ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಚಿವರಾಗಿ ಡಿಕೆಶಿ ಬೆಳಗಾವಿಗೆ ಬರಲಿ, ಆದರೆ ರಾಜಕೀಯ ಹಸ್ತಕ್ಷೇಪ ಮಾಡುವಂತಿಲ್ಲ'

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18: ಬೆಳಗಾವಿ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಟ್ಟಿಗೆದ್ದಿದ್ದ ಜಾರಕಿಹೊಳಿ ಸಹೋದರರು ಈಗ ದಾರಿ ಹೊರಳಿಸಿದ್ದಾರೆ. ಇಬ್ಬರೂ ಪ್ರತ್ಯೇಕವಾಗಿ ಬಿರುಸಿನ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಸೋಮವಾರ ತಮ್ಮ ಬೆಂಬಲಿಗ ಶಾಸಕರ ಜತೆ ಸಭೆ ನಡೆಸಿ, ಬಳಿಕ ಸಂಜೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದ ರಮೇಶ್ ಜಾರಕಿಹೊಳಿ ವಿವಿಧ ಬೇಡಿಕೆಗಳನ್ನು ಅವರ ಮುಂದಿರಿಸಿದ್ದರು.

ಸಿದ್ದರಾಮಯ್ಯ ಎದುರು ರಮೇಶ್ ಜಾರಕಿಹೊಳಿ ಇರಿಸಿದ ಮೂರು ಬೇಡಿಕೆಗಳುಸಿದ್ದರಾಮಯ್ಯ ಎದುರು ರಮೇಶ್ ಜಾರಕಿಹೊಳಿ ಇರಿಸಿದ ಮೂರು ಬೇಡಿಕೆಗಳು

ಬಳ್ಳಾರಿಯ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಬೇಕು, ತಮ್ಮ ತಂಡದ ಎಲ್ಲ ಶಾಸಕರಿಗೂ ನಿಗಮ ಮಂಡಳಿ ನೀಡಬೇಕು ಎಂಬ ಬೇಡಿಕೆಗಳನ್ನು ಈ ಬಣ ಮುಂದಿರಿಸಿದೆ. ಅಲ್ಲದೆ, ಸಂಪುಟ ವಿಸ್ತರಣೆಗೆ ಸೆ.30ರ ಗಡುವು ಕೂಡ ನೀಡಿದೆ. ಈ ಮಧ್ಯೆ ಮಂಗಳವಾರವೇ ರಮೇಶ್ ಜಾರಕಿಹೊಳಿ ಬಣದ ಒಟ್ಟು 16 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ.

ಸಿದ್ದು ಸಂಧಾನ ವಿಫಲ? ಇಂದು ರಮೇಶ್ ಜಾರಕಿಹೊಳಿ ರಾಜೀನಾಮೆ?ಸಿದ್ದು ಸಂಧಾನ ವಿಫಲ? ಇಂದು ರಮೇಶ್ ಜಾರಕಿಹೊಳಿ ರಾಜೀನಾಮೆ?

ಆ ವಿಚಾರವಾಗಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಡಿಕೆಶಿ ಸಚಿವರಾಗಿ ಬರಲಿ

ಡಿಕೆಶಿ ಸಚಿವರಾಗಿ ಬರಲಿ

ಬೆಳಗಾವಿ ಜಿಲ್ಲೆಯ ಆಡಳಿತ, ಪಕ್ಷದ ಚಟುವಟಿಕೆ ಮತ್ತಿತರ ವಿಚಾರಗಳಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದ್ದ ಜಾರಕಿಹೊಳಿ ಸಹೋದರರು ಪಕ್ಷದ ವಿರುದ್ಧ ತಿರುಗಿಬಿದ್ದಿದ್ದರು. ಈಗ ಆ ಸಮಸ್ಯೆ ಬಗೆಹರಿದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯ ರಾಜಕೀಯದಲ್ಲಿ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪ ಮಾಡಬಾರದು. ಅವರು ಸಚಿವರಾಗಿ ಬೆಳಗಾವಿಗೆ ಬಂದರೆ ಸ್ವಾಗತ ಎಂದು ಸತೀಶ್ ಹೇಳಿದ್ದಾರೆ.

ಮಾತುಕತೆ ಬಗ್ಗೆ ಗೊತ್ತಿಲ್ಲ

ಮಾತುಕತೆ ಬಗ್ಗೆ ಗೊತ್ತಿಲ್ಲ

ರಮೇಶ್ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ ನಡುವೆ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ. ನಾನೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ಬಗ್ಗೆ ನಾನು ಏನನ್ನೂ ಮಾತನಾಡಲು ಸಾಧ್ಯವಿಲ್ಲ. ನಾಳೆ (ಬುಧವಾರ) ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದೇನೆ. ನಾನು ಪಕ್ಷ ಬಿಡುವ ಬಗ್ಗೆ ಮಾತನಾಡಿಲ್ಲ. ಪಕ್ಷ ಬಿಡುವುದೂ ಇಲ್ಲ. ಬಿಜೆಪಿಯವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಸತೀಶ್ ಸ್ಪಷ್ಟಪಡಿಸಿದ್ದಾರೆ.

ಸಮ್ಮಿಶ್ರ ಸರಕಾರದ ಅಸ್ಥಿರತೆ: ಬಿಜೆಪಿ ಬಿಡುಗಡೆ ಮಾಡಿದ ತುರ್ತು ಮಾಧ್ಯಮ ಪ್ರಕಟಣೆಸಮ್ಮಿಶ್ರ ಸರಕಾರದ ಅಸ್ಥಿರತೆ: ಬಿಜೆಪಿ ಬಿಡುಗಡೆ ಮಾಡಿದ ತುರ್ತು ಮಾಧ್ಯಮ ಪ್ರಕಟಣೆ

ಮೊದಲಿನಿಂದಲೂ ಜತೆಗಿದ್ದವರು

ಮೊದಲಿನಿಂದಲೂ ಜತೆಗಿದ್ದವರು

ನಾಗೇಂದ್ರ, ಆನಂದ್ ಸಿಂಗ್, ಗಣೇಶ್, ಎಂಟಿಬಿ ನಾಗರಾಜ್ ಎಲ್ಲರೂ ಚುನಾವಣಾ ಪೂರ್ವದಿಂದಲೂ ನಮ್ಮ ಜತೆಗಿದ್ದವು. ಹೀಗಾಗಿ ಅವರೆಲ್ಲರೂ ರಮೇಶ್ ಜೊತೆ ಆಗಾಗ ಸೇರಿ ಮಾತುಕತೆಯಾಡುವುದು ಸಹಜ. ಅದರಲ್ಲಿ ವಿಶೇಷವಿಲ್ಲ. ಉಳಿದಂತೆ ಬೇರೆಯವರ ವೈಯಕ್ತಿಕ ವಿಚಾರ ನನಗೆ ತಿಳಿದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿಲ್ಲ ಎಂದಿದ್ದಾರೆ.

ಈ ನಡುವೆ ಖಾಸಗಿ ಹೋಟೆಲ್‌ನಲ್ಲಿ ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅವರ ಜತೆ ಶಾಸಕ ನಾಗೇಂದ್ರ ಕೂಡ ಇದ್ದಾರೆ.

ಬಿಜೆಪಿ ಶಾಸಕರಿಗೆ ಬುಲಾವ್

ಬಿಜೆಪಿ ಶಾಸಕರಿಗೆ ಬುಲಾವ್

ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿರುವ ಬೆನ್ನಲ್ಲೇ ಬಿಜೆಪಿ ತನ್ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಬರುವಂತೆ ಕರೆ ನೀಡಿದೆ. ಬೆಂಗಳೂರಿಗೆ ಬರಲಿರುವ ಶಾಸಕರು ಸರ್ಕಾರದ ವಿವಿಧ ಸಮಿತಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಲಿಂದ ಮುಂದಿನ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಲು ರೆಸಾರ್ಟ್‌ಗೆ ತೆರಳಲಿದ್ದಾರೆ ಎನ್ನಲಾಗಿದೆ.

ಶಿವರಾಮ್ ಹೆಬ್ಬಾರ್ ಸೇರ್ಪಡೆ?

ಶಿವರಾಮ್ ಹೆಬ್ಬಾರ್ ಸೇರ್ಪಡೆ?

ಯಲ್ಲಾಪುರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ. ಮಾಜಿ ಶಾಸಕ ವಿ.ಎಸ್. ಪಾಟೀಲ್ ಅವರು ಬಿ.ಎಸ್. ಯಡಿಯೂರಪ್ಪ ಅವರನ್ನು ಈಗಾಗಲೇ ಭೇಟಿ ಮಾಡಿದ್ದಾರೆ. ಶಿವರಾಮ್ ಹೆಬ್ಬಾರ್ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಪಾಟೀಲ್ ಮಧ್ಯಸ್ಥಿಕೆ ವಹಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರೇ ಬಿಜೆಪಿಯತ್ತ ಬರಲಿರುವುದರಿಂದ ಆತಂಕ ಪಡುವುದು ಬೇಡ. ಎಲ್ಲರೂ ರೆಸಾರ್ಟ್‌ಗೆ ತೆರಳಿ ಮುಂದಿನ ಯೋಜನೆ ರೂಪಿಸೋಣ ಎಂದು ಯಡಿಯೂರಪ್ಪ ಶಾಸಕರಿಗೆ ತಿಳಿಸಿದ್ದಾರೆ.

English summary
Sathish Jarkiholi said that the Belagavi issue is resolved. We welcome DK Shivakumar as a minister, but he should not interfere in the district's politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X