಿಯಾಗಿ ಮಾಡದೇ, ಸಮರ್ಥವಾಗಿ ಕೆಲಸವನ್ನು ನಿಭಾಯಿಸಿಲ್ಲ. ಎಲ್ಲಾ ಹಂತಗಳಲ್ಲಿಯೂ ಸಂಘಟನೆ ಸೋತಿದೆ, ನಾನೇ ಅಭ್ಯರ್ಥಿ ಹುಡುಕಿ ಕೊಡಬೇಕಾದ ಪರಿಸ್ಥಿತಿ ಬಂದಿದೆ, ಹಾಗಾದರೆ ಜಿಲ್ಲಾಧ್ಯಕ್ಷರು ಮಾಡಿದ್ದೇನು? ಎಂದು ಚಳಿ ಬಿಡಿಸಿದರು.
ಪಕ್ಷ-ಚುನಾವಣೆ ವೇಳೆ ಆರ್ಥಿಕವಾಗಿ ನಾನೆಷ್ಟು ಕಷ್ಟಪಟ್ಟೆ ಎನ್ನುವುದು ನನಗಷ್ಟೇ ಗೊತ್ತು. ಆ ವೇಳೆ ಯಾರು ನನ್ನ ನೋವು ಕೇಳಲು ಬರಲಿಲ್ಲ. ಹಿಂದೆ ಯಾರನ್ನಾದರೂ ಹಾಳು ಮಾಡಬೇಕಾದರೆ ಹಳೆಯ ಲಾರಿ ಕೊಡಿಸು ಎನ್ನುವ ಮಾತಿತ್ತು. ಈಗ ಯಾರ ಮನೆಯನ್ನಾದರೂ ಹಾಳು ಮಾಡಬೇಕಾದರೆ ಅವರನ್ನು ರಾಜಕೀಯಕ್ಕೆ ಕರೆದುಕೊಂಡು ಬಂದು ಅಭ್ಯರ್ಥಿ ಮಾಡು ಎನ್ನುವಂತೆ ಆಗಿದೆ. ಹೀಗಾಗಿ ನಿಮ್ಮನ್ನು ಮತ್ತೆ ಅಭ್ಯರ್ಥಿಗಳಾಗಿ ಎನ್ನುವ ಧೈರ್ಯ ನನ್ನಲ್ಲಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಗ್ಯಾರಂಟಿಗಳ ವಿರುದ್ಧ ಜೆಡಿಎಸ್ ಹೋರಾಟ
ಹಣದಿಂದ ಚುನಾವಣೆ ನಡೆಸಲು, ರಾಜಕೀಯ ಮಾಡಲು ಆಗದು. ಜನರ ಮನಸ್ಸು ಗೆದ್ದು ರಾಜಕಾರಣ ಮಾಡಬೇಕು. ಈಗ ಐದು ಗ್ಯಾರಂಟಿ ಜಾರಿ ಮಾಡಿದ್ದ ಕಾಂಗ್ರೆಸ್ ಇದೀಗ ಷರತ್ತು ಅನ್ವಯ ಅನ್ನುತ್ತಿದೆ. ನನಗೂ ಉಚಿತ, ನಿನಗೂ ಉಚಿತ ಅಂದವರು ಷರತ್ತಿನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್, ಖರ್ಗೆಯವರ ಮಾತನಾಡಿದ್ದು ನನೆಪಿದೆ. ಈ ಬಗ್ಗೆ ನಾವು ಆಂದೋಲನವನ್ನೇ ಮಾಡಬೇಕು. ಜನರ ಜತೆ ನಿಲ್ಲಬೇಕು ಎಂದು ಹೋರಾಟ ಕುರಿತು ತಿಳಿಸಿದರು.
ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ನೆನೆಗುದಿಗೆ ಬಿದ್ದಿದೆ. ಚುನಾವಣೆ ಹತ್ತಿರಕ್ಕೆ ಬಂದಾಗ ಬಂದು ಗೋಳಾಡಿ ಬೀ ಫಾರಂ ತೆಗೆದುಕೊಂಡು ಹೋಗುತ್ತೀರಿ, ಆಮೇಲೆ ಯಾವನೋ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತೀರಿ ಎಂದು ಮುಂಡರ ಮೇಲೆ ಕುಮಾರಸ್ವಾಮಿ ಕೂಗಾಡಿದರು. ಇನ್ನು ಮುಂದೆ ಸಂಘಟನೆ ಬಗ್ಗೆ ನಿರ್ಲಕ್ಷ್ಯ ಮಾಡುವ ಹಾಗಿಲ್ಲ. ನಗರದ ನಾಲ್ಕು ವಿಭಾಗಕ್ಕೆ ನಾಲ್ವರು ಅಧ್ಯಕ್ಷರನ್ನು ಮಾಡಿ ಆದೇಶ ಹೊರಡಿಸಿ ವೇದಿಕೆಯ ಮೇಲೆ ಕೂತಿದ್ದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಭೆ ಉದ್ದೇಶಿಸಿ ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲ ನೂತನ ಶಾಸಕರು, ಮಾಜಿ ಶಾಸಕರು, ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications