7 Pay Commission: ವೇತನ ಪರಿಷ್ಕರಣೆ ಸದ್ಯದಲ್ಲಿ ಅಸಾಧ್ಯ? 29 ಕ್ಕೆ ಸರ್ಕಾರಿ ನೌಕರರ ಮುಷ್ಕರ!
ಬೆಂಗಳೂರು, ಜುಲೈ 06: ಬಹುದಿನಗಳಿಂದ ರಾಜ್ಯ ಸರ್ಕಾರದಿಂದ ಶುಭ ಸುದ್ದಿ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸರಕಾರಿ ನೌಕರರಿಗೆ ಮತ್ತೆ ನಿರಾಸೆ ಎದುರಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಹೌದು, ಕಳೆದ ವಾರವಷ್ಠೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ನೇತೃತ್ವದಲ್ಲಿ ನಿಯೋಗ ಭೇಟಿಯಾಗಿ ಮನವಿ ಮಾಡಿದ್ದು, 7 ನೇ ವೇತನ ಆಯೋಗ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು.

ರಾಜ್ಯ ಸರ್ಕಾರ ನೌಕರರು ಕಾತುರದಿಂದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೃತೇತ್ವದಲ್ಲಿ ನಡೆಯುವಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆಯಾಗದ ಹಿನ್ನಲೇ ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯುಂಟಾಗಿದೆ.
ಕೆಲ ವರ್ಷಗಳಿಂದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ತೀವ್ರ ಬೇಡಿಕೆಯನ್ನು ಇಟ್ಟಿದ್ದಾರೆ. 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆಯದಿರುವುದರಿಂದ ಸರ್ಕಾರಿ ನೌಕರರು ತಮ್ಮ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ.
ಇನ್ನೂ ಬಹುದಿನಗಳಿಂದ ಸಿದ್ದರಾಮಯ್ಯ ಸರ್ಕಾರ ನಮ್ಮ ಬೇಡಿಕೆಯನ್ನ ಈಡೇಸುತ್ತದೆ ಎಂದು ಸರ್ಕಾರಿ ನೌಕರರು ಸಾಕಷ್ಟು ವಿಶ್ವಾಸವನ್ನ ಇಟ್ಟುಕೊಂಡಿದ್ರು. ಆದರೆ, ಈ ಬಾರಿಯೂ ಸಂಪುಟದಲ್ಲಿ ಚರ್ಚೆಯಾಗದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಅಸಮಾಧಾನ ಹೊರಹಾಕಿದ್ದು, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗ-ಳನ್ನು ಜಾರಿ ಮಾಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಇದೇ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ.
ಈ ಹಿಂದೆ ವರದಿ ಸಲ್ಲಿಕೆಯ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಇದೆ. ನೀತಿ ಸಂಹಿತೆ ಮುಗಿದ ಬಳಿಕ ಈ ಬಗ್ಗೆ ಆರ್ಥಿಕ ಇಲಾಖೆ ಜೊತೆಗೆ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದರು. ಇದೀಗ 7 ನೇ ವೇತನ ಆಯೋಗ ವರದಿ ನೀಡಿ ನಾಲ್ಕು ತಿಂಗಳಾಗುತ್ತಾ ಬಂದರೂ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಮೀನಮೇಷ ಎಣಿಸುತ್ತಾ ಬಂದಿದೆ.
ರಾಜ್ಯದ ಎಲ್ಲ ವೃಂದದ, ಎಲ್ಲ ಇಲಾಖೆಗಳ ನೌಕರರು ಬೇಸರ ವ್ಯಕ್ತಪಡಿಸಿದ್ದು, ಹೋರಾಟ ಆರಂಭಿಸುವಂತೆ ಒಕ್ಕೊರಲಿನ ಒತ್ತಡ ಹಾಕುತ್ತಿದ್ದಾರೆ. ಜುಲೈ 7ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿಯಲ್ಲಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾ- ಗುತ್ತದೆ. ಮುಷ್ಕರದ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾಹಿತಿ ನೀಡಿದರು.












Click it and Unblock the Notifications