• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ

|

ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಷ್ಟು ದಿನ ಸಿಸಿಬಿ ಪೊಲೀಸರ ವಶದಲ್ಲಿದ್ದ ನಟಿಯರು ಇಂದು ಸಂಜೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಸಿಸಿಬಿ ಪೊಲೀಸರ ಮನವಿ ಹಿನ್ನಲೆಯಲ್ಲಿ ಸಂಜನಾರನ್ನು ಕೋರ್ಟ್ ಮತ್ತೆ 3 ದಿನ ಪೊಲೀಸ್ ವಶಕ್ಕೆ ನೀಡಿದೆ.

ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿ ಮತ್ತು ಸಂಜನಾ ಬಂಧಿಸಿದ್ದರು. ಸಿಸಿಬಿ ವಶದಲ್ಲಿದ್ದ ಅವರ ಕಸ್ಟಡಿ ಅವಧಿ ಸೋಮವಾರ ಅಂತ್ಯಗೊಂಡಿತ್ತು.

ಡ್ರಗ್ ಕೇಸ್; ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಭಾಗ್ಯವಿಲ್ಲ

ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಸೆಪ್ಟೆಂಬರ್ 27ರ ತನಕ ನಟಿಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.

ಡ್ರಗ್ಸ್ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತೆ, ನಿಯಮಗಳೇನು?

ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಸೋಮವಾರ ನಡೆಸಿತ್ತು. ಸೆ. 16ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಇದರಿಂದಾಗಿ ನಟಿಯರು ಜೈಲು ಪಾಲಾಗಲಿದ್ದಾರೆ.

ನಟಿ ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ವಶಕ್ಕೆ

ವಶಕ್ಕೆ ಕೇಳದ ಸಿಸಿಬಿ

ವಶಕ್ಕೆ ಕೇಳದ ಸಿಸಿಬಿ

ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿಚಾರಣೆಯನ್ನು ಸಿಸಿಬಿ ಪೂರ್ಣಗೊಳಿಸಿದೆ. ವೈದ್ಯಕೀಯ ಪರೀಕ್ಷೆಯನ್ನು ಸಹ ಮುಕ್ತಾಯಗೊಳಿಸಲಾಗಿದೆ. ಆದ್ದರಿಂದ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ನೀಡುವಂತೆ ಸಿಸಿಬಿ ಕೇಳಲಿಲ್ಲ. ಇದರಿಂದಾಗಿ 1ನೇ ಎಸಿಎಂಎಂ ನ್ಯಾಯಾಲಯ ನಟಿಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.

ಸಂಜನಾ ಜಾಮೀನು ಅರ್ಜಿ ಸಲ್ಲಿಸಿಲ್ಲ

ಸಂಜನಾ ಜಾಮೀನು ಅರ್ಜಿ ಸಲ್ಲಿಸಿಲ್ಲ

ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸೆಪ್ಟೆಂಬರ್ 8ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಬಳಿಕ ಅಂದು ಸಂಜೆ ಸಿಸಿಬಿ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಅವರು ಇನ್ನು ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿಲ್ಲ. ಆದ್ದರಿಂದ, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪರಪ್ಪನ ಅಗ್ರಹಾರ ಜೈಲಿಗೆ

ಪರಪ್ಪನ ಅಗ್ರಹಾರ ಜೈಲಿಗೆ

ನಟಿ ರಾಗಿಣಿ, ರಾಹುಲ್, ಪ್ರಶಾಂತ್ ರಂಕ, ನಿಯಾಜ್ ಮತ್ತು ರಾಗಿಣಿ ಆಪ್ತರಾದ ರವಿಶಂಕರ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಸಿಸಿಬಿ ಪೊಲೀಸರು ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಿದ್ದಾರೆ.

ಆಸ್ಪತ್ರೆಗೆ ದಾಖಲಿಸಲು ಮನವಿ

ಆಸ್ಪತ್ರೆಗೆ ದಾಖಲಿಸಲು ಮನವಿ

ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ರಾಗಿಣಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಬೇಕು ಎಂದು ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು ಎಂದು ಕೋರ್ಟ್ ಸೂಚಿಸಿತು. ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಇಬ್ಬರೂ ಆರೋಪಿಗಳಿಗೆ ಇಂದು ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ವರದಿ ನಗೆಟೀವ್ ಬಂದಿತ್ತು.

  Sanjjanaa & Ragini to jail,ಕೊನೆಗೂ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲಿದ್ದಾರೆ ಸಂಜನಾ, ರಾಗಿಣಿ
  ನ್ಯಾಯಾಲಯಕ್ಕೆ ಹಾಜರುಪಡಿಸಿ

  ನ್ಯಾಯಾಲಯಕ್ಕೆ ಹಾಜರುಪಡಿಸಿ

  ನಟಿ ರಾಗಿಣಿ ಸೇರಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಸೆ. 16ಕ್ಕೆ ಮುಂದೂಡಿದೆ. 1ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ಸೆ.16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದೆ.

  English summary
  1st Additional Chief Metropolitan Magistrate court ordered for 14 days judicial custody for Sanjana Galrani And Ragini Dwivedi.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X