Get Updates
Get notified of breaking news, exclusive insights, and must-see stories!

Sadananda Gowda: ಕರ್ನಾಟಕದ ನಾಯಕರನ್ನು ಬಿಜೆಪಿ ಹೈಕಮಾಂಡ್‌ ನಡೆಸಿಕೊಳ್ಳುತ್ತಿರುವುದು ಹೇಗೆ? ಸದಾನಂದ ಗೌಡ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 11: ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಸದಾನಂದ ಗೌಡ ಅವರು ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಬಿಜೆಪಿ ಹೈಕಮಾಂಡ್‌ ನಮ್ಮ ರಾಜ್ಯದ ನಾಯಕರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲವೆಂದು ಹೇಳಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿಯ ಉನ್ನತ ನಾಯಕತ್ವವು ಕರ್ನಾಟಕದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.

Sadananda Gowda says BJP leadership did not take Karnataka cadre into confidence

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡರು ಬುಧವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆ ಬಳಿಕ ಸದಾನಂದ ಗೌಡ ಅವರು ಬಿಜೆಪಿ ಹೈಕಮಾಂಡ್‌ ವಿರುದ್ಧ ವ್ಯಾಪಕ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಜ್ಯ ನಾಯಕರ ಬಗ್ಗೆ ಯಾವುದೇ ಅಸಮಾಧಾನ ಇಟ್ಟುಕೊಳ್ಳಬಾರದು ಎಂದು ಕೇಂದ್ರ ನಾಯಕತ್ವವನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ, ಬಿಜೆಪಿ ಹೈಕಮಾಂಡ್‌ ಕರ್ನಾಟಕದ ನಾಯಕರನ್ನು ಪರಿಗಣಿಸದೇ ಹೋದರೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ನಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ.

Sadananda Gowda says BJP leadership did not take Karnataka cadre into confidence

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡರು, ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ರಾಜ್ಯ ಬಿಜೆಪಿ ನಾಯಕರನ್ನು ಕೇಂದ್ರ ನಾಯಕರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಈ ಬಗ್ಗೆ ರಾಜ್ಯ ನಾಯಕರಲ್ಲಿ ಕೇಂದ್ರ ನಾಯಕರ ವಿರುದ್ಧ ಅಸಮಾಧಾನವಿದೆ ಎಂದು ತಿಳಿಸಿದ್ದಾರೆ.

ವಿವಿಧ ಕಾರಣಗಳಿಂದ ನಾವು ಚುನಾವಣೆಯಲ್ಲಿ ಸೋತಿರುವುದು ನಿಜ. ಇದರಿಂದ ಕೋಪಗೊಂಡಿರುವ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ವಿರೋಧ ಪಕ್ಷದ ನಾಯಕರು ಮತ್ತು ಪಕ್ಷದ ಅಧ್ಯಕ್ಷರ ನೇಮಕವನ್ನು ವಿಳಂಬ ಮಾಡುವುದು ಸರಿಯಲ್ಲ ಎಂದು ಮಾಜಿ ಕೇಂದ್ರ ಸಚಿವರೂ ಆಗಿರುವ ಸದಾನಂದ ಗೌಡ ಹೇಳಿದ್ದಾರೆ.

ಕೇಂದ್ರ ನಾಯಕರ ನಡೆಯು ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಸದಾನಂದ ಗೌಡರ ಸುದ್ದಿಗೋಷ್ಠಿಯ ಕೆಲ ಗಂಟೆಗಳ ಬಳಿಕ ಕೇಂದ್ರ ನಾಯಕತ್ವವು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದಿತ್ತು. ಆ ನಂತರ ಮೇ ತಿಂಗಳಿನಿಂದ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇತ್ತು. ಆದರೆ, ವಿರೋಧ ಪಕ್ಷದ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಜುಲೈನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಸಭೆಯಲ್ಲಿ ಪಕ್ಷದ ಹಂಗಾಮಿ ನಾಯಕರನ್ನಾಗಿ ನೇಮಿಸಲಾಯಿದೆ.

ಕರ್ನಾಟಕ ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸುವಂತೆ ಕೇಂದ್ರ ನಾಯಕತ್ವಕ್ಕೆ ಸದಾನಂದ ಗೌಡ ಅವರು ಮನವಿ ಮಾಡಿದ್ದಾರೆ. 'ಇಂದಿಗೂ ನಾನು ಕರ್ನಾಟಕದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಕೇಂದ್ರ ನಾಯಕರಲ್ಲಿ ಮನವಿ ಮಾಡುತ್ತೇನೆ. ವಿಧಾನಸಭೆ ಚುನಾವಣೆಯಲ್ಲಿ ನಾವು ಸೋತಿದ್ದರೂ ಲೋಕಸಭೆ ಚುನಾವಣೆಯಲ್ಲಿ ಆಸಕ್ತಿಯಿಂದ ಕೆಲಸ ಮಾಡುತ್ತೇವೆ' ಎಂದು ಅವರು ಭರವಸೆ ನೀಡಿದ್ದಾರೆ.

ಚುನಾವಣಾ ರಾಜಕೀಯದಿಂದ ನಿವೃತ್ತಿಯ ಬಗ್ಗೆ ಮಾತನಾಡಿದ ಅವರು, ತಮ್ಮ ನಿರ್ಧಾರದ ಹಿಂದೆ ಯಾವುದೇ ಬಾಹ್ಯ ಒತ್ತಡವಿಲ್ಲ ಎಂದು ಹೇಳಿದ್ದಾರೆ.

'ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. 30 ವರ್ಷಗಳಿಂದ ನನ್ನ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಬಿಎಸ್ ಯಡಿಯೂರಪ್ಪ ನಂತರ ಪಕ್ಷದಲ್ಲಿ ನಾನೇ ನಂಬರ್ ಒನ್ ಫಲಾನುಭವಿ' ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಬಿಜೆಪಿ ನಾಯಕತ್ವವು ಸದಾನಂದ ಗೌಡರಿಗೆ ಸೂಚನೆ ನೀಡಿದೆ ಎಂದು ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+