ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ. ಶಿವಕುಮಾರ್ ಅವರಿಗೆ ಕೈ ಮುಗಿದು ಕ್ಷಮೆ ಕೋರುತ್ತೇನೆ: ಸಲೀಂ

|
Google Oneindia Kannada News

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತ ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಬುಧವಾರ ಆದೇಶ ಹೊರಡಿಸಿದ್ದರು. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

"ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡಬಾರದಿತ್ತು. ಅಚಾತುರ್ಯದಿಂದ ಇಂತಹ ಘಟನೆ ನಡೆದಿದೆ. ನನ್ನಿಂದಲೇ ದೊಡ್ಡ ತಪ್ಪಾಗಿದೆ. ಅವರು ಯಾವುದೇ ಶಿಕ್ಷೆ ನೀಡಿದರೂ ಅನುಭವಿಸಲು ಸಿದ್ಧ ಇದ್ದೇನೆ. ಶಿವಕುಮಾರ್ ಅವರು ನನಗೆ ರಾಜಕೀಯವಾಗಿ ಗಾಡ್‌ಫಾದರ್. ಅವರೇ ನನಗೆ ಅವಕಾಶಗಳನ್ನು ನೀಡಿದ್ದರು. ಈ ರೀತಿ ಆಗಿರುವುದಕ್ಕೆ ಬಹಳ ನೊಂದಿದ್ದೇನೆ" ಎಂದು ಅವರು ಗುರುವಾರ ಕಣ್ಣೀರಿಡುತ್ತಾ ಕ್ಷಮೆ ಕೋರಿದ್ದಾರೆ.

Saleem Apologized to DK Shivakumar after his Video about KPCC President Goes Viral

"ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ನಿಜ. ಆದರೆ, ನನ್ನ ರಕ್ತ, ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿಯೇ ಕೆಲಸ ಮಾಡುತ್ತೇನೆ. ಪಕ್ಷದ ಸದಸ್ಯತ್ವ ಇಲ್ಲದಿದ್ದರೂ ಸಹ ನನ್ನ ಬದ್ಧತೆಯನ್ನು ಪಕ್ಷಕ್ಕಾಗಿ ಉಳಿಸಿಕೊಂಡು ಕೆಲಸ ಮುಂದುವರಿಸುತ್ತೇನೆ ಎಂದು ಸಲೀಂ ಗುರುವಾರ ಹೇಳಿಕೆ ನೀಡಿದ್ದಾರೆ.

'ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಯಾವುದೇ ಕೆಟ್ಟ ದೃಷ್ಟಿಯಿಂದ ಹೇಳಿಕೆ ನೀಡಿಲ್ಲ. ಕೆಲ ದಿನಗಳ ಹಿಂದೆ ಅವರು ರಾಜಭವನದ ಮುಂದೆ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಶಿವಕುಮಾರ್ ಅವರು ಕುಡಿದಿದ್ದಾರೆ, ಲೋ ಬಿಪಿ ಆಗಿದೆಯಾ ಎಂಬ ಕುರಿತು ಚರ್ಚೆಗಳು ನಡೆದಿದ್ದವು. ಆ ಬಗ್ಗೆ ಉಗ್ರಪ್ಪನವರಿಗೆ ಹೇಳುತ್ತಿದ್ದೆ. ಸಿದ್ದರಾಮಯ್ಯ ಅವರ ತರ ಖಡಕ್ ಆಗಿ ಇರಬೇಕು. ಆ ರೀತಿಯ ಬಾಡಿ ಲಾಂಗ್ವೇಜ್ ಇದ್ದರೆ ಮುಂದೆ ಪಕ್ಷ ಅಧಿಕಾರಕ್ಕೆ ಬರಲು ಸುಲಭವಾಗುತ್ತದೆ ಎಂಬ ಕುರಿತು ಮಾತನಾಡಿದ್ದೆ ಅಷ್ಟೇ' ಎಂದು ಸಲೀಂ ಹೇಳಿದ್ದಾರೆ.

"ಜಲಸಂಪನ್ಮೂಲ ಇಲಾಖೆಯಲ್ಲಿ ಹಿಂದೆ 6% ಕಮಿಷನ್ ಇತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿ.ವೈ. ವಿಜಯೇಂದ್ರ ಅವರು 12% ಗೆ ಹೆಚ್ಚಿಸಿದ್ದಾರೆ ಎಂದು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್ ಅವರು ಕಮಿಷನ್ ಹೆಚ್ಚಿಸಿದ್ದಾರೆ, ಕಮಿಷನ್ ಪಡೆಯುತ್ತಿದ್ದಾರೆ ಎಂದು ನಾನು ಹೇಳಿಲ್ಲ. ಆದರೆ, ವಿಡಿಯೋದಲ್ಲಿ ನನ್ನ ಪೂರ್ಣ ಮಾತುಗಳು ಬಾರದೆ ಮಧ್ಯದಿಂದ ಮಾತನಾಡಿರುವುದನ್ನೇ ತೆಗೆದುಕೊಂಡು ಪ್ರಸಾರ ಮಾಡಲಾಗಿದೆ'' ಎಂದು ಸಲೀಂ ಹೇಳಿದರು.

"ಒಟ್ಟಾರೆಯಾಗಿ ನನ್ನಿಂದ ತಪ್ಪಾಗಿದೆ. ನನ್ನ ಅಭಿಪ್ರಾಯವನ್ನೂ ಕೇಳದೆ ನನ್ನನ್ನು ಪಕ್ಷದಿಂದ ಉಚ್ಛಾಟನೆಯನ್ನೂ ಮಾಡಲಾಗಿದೆ. ನಾನು ಯಾವ ಮುಖ ಇಟ್ಟುಕೊಂಡು ಶಿವಕುಮಾರ್ ಅವರನ್ನು ಭೇಟಿ ಮಾಡಬೇಕು ಗೊತ್ತಿಲ್ಲ. ಕೆಲವರು ನನಗೆ ಬೆದರಿಕೆ ಕರೆಗಳನ್ನೂ ಮಾಡಿದ್ದಾರೆ. ಶಿವಕುಮಾರ್ ನೀಡುವ ಯಾವುದೇ ಶಿಕ್ಷೆ ಅನುಭವಿಸಲು ನಾನು ಸಿದ್ಧ ಇದ್ದೇನೆ. ಎಲ್ಲರೂ ಸಹ ಈ ವಿಷಯವನ್ನು ಇಲ್ಲಿಗೇ ಕೈಬಿಡಬೇಕು'' ಸಲೀಂ ಮನವಿ ಮಾಡಿದ್ದಾರೆ.

ನನ್ನ ತೀರ್ಮಾನ ಅಲ್ಲ:

"ಯಾರು ಸರಿ ಇದ್ದಾರೆ, ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ನೋಡಲು ದೇವರು ಇದ್ದಾನೆ. ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟಿಸಿರುವುದು ಡಿ.ಕೆ. ಶಿವಕುಮಾರ್ ತೀರ್ಮಾನ ಅಲ್ಲ. ಅದು ಪಕ್ಷದ ತೀರ್ಮಾನ. ಎಲ್ಲರೂ ಪಕ್ಷದ ತೀರ್ಮಾನಗಳಿಗೆ ಬದ್ಧರಾಗಿರಬೇಕು" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Recommended Video

IPL ಚಾಂಪಿಯನ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು? RCBಗೆ ಎಷ್ಟು ಸಿಕ್ತು? | Oneindia Kannada

English summary
Saleem Apologized to DK Shivakumar after his Video talking about KPCC President with VS Ugrappa Goes Viral; Congress expelled Saleem ahmed from party. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X