ಎಸ್‌ಎಲ್ ಭೈರಪ್ಪಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ
ಬೆಂಗಳೂರು, ಮಾ.11 : ಕನ್ನಡದ ಹಿರಿಯ ಲೇಖಕ ಎಸ್.ಎಲ್.ಭೈರಪ್ಪ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋ ಗೌರವ ನೀಡಿದೆ. ಇದು ಸಾಹಿತ್ಯ ಅಕಾಡೆಮಿ ಸಾಹಿತಿಗಳಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.
ಸೋಮವಾರ ದೆಹಲಿಯಲ್ಲಿ ಸಭೆ ಸೇರಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಮತ್ತು ತೆಲುಗಿನ ಖ್ಯಾತ ಕವಿ ಸಿ.ನಾರಾಯಣ ರೆಡ್ಡಿ ಅವರಿಗೆ ಫೆಲೋ ಗೌರವ ನೀಡಿದೆ. [ಭೈರಪ್ಪಗೆ ರಾಷ್ಟ್ರೀಯ ಪ್ರೊಫೆಸರ್ ಗೌರವ]

ಸಾಹಿತ್ಯ ಅಕಾಡೆಮಿಯ ಸಾಹಿತಿಗಳಿಗೆ ನೀಡುವ ಅತ್ಯುನ್ನತ ಗೌರವವಿದಾಗಿದೆ. ಹಿಂದೆ ಡಾ.ಯು.ಆರ್.ಅನಂತಮೂರ್ತಿ ಅವರಿಗೆ ಫೆಲೋ ಗೌರವ ದೊರಕಿತ್ತು. ಅದಕ್ಕೂ ಮೊದಲು ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ದ.ರಾ.ಬೇಂದ್ರೆ ಮತ್ತು ಕೆ.ಎಸ್. ನರಸಿಂಹಸ್ವಾಮಿ ಅವರೂ ಈ ಗೌರವಕ್ಕೆ ಪಾತ್ರರಾಗಿದ್ದರು. [ಮೊಯ್ಲಿ ಅವರಿಗೆ ಸರಸ್ವತಿ ಸಮ್ಮಾನ್ ಪುರಸ್ಕಾರ]
ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಕರ್ನಾಟಕದಲ್ಲಿ ಅಪಾರ ಓದುಗ ಅಭಿಮಾನಿಗಳನ್ನು ಹೊಂದಿದ್ದಾರೆ. ಮರಾಠಿ, ಹಿಂದಿ ಸೇರಿದಂತೆ ಅನೇಕ ಭಾಷೆಗಳಿಗೆ ಅವರ ಕೃತಿಗಳು ಭಾಷಾಂತರಗೊಂಡಿದೆ. [ಭೈರಪ್ಪ ಸಂಕ್ಷಿಪ್ತ ಪರಿಚಯ]
2010ರಲ್ಲಿ ಎಸ್.ಎಲ್.ಭೈರಪ್ಪ ಅವರಿಗೆ ಸರಸ್ವತಿ ಸಮ್ಮಾನ್ ಪುರಸ್ಕಾರ ದೊರಕಿತ್ತು. 'ಆವರಣ' ಸೇರಿದಂತೆ ಭೈರಪ್ಪನವರ ಅನೇಕ ಕೃತಿಗಳು ಎಂಟು, ಹತ್ತು ಮುದ್ರಣಗಳನ್ನು ಕಂಡಿವೆ.












Click it and Unblock the Notifications