ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಪುನೀತ್‌ಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ

|
Google Oneindia Kannada News

ಬೆಂಗಳೂರು, ಮಾರ್ಚ್ 18; ಕನ್ನಡ ನಟ, ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್‌ಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಘೋಷಣೆಯಾಗಿದೆ. ಈಗಾಗಲೇ ಕರ್ನಾಟಕ ಸರ್ಕಾರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ ಮಾಡಿದೆ.

ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, "ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ಸಹಕಾರ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನಟ ಪುನೀತ್‌ ರಾಜ್‌ಕುಮಾರ್‌ಗೆ ನೀಡಲಾಗುತ್ತದೆ" ಎಂದರು.

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರುಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರು

"ನಂದಿನಿ ಹಾಲು ಉತ್ಪನ್ನಗಳಿಗೆ ನಟ ಪುನೀತ್ ರಾಜ್‌ಕುಮಾರ್ ರಾಯಭಾರಿಯಾಗಿದ್ದರು. ಉಚಿತವಾಗಿ ರಾಯಭಾರಿಯಾಗಿ ಅವರು ಸೇವೆ ಸಲ್ಲಿಸಿದ್ದರು. ಈ ಸೇವೆಯನ್ನು ಪರಿಗಣಿಸಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ" ಎಂದು ಸಚಿವರು ಹೇಳಿದರು.

ಮೈಸೂರು ವಿವಿಯಿಂದ ಪುನೀತ್‌ಗೆ ಗೌರವ ಡಾಕ್ಟರೇಟ್ ಮೈಸೂರು ವಿವಿಯಿಂದ ಪುನೀತ್‌ಗೆ ಗೌರವ ಡಾಕ್ಟರೇಟ್

Sahakara Ratna Award For Puneeth Rajkumar

ಮಾರ್ಚ್ 20ರಂದು ಕೆಂಗೇರಿ ಉಪನಗರದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸಹಕಾರ ರತ್ನ ಪ್ರಶಸ್ತಿ 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Video; ಲೈಫ್ ಬಾಯ್ ಸೋಪ್‌ನಲ್ಲಿ ಮೂಡಿದ ಪುನೀತ್ ಚಿತ್ರ Video; ಲೈಫ್ ಬಾಯ್ ಸೋಪ್‌ನಲ್ಲಿ ಮೂಡಿದ ಪುನೀತ್ ಚಿತ್ರ

2021ರ ಅಕ್ಟೋಬರ್ 29ರಂದು ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು. ಮಾರ್ಚ್ 17ರಂದು ಪುನೀತ್ ರಾಜ್‌ಕುಮಾರ್ 47ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದ್ದಾರೆ. ಪುನೀತ್ ನಟನೆಯ ಕೊನೆಯ ಚಿತ್ರ 'ಜೇಮ್ಸ್‌' ಸಹ ಗುರುವಾರ ಬಿಡುಗಡೆಯಾಗಿದೆ.

ಕರ್ನಾಟಕ ರತ್ನ ಪ್ರಶಸ್ತಿ; 2021ರ ನವೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ದಿ. ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ 'ಪುನೀತ ನಮನ' ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವುದಾಗಿ ಅವರು ಘೋಷಣೆ ಮಾಡಿದರು. ಕರ್ನಾಟಕ ಸರ್ಕಾರ ಇದೇ ಮೊದಲ ಬಾರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುತ್ತಿದೆ.

ಮೈಸೂರು ವಿಶ್ವವಿದ್ಯಾಲಯ 102ನೇ ಘಟಿಕೋತ್ಸವದ ಅಂಗವಾಗಿ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಲಿದೆ. ಮಾರ್ಚ್ 22ರಂದು ಘಟಿಕೋತ್ಸವ ನಡೆಯಲಿದೆ.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡಿ, "ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದ ಮೈಸೂರು ವಿಶ್ವವಿದ್ಯಾಲಯ ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಿದೆ" ಎಂದು ಹೇಳಿದ್ದಾರೆ.

English summary
Cooperation minister S. T. Somashekar said that sahakara ratna award will be presented to late Kannada actor Puneeth Rajkumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X