ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಶಿಕಲಾಗೆ ವಿಶೇಷ ಆತಿಥ್ಯ : ಸತ್ಯನಾರಾಯಣರಾವ್ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಮಾರ್ಚ್ 04 : ಕಾರಾಗೃಹ ಇಲಾಖೆ ನಿವೃತ್ತ ಡಿಜಿಪಿ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಎಸಿಬಿ ಎಫ್‌ಐಆರ್ ದಾಖಲು ಮಾಡಿದೆ. ವಿ.ಕೆ.ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು 2 ಕೋಟಿ ಲಂಚ ಪಡೆದಿದ್ದಾರೆ ಎಂಬುದು ಆರೋಪವಾಗಿದೆ.

ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಶನಿವಾರ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಸರ್ಕಾರದ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಸಿಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಚಿನ್ನಮ್ಮನಿಗೆ 'ರಾಜಾತಿಥ್ಯ' ಫೋಟೋಗಳಲ್ಲಿ ಬಹಿರಂಗಪರಪ್ಪನ ಅಗ್ರಹಾರದಲ್ಲಿ ಚಿನ್ನಮ್ಮನಿಗೆ 'ರಾಜಾತಿಥ್ಯ' ಫೋಟೋಗಳಲ್ಲಿ ಬಹಿರಂಗ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಶಿಕ್ಷೆ ಅನುಭವಿಸುತ್ತಿದ್ದಾರೆ. ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು 2 ಕೋಟಿ ಲಂಚ ಪಡೆದಿದ್ದಾರೆ ಎಂಬುದು ಆರೋಪವಾಗಿದೆ.

Sasikala prison row : ACB files case against Sathyanarayana Rao

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಡಿಐಜಿ ರೂಪ ವರದಿ ನೀಡಿದ್ದರು ಈ ಬಗ್ಗೆ ಎಸಿಬಿ ತನಿಖೆಯಾಗಬೇಕು ಎಂದು ರೂಪಾ ಒತ್ತಾಯಿಸಿದ್ದರು. ಜೈಲಿನಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು.

ಸಮಿತಿ ನೀಡಿದ ವರದಿಯನ್ನು ಸರ್ಕಾರದ ಒಪ್ಪಿಕೊಂಡಿದೆ. ನಂತರ ಎಸಿಬಿ ತನಿಖೆಗೆ ಆದೇಶ ನೀಡಲಾಗಿದೆ. ಸರ್ಕಾರದ ಆದೇಶದ ಬಳಿಕ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪರಪ್ಪನ ಅಗ್ರಹಾರ ಅವ್ಯವಹಾರ : ಐಪಿಎಸ್ ಅಧಿಕಾರಿ ರೂಪಾಗೆ ಗೆಲುವುಪರಪ್ಪನ ಅಗ್ರಹಾರ ಅವ್ಯವಹಾರ : ಐಪಿಎಸ್ ಅಧಿಕಾರಿ ರೂಪಾಗೆ ಗೆಲುವು

ರೂಪಾ ಟ್ವೀಟ್ : ಎಫ್ಐಆರ್ ದಾಖಲಾಗಿರುವ ಕುರಿತು ಡಿ.ರೂಪಾ ಅವರು ಟ್ವೀಟ್ ಮಾಡಿದ್ದಾರೆ.

English summary
Anti Corruption Bureau (ACB) registered a case against former DGP H.N. Sathyanarayana Rao. This comes after the allegation that Sasikala Natarajan was given special privileges during her prison term last year. D.Roopa made an allegation that Sasikala Natarajan was enjoying special treatment after she bribed top prison officials, including Sathyanarayana Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X