ಸಂಪರ್ಕ್ ಫಾರ್ ಸಮರ್ಥನ್ : ಶಿವಣ್ಣನ ಭೇಟಿಯಾದ ಶ್ರೀನಿವಾಸ ಪೂಜಾರಿ
ಬೆಂಗಳೂರು, ಜುಲೈ 18 : ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ವಿವಿಧ ಗಣ್ಯರನ್ನು ಬಿಜೆಪಿ ನಾಯಕರು ಭೇಟಿಯಾಗುತ್ತಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿ ಅವರು ನಟ ಡಾ.ಶಿವರಾಜ್ ಕುಮಾರ್ ಅವರನ್ನು 'ರುಸ್ತುಂ' ಚಿತ್ರೀಕರಣದ ಸಮಯದಲ್ಲಿ ಭೇಟಿಯಾಗಿ ಅಭಿಯಾನದ ಬಗ್ಗೆ ಮಾಹಿತಿ ಹಂಚಿಕೊಂಡರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಬುಕ್‌ಲೆಟ್ ನೀಡಿದರು.

ಬಿಜೆಪಿ 2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಚುನಾವಣೆಗೂ ಮೊದಲೇ ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನ ಆರಂಭಿಸಿದೆ. 4000 ಬಿಜೆಪಿ ನಾಯಕರು ಸುಮಾರು 1 ಲಕ್ಷ ಗಣ್ಯರನ್ನು ಭೇಟಿ ಮಾಡಲಿದ್ದಾರೆ.

ಜೂನ್ ತಿಂಗಳಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಯಾದ ಕೆ.ಮುರಳೀಧರ್ ರಾವ್ ಅವರು ನಟ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದರು.
ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅಭಿಯಾನದ ಅಂಗವಾಗಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ್ದರು. ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರಿಗೂ ಅಭಿಯಾನದ ಬಗ್ಗೆ ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.












Click it and Unblock the Notifications