ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ
ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಎರಡು ದಿನಗಳ ಕಾಲ 'ವಿಕಸಿತ ಭಾರತದಲ್ಲಿ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಪಾತ್ರ' ವಿಷಯದ ಕುರಿತು ರಾಷ್ಟೀಯ ಸಮಾವೇಶ ನಡೆಯಿತು. ದೇಶದ ಅಭಿವೃದ್ದಿಯಲ್ಲಿ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಪ್ರಮುಖ ಪಾತ್ರವಹಿಸುತ್ತದೆ ಎಂದು 'ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್' ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಅಭಿಪ್ರಾಯಪಟ್ಟರು.
ಸಮಾವೇಶದಲ್ಲಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳನ್ನು ಆಧಾರವಾಗಿರಿಸಿಕೊಂಡು ದೇಶವನ್ನು ವಿಕಸಿತಗೊಳಿಸಬಹುದು ಎಂದ ಹೇಳಿದರು. ಸರ್ಕಾರ, ಕಾರ್ಪೊರೇಟ್ ಸಂಸ್ಥೆಗಳು ಮತ್ತು ಸಮಾಜ ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ವಿಕಸಿತ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

'ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್' ನೇತೃತ್ವದಲ್ಲಿ ಉಚಿತ ಶಿಕ್ಷಣ, ಪೋಷಕಾಂಶ ಆಹಾರ ವಿತರಣೆ ಮತ್ತು ಉಚಿತ ಆರೋಗ್ಯ ಸೇವೆಗಳಂತಹ ಹಲವು ಸೇವಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತದೆ. ಇಂತಹ ಯೋಜನೆಗಳು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವಲ್ಲು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಹೆಳಿದರು.
ಇಂಡಿಯನ್ ಆಯಿಲ್ ಸಂಸ್ಥೆಯ ಪ್ರತಿನಿಧಿ ಸಿದ್ದಾರ್ಥ ಅಗರವಾಲ್ ಮಾತನಾಡಿ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಯನ್ನು ನಾವು ಮರಳಿ ಸಮಾಜಕ್ಕೆ ನೀಡುವ ಒಂದು ಸದಾವಕಾಶವಾಗಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಹಾಗೂ ಸಮುದಾಯ ಅಭವೃದ್ಧಿ ಕ್ಷೇತ್ರಗಳಲ್ಲಿ ಹಲವು ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಯ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು. ಜೊತೆಗೆ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ ಜೊತೆ ಕೈಜೋಡಿಸುವ ಭರವಸೆಯನ್ನೂ ವ್ಯಕ್ತಪಡಿಸಿದರು.
ಗೇಲ್ ಇಂಡಿಯಾ ಸಂಸ್ಥೆಯ ಪ್ರತಿನಿಧಿ ಆಯುಷ ಗುಪ್ತಾ ಮಾತನಾಡಿ, ಸತ್ಯಸಾಯಿ ಗ್ರಾಮಕ್ಕೆ ಇದು ನನ್ನ ಮೊದಲ ಭೇಟಿ ಎಂದು ಹೇಳಿದರು. ಇಲ್ಲಿ ನಡೆಯುತ್ತಿರುವ ಸೇವಾ ಚಟುವಟಿಕೆಗಳನ್ನು ಕಂಡು ಮೆಚ್ಚಿ ಮಾತನಾಡಿದ ಅವರು ಇಂತಹ ಸೇವಾ ಕಾರ್ಯಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಹೇಳಿದರು. ಸಂಸ್ಥೆಗಳು ಮತ್ತು ವ್ಯಕ್ತಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯಾ ಎಂದು ಅವರು ಅಭಿಪ್ರಾಯಪಟ್ಟರು.
ಎರಡು ದಿನಗಳ ಕಾಲ ನಡೆದ ಈ ಸಮಾವೇಶದಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧ್ಯಕ್ಷ ಮನೋಜ್ ಜೈನ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನಟೇಶ್, ಓಲಾ ಫೌಂಡೇಶನ್‌ನ ದೆವೇಶ್ ವರ್ಮಾ, ಸೆಬಿ ಮಾಜಿ ನಿರ್ದೇಶಕ ಎಸ್.ವಿ. ಮುರಳೀಧರ್ ರಾವ್, ಆಂಧ್ರ ಪ್ರದೇಶದ ಬಾಪಟ್ಲಾ ಕ್ಷೇತ್ರದ ಲೋಕಸಭಾ ಸದಸ್ಯ ಕೃಷ್ಣ ಪ್ರಸಾದ್ ತನ್ನೇಟಿ ಹಾಗೂ ತೆಲಂಗಾಣದ ಶಾಸಕ ಪಲ್ವೈ ಹರೀಶ್ ಬಾಬು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಸುಮಾರು 8೦ಕ್ಕೂ ಹೆಚ್ಚು ಸಂಸ್ಥೆಗಳ ಸಿಇಓಗಳು, ನಿರ್ದೇಕರು, ಪ್ರತಿನಿಧಿಗಳು ಹಾಗೂ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ತಜ್ಞರು ಸಮಾವೇಶದಲ್ಲಿ ಪಾಲ್ಗೊಂಡು ಸಾಮಾಜಿಕ ಅಭಿವೃದ್ಧಿಯಲ್ಲಿ CSRನ ಮಹತ್ವ ಮತ್ತು ಅದರ ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್‌ನಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಟ್ರಸ್ಟ್‌ಗಳ ಸಿಬ್ಬಂದಿಯೂ ಉಪಸ್ಥಿತರಿದ್ದರು.












Click it and Unblock the Notifications