ಶಶಿಕಲಾಗೆ ವಿಶೇಷ ಆತಿಥ್ಯ : ಸತ್ಯನಾರಾಯಣರಾವ್ ವಿರುದ್ಧ ಎಫ್‌ಐಆರ್
ಬೆಂಗಳೂರು, ಮಾರ್ಚ್ 04 : ಕಾರಾಗೃಹ ಇಲಾಖೆ ನಿವೃತ್ತ ಡಿಜಿಪಿ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಎಸಿಬಿ ಎಫ್‌ಐಆರ್ ದಾಖಲು ಮಾಡಿದೆ. ವಿ.ಕೆ.ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು 2 ಕೋಟಿ ಲಂಚ ಪಡೆದಿದ್ದಾರೆ ಎಂಬುದು ಆರೋಪವಾಗಿದೆ.
ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಶನಿವಾರ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಸರ್ಕಾರದ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಸಿಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಶಿಕ್ಷೆ ಅನುಭವಿಸುತ್ತಿದ್ದಾರೆ. ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು 2 ಕೋಟಿ ಲಂಚ ಪಡೆದಿದ್ದಾರೆ ಎಂಬುದು ಆರೋಪವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಡಿಐಜಿ ರೂಪ ವರದಿ ನೀಡಿದ್ದರು ಈ ಬಗ್ಗೆ ಎಸಿಬಿ ತನಿಖೆಯಾಗಬೇಕು ಎಂದು ರೂಪಾ ಒತ್ತಾಯಿಸಿದ್ದರು. ಜೈಲಿನಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು.
ಸಮಿತಿ ನೀಡಿದ ವರದಿಯನ್ನು ಸರ್ಕಾರದ ಒಪ್ಪಿಕೊಂಡಿದೆ. ನಂತರ ಎಸಿಬಿ ತನಿಖೆಗೆ ಆದೇಶ ನೀಡಲಾಗಿದೆ. ಸರ್ಕಾರದ ಆದೇಶದ ಬಳಿಕ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರೂಪಾ ಟ್ವೀಟ್ : ಎಫ್ಐಆರ್ ದಾಖಲಾಗಿರುವ ಕುರಿತು ಡಿ.ರೂಪಾ ಅವರು ಟ್ವೀಟ್ ಮಾಡಿದ್ದಾರೆ.
Heartening to see something happening on my report. Hope that it will be taken to a logical end. pic.twitter.com/uIO5zAOPKz
— D Roopa IPS (@D_Roopa_IPS) March 4, 2018












Click it and Unblock the Notifications