• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮರಳು ಮಾಫಿಯಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ನೀಡಿದ ಖಡಕ್ ಸೂಚನೆ

By Balaraj Tantry
|

ಬೆಂಗಳೂರು, ಆಗಸ್ಟ್ 25 : ರಾಜ್ಯದಲ್ಲಿ ಮರಳು ಮಾಫಿಯಾ ನಿಯಂತ್ರಣಕ್ಕೆ ತಂದು ಸರ್ಕಾರಕ್ಕೆ ಆದಾಯ ಬರುವಂತೆ ಹಾಗೂ ಜನಸಾಮಾನ್ಯರಿಗೆ ಸುಲಭವಾಗಿ ಮರಳು ದೊರಕಲು, ಮರಳು ನೀತಿಯಲ್ಲಿ ಅಗತ್ಯ ಮಾರ್ಪಾಡು ಮಾಡಲು ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದರು.

ಮರಳು ಮತ್ತು ಕಲ್ಲು ಗಣಿಗಾರಿಕೆ ಕುರಿತು ಶನಿವಾರ (ಆ 25), ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ಅಕ್ರಮಕ್ಕೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದರು.

ಎಂ ಸ್ಯಾಂಡ್ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರೀಕ್ಷೆ ಮಾಡಿ ಎಂದು ಸೂಚಿಸಿದರಲ್ಲದೆ ಕಲ್ಲು ಗಣಿಗಾರಿಕೆಯನ್ನು ಕಾನೂನಿನ ವ್ಯಾಪ್ತಿಯಲ್ಲಿ ನಡೆಸಲು ಅನುಮತಿ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯದ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಮರಳು, ಕಟ್ಟಡ ಕಲ್ಲು ಹಾಗೂ ಜಲ್ಲಿಯು ಕಡಿಮೆ ದರದಲ್ಲಿ ಸಿಗಲು ಈಗಿರುವ ವ್ಯವಸ್ಥೆ ಹಾಗೂ ಕಾಯ್ದೆ, ನಿಯಮ ಹಾಗೂ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿ ಹೊಸ ನೀತಿಯನ್ನು ರೂಪಿಸಲು ಸೂಚಿಸಿದರು.

ಆಂಧ್ರಪ್ರದೇಶ, ತೆಲಂಗಾಣ , ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿರುವ ಮರಳು ಮತ್ತು ಕಲ್ಲು ಗಣಿಗಾರಿಕೆ ಕುರಿತ ಕಾಯ್ದೆ ಹಾಗೂ ನಿಯಮಗಳ ಬಗ್ಗೆ ಅಧ್ಯಯನ ಮಾಡಲು ತೆರಳಿರುವ ತಜ್ಞರ ತಂಡವು ವರದಿ ಸಲ್ಲಿಸಿದ ಆಧಾರದ ಮೇಲೆ ರಾಜ್ಯದ ಮರಳು ನೀತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಅಳವಡಿಸಿಕೊಳ್ಳಲು ಸೂಚಿಸಿದರು.

ಸಹಕಾರ ಇಲಾಖೆ ಸಚಿವ ಬಂಡೆಪ್ಪ ಕಾಶೆಂಪುರ, ಪಶುಸಂಗೋಪನೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ, ಕಂದಾಯ ಸಚಿವ ಆರ್. ವಿ. ದೇಶಪಾಂಡೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ. ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Sand policy will be modified to get rid of Mafia, CM Kumaraswamy. Decision will be taken based on report given by team members went to AP, Telangana and Gujarat to study their policy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more