ಸಂಪರ್ಕ್ ಫಾರ್ ಸಮರ್ಥನ್ : ಕರ್ನಾಟಕಕ್ಕೆ ಅಮಿತ್ ಶಾ ಭೇಟಿ

ಬೆಂಗಳೂರು, ಜೂನ್ 14 : 2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನ ಆರಂಭಿಸಿದೆ. ಅಭಿಯಾನದ ಅಂಗವಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಅಮಿತ್ ಶಾ ರಾಜ್ಯಕ್ಕೆ ಬಂದಿಲ್ಲ. ಈಗ ಲೋಕಸಭೆ ಚುನಾವಣೆಯ ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನದ ಅಂಗವಾಗಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

Sampark For Samarthan Campaign : Amit Shah to visit Karnataka

ರಾಜ್ಯದಲ್ಲಿ 20 ಪ್ರಮುಖ ವ್ಯಕ್ತಿಗಳನ್ನು ಅಮಿತ್ ಶಾ ಭೇಟಿಯಾಗಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರ ಪಟ್ಟಿಯನ್ನು ಈಗಾಗಲೇ ಪಕ್ಷ ಸಿದ್ಧಪಡಿಸಿದೆ. ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುವ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ.

ಅಮಿತ್ ಶಾ ಬೆಂಗಳೂರಿನಲ್ಲಿ ನಂದನ್ ನಿಲೇಕಣಿ, ನಟ ಉಪೇಂದ್ರ, ಅನಿಲ್ ಕುಂಬ್ಳೆ, ಸುಧಾಮೂರ್ತಿ, ಮೋಹನ್‌ದಾಸ್ ಪೈ, ಡಾ.ಮಂಜುನಾಥ್, ಗೋಪಾಲ್ ಗೌಡ, ಭುಜಂಗ ಶೆಟ್ಟಿ ಸೇರಿದಂತೆ ಹಲವು ಗಣ್ಯರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದಲ್ಲಿ ವಿವಿಧ ನಾಯಕರು, ಕೇಂದ್ರ ಸಚಿವರು ಸಹ ಪಾಲ್ಗೊಳ್ಳುತ್ತಿದ್ದು ಹಲವು ಗಣ್ಯರನ್ನು ಭೇಟಿ ಮಾಡುತ್ತಿದ್ದಾರೆ. ಕಳೆದ ವಾರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+