ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕರ್ನಾಟಕ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ

|
Google Oneindia Kannada News

ಬೆಂಗಳೂರು, ಜುಲೈ 8: ಕರ್ನಾಟಕದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಣಿಯಾಗುತ್ತಿದೆ. ಕಾಂಗ್ರೆಸ್ ತನ್ನ ಪ್ರಚಾರವನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಾರ್ ರೂಮ್ ತಂಡವನ್ನು ರಚಿಸಿದೆ. ಈ ತಂಡ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನೇಮಿಸಲಾಗಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂವಹನ ವಿಭಾಗದಲ್ಲಿನ ಕೆಲವು ನೇಮಕಾತಿಗಳನ್ನು ಅನುಮೋದಿಸಿದೆ. ಮುಂಬರುವ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಿಸಿ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿ: ಪಿಎಸ್ಐ ಅಕ್ರಮಕ್ಕೆ ಹೊಸ ತಿರುವು ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿ: ಪಿಎಸ್ಐ ಅಕ್ರಮಕ್ಕೆ ಹೊಸ ತಿರುವು

ಒಟ್ಟಾರೆ ಉಸ್ತುವಾರಿಯಾಗಿ ಸುನೀಲ್ ಕಣುಗೌಳಿ ಉಳಿಯಲಿದ್ದು, ರಾಜ್ಯ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾಗಿ ಸೂರಜ್ ಹೆಗ್ಡೆ ನೇಮಕ ಮಾಡಲಾಗಿದೆ.

Sasikanth Senthil appointed as KPCC war room chairman for 2023 Karnataka Assembly Election

ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್, 2019ರ ಸೆಪ್ಟೆಂಬರ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ವಿಧಾನಸಭೆ ಚುನಾವಣೆ ಕಾಂಗ್ರೆಸ್ ಸಿದ್ಧತೆ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಎಲ್ಲ ರೀತಿಯಲ್ಲಿ ಸಜ್ಜುಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ವಾರ್ ರೂಂ ಅನ್ನು ಸ್ಥಾಪಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗವನ್ನು ಮರುಸ್ಥಾಪಿಸಲಾಗಿದೆ. ಸಂವಹನ ಮತ್ತು ಸಾಮಾಜಿಕ ಮಾಧ್ಯಮ ತಂಡದ ಉಸ್ತುವಾರಿಯಾಗಿ ಪ್ರಿಯಾಂಕ್ ಖರ್ಗೆ ನೇಮಕಗೊಂಡರೆ, ವಕ್ತಾರರಾಗಿ ಲಾವಣ್ಯ ಬಲ್ಲಾಳ್, ಕವಿತಾ ರೆಡ್ಡಿ, ನಾಗಲಕ್ಷ್ಮಿ ಮತ್ತು ಐಶ್ವರ್ಯಾ ಮಹದೇವ್ ಅನ್ನು ನೇಮಿಸಲಾಗಿದೆ.

Sasikanth Senthil appointed as KPCC war room chairman for 2023 Karnataka Assembly Election

2023ರ ಮೇ ತಿಂಗಳಿನಲ್ಲಿ ಚುನಾವಣೆ ಸಾಧ್ಯತೆ: ಕರ್ನಾಟಕದ ವಿಧಾನಸಭೆಯ ಚುನಾವಣೆಯು 2023ರ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ. ಒಟ್ಟು 224 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸೋಲು-ಗೆಲುವಿನ ತಂತ್ರಗಾರಿಕೆ ಮತ್ತು ಪ್ರತಿತಂತ್ರಗಳು ಈಗಿನಿಂದಲೇ ಶುರುವಾಗಿದೆ.

ಈ ತಿಂಗಳ ಆರಂಭದಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ ಸರಣಿ ಸಭೆ ನಡೆಸಿದ್ದರು.

Recommended Video

ಮದ್ಯಪಾನ ಮಾಡಿದರೆ ಹೆಣ್ಣಿಗಿಂತ ಗಂಡಿಗೆ ತೊಂದರೆ ಜಾಸ್ತಿ ! | *Lifestyle | OneIndia Kannada

English summary
Karnataka Assembly Election 2023: Congress has formed a war room team. Sasikanth Senthil appointed as chairman of the war room of the Karnataka Pradesh Congress Committee. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X