Good News: ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ರೈಲು ಮಾರ್ಗದ ವಿದ್ಯುದೀಕರಣ ಪೂರ್ಣ, ಬಿಗ್ ಅಪ್ಡೇಟ್ಸ್
ಬೆಂಗಳೂರು: ಕರ್ನಾಟಕದಲ್ಲಿ ರೈಲ್ವೆ ವಿದ್ಯುದೀಕರಣ ಪೂರ್ಣಗೊಳಿಸುವ ಪ್ರಕ್ರಿಯೆಗೆ ಪೂರಕವಾಗಿ ಮತ್ತೊಂದು ಯಶಸ್ವಿ ಕಾರ್ಯ ಪೂರ್ಣಗೊಂಡಿದೆ. ರಾಜ್ಯದಲ್ಲಿ ಅತೀ ಸವಾಲಿನ ರೈಲು ಮಾರ್ಗವಾಗಿರುವ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕೆಲಸ ಪೂರ್ಣಗೊಂಡಿದೆ. ಈ ಬಗ್ಗೆ ನೈಋತ್ಯ ರೈಲ್ವೆ ವಿಭಾಗವು (South Western Railway) ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಇಂದಿನ ಈ ಸಾಧನೆ ರಾಜ್ಯದಲ್ಲಿ ರೈಲ್ವೆ ಮಾರ್ಗದಲ್ಲಿ ಶೇಕಡಾ 100 ರಷ್ಟು ವಿದ್ಯುದೀಕರಣದ ಗುರಿ ತಲುಪಲು ಸಹಕಾರಿಯಾಗಿದೆ.
ಭಾನುವಾರ (ಡಿಸೆಂಬರ್ 28) ರಂದು ₹93.55 ಕೋಟಿ ವೆಚ್ಚದಲ್ಲಿ ಯಶಸ್ವಿ ವಿದ್ಯುತ್ ಲೋಕೋಮೋಟಿವ್ ಪ್ರಯೋಗ ಮಾಡಲಾಯಿತು. 57 ಸುರಂಗಗಳು ಮತ್ತು 258 ಸೇತುವೆಗಳನ್ನು ಹೊಂದಿರುವ ತಾಂತ್ರಿಕವಾಗಿ ಬೇಡಿಕೆಯಿರುವ ಈ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ 55 ಕಿಲೋ ಮೀಟರ್ ಉದ್ದದ ವಿದ್ಯುದ್ದೀಕರಣ ಪೂರ್ಣಗೊಂಡಿದೆ ಎಂದು ಬೆಂಗಳೂರು ಮತ್ತು ಮೈಸೂರು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ ಮುಕ್ತ ರೈಲು ಕಾರ್ಯಾಚರಣೆ: ಶೀಘ್ರವೇ ವಿಬಿ ರೈಲು ಸೇವೆ
ದೇಶಾದ್ಯಂತ ರೈಲ್ವೆ ಡಬ್ಲಿಂಗ್ ಮತ್ತು ವಿದ್ಯುದೀಕರಣ ಕೈಗೊಂಡಿರುವ ಭಾರತೀಯ ರೈಲ್ವೆ ಇಲಾಖೆಗೆ ರಾಜ್ಯದ ಈ ಮಾರ್ಗದಲ್ಲಿ ವಿದ್ಯುದೀಕರಣ ಪ್ರಕ್ರಿಯೆ ಸವಾಲಾಗಿತ್ತು. ಅದರ ನಡುವೆ ಕಾರ್ಯ ಯಶಸ್ವಿಯಾಗಿದ್ದು, ಇಲಾಖೆಗೆ ಇದು ಮತ್ತೊಂದು ಮೈಲಿಗಲ್ಲು ಸಾಧನೆಯಾಗಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲು ಕಾರಿಡಾರ್ನಲ್ಲಿ ಡೀಸೆಲ್ ಮುಕ್ತ ರೈಲುಗಳ ಕಾರ್ಯಾಚರಣೆಗಳನ್ನು ಇನ್ನು ಮುಂದೆ ಸಕ್ರಿಯಗೊಳಿಸಲಾಗುತ್ತದೆ. ಈ ಪರಿಸರ ಸ್ನೇಹಿ ಕ್ರಮವಾದ ವಿದ್ಯುದೀಕರಣದಿಂದ ವಾರ್ಷಿಕವಾಗಿ ಅಂದಾಜು 1.5 ಮಿಲಿಯನ್ ಟನ್ಗಳಷ್ಟು ಇಂಗಾಲದ ಹೊರಸೂಸುವಿಕೆ ಕಡಿಮೆ ಆಗುತ್ತದೆ.
New Railway Line: ಗಿಣಿಗೇರಾ-ರಾಯಚೂರು ರೈಲು ಮಾರ್ಗ ಯೋಜನೆ ಅಪ್ಡೇಟ್, ತೆಲಂಗಾಣಕ್ಕೆ ಸಂಪರ್ಕ ಸುಲಭ
ಈ ರೈಲು ಮಾರ್ಗವು ಇಂಧನ ಮುಕ್ತ ಮಾರ್ಗವಾಗುತ್ತಿದ್ದಂತೆ ಭವಿಷ್ಯದಲ್ಲಿ ವಂದೇ ಭಾರತ್ ರೈಲುಗಳ ಕಾರ್ಯಾಚರಣೆಗೆ ಇಲಾಖೆ ಉತ್ಸಾಹ ತೋರಿಸಲಿದೆ. ಈಗಾಗಲೇ ಬೆಂಗಳೂರು-ಮಡಗಾಂವ್ ಮಾರ್ಗವಾಗಿ ವಂದೇ ಭಾರತ್ ರೈಲು ಕಾರ್ಯಾಚರಣೆ ಪ್ರಸ್ತಾಪಿಸಲಾಗಿದೆ.
120 ಕಿಮೀ. ವೇಗದಲ್ಲಿ ಚಲಿಸುವಂತೆ ವಿನ್ಯಾಸ
ಇಲ್ಲಿ ವಿದ್ಯುದ್ದೀಕರಣ ಯೋಜನೆಯು ಡಿಸೆಂಬರ್ 2023ರಿಂದ ಆರಂಭವಾಯಿತು. ಒಟ್ಟು 93.55 ಕೋಟಿ ರೂ. ವೆಚ್ಚದಲ್ಲಿ ವಿದ್ಯುದ್ದೀಕರಣ ನಡೆದಿದೆ. ಇದರಲ್ಲಿ ಐದು ಸ್ವಿಚಿಂಗ್ ಸ್ಟೇಷನ್ಗಳ ನಿರ್ಮಾಣ ಮತ್ತು ಸಂಪೂರ್ಣ ಪ್ರದೇಶದ ಓವರ್ಹೆಡ್ ಸಹ ಸೇರಿದೆ. ಓವರ್ಹೆಡ್ ಉಪಕರಣಗಳನ್ನು ಗರಿಷ್ಠ 120 ಕಿಮೀ ವೇಗಕ್ಕೆ ವಿನ್ಯಾಸಗೊಳಿಸಲಾಗಿದೆ. ಸುರಕ್ಷತೆ ಮತ್ತು ಸೂಕ್ತ ಕಾರ್ಯಾಚರಣೆಗೆ ಆದ್ಯತೆ ನೀಡಲಾಗಿದೆ. ಪೂರಕವಾಗಿ ಬಿಡಿ ಬ್ರಾಕೆಟ್ಗಳನ್ನು ಸ್ಥಾಪಿಸಲಾಗಿದೆ. ಹಲವು ಪರೀಕ್ಷೆಗಳನ್ನು ಕೈಗೊಂಡು ಪರಿಶೀಲಿಸಲಾಗಿದೆ.
ಕಡಿದಾದ ಇಳಿಜಾರು ಪ್ರದೇಶದಲ್ಲಿ 830 ಮೀಟರ್ಗಳವರೆಗೆ ವಿಸ್ತರಿಸಿದ ಓವರ್ಹೆಡ್ ವ್ಯವಸ್ಥೆ ಮಾಡಲಾಗಿದೆ. ಭಾರೀ ಮಳೆಗಾಲ ಎದುರಾದರೆ, ಭೂಕುಸಿತ ಸಂಭವಿಸಿ ಕಲ್ಲುಬಂಡೆ ಕಾಣುವಂತಾಗಿತ್ತು. ಇಲ್ಲಿ ಮಣ್ಣು ಇಲ್ಲದಂತಾಗಿತ್ತು. ಇಂತಹ ಒಂದಷ್ಟು ಗಂಭೀರ ಅಡೆತಡೆಗಳು ಎದುರಾದರೂ ಸಹಿತ ಕಾರ್ಯವನ್ನು ಮುಂದುವರಿಸಿ ಯಶಸ್ವಿಗೊಳಿಸಲಾಗಿದೆ. ಶನಿವಾರ ವಿದ್ಯುದ್ದೀಕರಣ ಮತ್ತು ವಿದ್ಯುತ್ ಲೋಕೋಮೋಟಿವ್ ಪ್ರಯೋಗ ಯಶಸ್ವಿಯಾಗಿ ಪೂರ್ಣಗೊಂಡ ಬಳಿಕ ವಿದ್ಯುತ್ ಕೇಬಲ್ ಎಳೆಯಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications