ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking news; ಸಚಿವ ಸ್ಥಾನಕ್ಕೆ ಕೆ. ಎಸ್. ಈಶ್ವರಪ್ಪ ರಾಜೀನಾಮೆ

|
Google Oneindia Kannada News

ಶಿವಮೊಗ್ಗ, ಏಪ್ರಿಲ್ 14; ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶಿವಮೊಗ್ಗದಲ್ಲಿ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿದ ಕೆ. ಎಸ್. ಈಶ್ವರಪ್ಪ ರಾಜೀನಾಮೆ ತೀರ್ಮಾನ ಘೋಷಣೆ ಮಾಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಆರೋಪಿ ನಂಬರ್ 1.

ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡ; ಎಚ್‌ಡಿಕೆಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡ; ಎಚ್‌ಡಿಕೆ

ಬುಧವಾರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದ ಈಶ್ವರಪ್ಪ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ. "ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ" ಎಂದರು.

Breaking; ಸಂತೋಷ್ ಪಾಟೀಲ್ ನಿವಾಸಕ್ಕೆ ಕಾಂಗ್ರೆಸ್‌ ನಾಯಕರ ಭೇಟಿBreaking; ಸಂತೋಷ್ ಪಾಟೀಲ್ ನಿವಾಸಕ್ಕೆ ಕಾಂಗ್ರೆಸ್‌ ನಾಯಕರ ಭೇಟಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, "ನನ್ನನ್ನು ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ" ಎಂದು ಹೇಳಿದರು.

ಸರ್ಕಾರದಲ್ಲಿ ಹೇಗೆ ನಡೆಯುತ್ತೆ 40 ಪರ್ಸೆಂಟ್ ಕಮೀಷನ್ ವ್ಯವಹಾರ?: ಸಂತೋಷ್ ಆರೋಪದ ಸುತ್ತಮುತ್ತ ಸರ್ಕಾರದಲ್ಲಿ ಹೇಗೆ ನಡೆಯುತ್ತೆ 40 ಪರ್ಸೆಂಟ್ ಕಮೀಷನ್ ವ್ಯವಹಾರ?: ಸಂತೋಷ್ ಆರೋಪದ ಸುತ್ತಮುತ್ತ

"ಈ ಎಪಿಸೋಡ್‌ನಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೀನಿ ಎಂಬ ಪೂರ್ಣ ವಿಶ್ವಾಸವಿದೆ. ನಂದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ" ಎಂದು ಈಶ್ವರಪ್ಪ ತಿಳಿಸಿದರು.

"ಈ ಬಗ್ಗೆ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಹೇಳಿದಾಗ ಸಂತೋಷದಿಂದ ತನಿಖೆ ಮಾಡಿಸುತ್ತೇನೆ ಎಂದರು. ನಮ್ಮ ಮನೆ ದೇವರು ಚೌಡೇಶ್ವರಿ ನಿರಪರಾಧಿಯಾಗಿ ಹೊರ ಬರುತ್ತೇನೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವರಾಗಿದ್ದ ಕೆ. ಎಸ್. ಈಶ್ವರಪ್ಪ

ಸಚಿವರಾಗಿದ್ದ ಕೆ. ಎಸ್. ಈಶ್ವರಪ್ಪ

ಜುಲೈ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಬಸವರಾಜ ಬೊಮ್ಮಾಯಿ ಆಗಸ್ಟ್‌ನಲ್ಲಿ ಸಂಪುಟ ವಿಸ್ತರಣೆ ಮಾಡಿದ್ದರು. ಆಗ ಶಿವಮೊಗ್ಗ ನಗರದ ಶಾಸಕ ಕೆ. ಎಸ್. ಈಶ್ವರಪ್ಪರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಣೆಯನ್ನು ಅವರಿಗೆ ನೀಡಲಾಗಿತ್ತು.

ಯಡಿಯೂರಪ್ಪ ಅವಧಿಯಲ್ಲೂ ಸಚಿವರು

ಯಡಿಯೂರಪ್ಪ ಅವಧಿಯಲ್ಲೂ ಸಚಿವರು

2019ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಆಗ ಕೆ. ಎಸ್‌. ಈಶ್ವರಪ್ಪರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಯಡಿಯೂರಪ್ಪ ರಾಜೀನಾಮೆ ನೀಡಿ ಹೊಸ ಸಂಪುಟ ರಚನೆಯಾದರೂ ಕೆ. ಎಸ್. ಈಶ್ವರಪ್ಪ ಖಾತೆ ಮಾತ್ರ ಬದಲಾಗಿರಲಿಲ್ಲ.

ಕಾರ್ಯಕಾರಣಿಗೂ ಮೊದಲು ರಾಜೀನಾಮೆ

ಕಾರ್ಯಕಾರಣಿಗೂ ಮೊದಲು ರಾಜೀನಾಮೆ

ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ಏಪ್ರಿಲ್ 16 ಮತ್ತು 17ರಂದು ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಪಾಲ್ಗೊಳ್ಳಲಿದ್ದಾರೆ. ಈ ಸಮಯದಲ್ಲಿ ಉಂಟಾಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಕೆ. ಎಸ್. ಈಶ್ವರಪ್ಪ ಏಪ್ರಿಲ್ 14ರ ಗುರುವಾರ ರಾಜೀನಾಮೆ ನೀಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಆರೋಪಿ ನಂಬರ್ 1. ಉಡುಪಿ ಲಾಡ್ಜ್‌ನಲ್ಲಿ ಸಂತೋಷ್ ಪಾಟೀಲ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಉಡುಪಿ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮೊದಲ ಸಚಿವರ ರಾಜೀನಾಮೆ

ಮೊದಲ ಸಚಿವರ ರಾಜೀನಾಮೆ

2021ರ ಜುಲೈ 28ರಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಆಗಸ್ಟ್‌ನಲ್ಲಿ ಸಂಪುಟ ವಿಸ್ತರಣೆ ಆಗಿತ್ತು. ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆಯುವುದರಲ್ಲಿ ಪಕ್ಷದ ಹಿರಿಯ ನಾಯಕ ಕೆ. ಎಸ್. ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ.

Recommended Video

ಪ್ರತಿಭಟನೆ ಮಾಡೋಕೆ ಹೋದ ಕಾಂಗ್ರೆಸ್ ನಾಯಕರ ಕಥೆ ನೋಡಿ | Oneindia Kannada
ಸಂಜೆ ಕರೆ ಮಾಡಿದ್ದರು; ಸಿಎಂ

ಸಂಜೆ ಕರೆ ಮಾಡಿದ್ದರು; ಸಿಎಂ

ಈಶ್ವರಪ್ಪ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ನನ್ನದು ಎಳ್ಳುಕಾಳಷ್ಟೂ ಪಾತ್ರ ಇಲ್ಲ. ನನ್ನ ಜೊತೆ ಸಂಜೆ ಮಾತನಾಡಿ ರಾಜೀನಾಮೆ ನೀಡುತ್ತೆನೆ ಎಂದು ಹೇಳಿದರು. ಮುಂದುವರಿದರೆ ಮುಜುಗರ ಆಗುತ್ತದೆ. ಆದಷ್ಟು ಬೇಗ ತನಿಖೆ ಮುಗಿಸಿ ಸತ್ಯ ಹೊರಬರಲಿ. ಈ ಆರೋಪಗಳಿಂದ ಮುಕ್ತವಾಗಿ ಹೊರ ಬರುತ್ತೇನೆ ಎಂದು ಹೇಳಿದ್ದಾರೆ" ಎಂದರು

English summary
Santosh Patil suicide case. Rural development and panchayat raj minister K. S. Eshwarappa resigned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X