ಸದಾನಂದ ಗೌಡ VS ಯತ್ನಾಳ್: ಕರ್ನಾಟಕ ಬಿಜೆಪಿಯಲ್ಲಿ ಶಿಸ್ತಿಲ್ಲ ಅಂತಿದ್ದಾರೆ ಮಾಜಿ ಮುಖ್ಯಮಂತ್ರಿ!
ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕದ ಬಿಜೆಪಿ ನಾಯಕರಿಗೆ ಬಿಸಿ ತುಪ್ಪವಾಗಿದ್ದಾರೆ. ತಮ್ಮದೇ ಪಕ್ಷದ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸುತ್ತಾ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಸುದ್ದಿಯಲ್ಲಿದ್ದಾರೆ. ಆದ್ರೆ ಈ ಸಮಯದಲ್ಲೇ ಮಾಜಿ ಸಿಎಂ ಸದಾನಂದ ಗೌಡ, ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದರೆ ಸದಾನಂದ ಗೌಡರು ಹೇಳಿದ್ದೇನು? ಕರ್ನಾಟಕ ಬಿಜೆಪಿಯಲ್ಲಿ ಶಿಸ್ತಿಲ್ಲ ಎಂದಿದ್ದೇಕೆ ಮಾಜಿ ಸಿಎಂ?
ಇನ್ನೇನು 2024ರ ಲೋಕಸಭೆ ಚುನಾವಣೆ ಹತ್ತಿರ ಬಂದೇ ಬಿಟ್ಟಿದೆ. ಹೀಗಾಗಿ ನಿರೀಕ್ಷೆ ಕೂಡ ಡಬಲ್ ಆಗಿದೆ. ಅದರಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ, 2024ರ ಲೋಕಸಭೆ ಚುನಾವಣೆ ಅಗ್ನಿಪರೀಕ್ಷೆ ಎನ್ನಬಹುದು. ಹೀಗಾಗಿ ಈ ಚುನಾವಣೆಯಲ್ಲಿ ಭರ್ಜರಿ ಗೆಲುವನ್ನ ಸಾಧಿಸಲು ಸಿಕ್ಕಾಪಟ್ಟೆ ಎಫರ್ಟ್ ಹಾಕುತ್ತಿದ್ದಾರೆ ಬಿಜೆಪಿ ನಾಯಕರು.

ಹೀಗಿದ್ದಾಗಲೇ ಕರ್ನಾಟಕ ಕೂಡ 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಕಾರಣಕ್ಕೆ ಇಲ್ಲಿಂದ ಸಾಧ್ಯವಾದಷ್ಟು ಹೆಚ್ಚು ಸ್ಥಾನ ಗೆದ್ದು ಹೋಗಬೇಕಾಗಿದೆ ಬಿಜೆಪಿ. ಹೀಗೆ ಇಷ್ಟೆಲ್ಲಾ ಪ್ರಯತ್ನದ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ನೀಡುತ್ತಿರುವ ಹೇಳಿಕೆ ಬಿರುಗಾಳಿ ಎಬ್ಬಿಸಿದೆ. ಆ ಬಗ್ಗೆ ಮಾಜಿ ಸಿಎಂ ಸದಾನಂದ ಗೌಡ ಮಾತನಾಡಿದ್ದಾರೆ. ಹಾಗಾದ್ರೆ ಇದೀಗ ಯತ್ನಾಳ್ ಬಗ್ಗೆ ಸದಾನಂದ ಗೌಡ ಹೇಳಿದ್ದೇನು?
ಬಿಜೆಪಿ ಒಳಗೆ ಶಿಸ್ತು ಇಲ್ಲವಾ?
ಸದಾನಂದ ಗೌಡ ಅವರು ಈಗಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಹೀಗಾಗಿ ಸಿಕ್ಕಾಪಟ್ಟೆ ಕುತೂಹಲ ಮೂಡಿದೆ. ಹೀಗಿದ್ದಾಗಲೇ ನಿನ್ನೆಯಷ್ಟೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಬಿಜೆಪಿ ರಾಜ್ಯ ನಾಯಕರ ವಿರುದ್ಧವೇ ಭ್ರಷ್ಟಾಚಾರ ಆರೋಪ ಹೊರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ ಅವರು ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಬೇಸರ ಹೊರಹಾಕಿದ್ದಾರೆ. ಅಲ್ಲದೆ ಪಕ್ಷದ ಕಾರ್ಯಕರ್ತರು ಈ ಕುರಿತಾಗಿ ತಮ್ಮನ್ನು ಪ್ರಶ್ನೆ ಮಾಡುತ್ತಿರುವ ಬಗ್ಗೆ ಸದಾನಂದ ಗೌಡ ಮಾಹಿತಿ ನೀಡಿದ್ದಾರೆ.

ಕಾರ್ಯಕರ್ತರ ಪ್ರಶ್ನೆಗೆ ಏನ್ ಹೇಳೋದು?
ಅಂದಹಾಗೆ ಈಗ ಕಾರ್ಯಕರ್ತರು ಕೇಳುತ್ತಿರುವ ಪ್ರಶ್ನೆ ಬಗ್ಗೆ, ಪ್ರಸ್ತಾಪ ಮಾಡಿರುವ ಮಾಜಿ ಸಿಎಂ ಸದಾನಂದ ಗೌಡ ಅವರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಿ ಇಷ್ಟುದಿಗಳೇ ಕಳೆದರೂ ಶಿಸ್ತು ಮೂಡಿಲ್ಲ. ಈ ಬಗ್ಗೆ ಕಾರ್ಯಕರ್ತರು ಪ್ರಶ್ನೆ ಮಾಡ್ತಿದ್ದಾರೆ. ಕೇಂದ್ರದಿಂದ ನಾಯಕರು ಎಲ್ಲಾ ಬೆಳವಣಿಗೆ ಬಗ್ಗೆ ಚರ್ಚೆ ಮಾಡುತ್ತಿಲ್ವಾ? ಎಂದು ಖುದ್ದು, ಕರ್ನಾಟಕ ಬಿಜೆಪಿ ಕಾರ್ಯಕರ್ತರು ಕೇಳ್ತಿದ್ದಾರೆ ಎಂದಿದ್ದಾರೆ ಮಾಜಿ ಸಿಎಂ. ಈ ಮೂಲಕ ಕರ್ನಾಟಕ ಬಿಜೆಪಿ ಒಳಗೆ ಎದ್ದ ಅಸಮಾಧಾನದ ಬೆಂಕಿ ಮತ್ತಷ್ಟು ಸ್ಫೋಟಗೊಳ್ಳವ ಸೂಚನೆ ಸಿಕ್ಕಿದೆ.
ಶಾಸಕ ಯತ್ನಾಳ್ ವಿರುದ್ಧ ಕ್ರಮ?
ಇನ್ನು ಮತ್ತೊಂದು ಕಡೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವರ್ತನೆ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದಾರೆ. ಸಾಕಷ್ಟು ನಾಯಕರು ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು, ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಮೂಲಕ ಯತ್ನಾಳ್ ವಿರುದ್ಧವು ಕ್ರಮ ಪಕ್ಕಾನಾ? ಎಂಬ ಕುತೂಹಲ ಹೆಚ್ಚಾಗಿದೆ. ಒಟ್ನಲ್ಲಿ ಲೋಕಸಭೆ ಚುನಾವಣೆಗೆ ಈಗ ದಿನಗಣನೆ ಆರಂಭವಾಗಿರುವ ಸಮಯದಲ್ಲೇ, ಕರ್ನಾಟಕ ಬಿಜೆಪಿಯಲ್ಲಿ ಸಂಚಲನ ಸೃಷ್ಟಿ ಆಗಿದೆ. ಹೀಗಾಗಿ ಬಿಜೆಪಿ ಕೇಂದ್ರ ನಾಯಕರು ಏನ್ ಮಾಡ್ತಾರೆ? ಅಂತ ಕಾದು ನೋಡಬೇಕಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications