ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಮೈಸೂರಿಗೆ ಸ್ಥಳಾಂತರ: ಸತೀಶ್ ಜಾರಕಿಹೊಳಿ ಅಸಮಾಧಾನ
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುತ್ತದೆ. ಈ ಮೊದಲು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆಗೆ ಚಿಂತಿಸಲಾಗಿತ್ತು, ಆದರೆ ಈಗ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ರಾಹುಲ್ ಗಾಂಧಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಗೃಹಲಕ್ಷ್ಮಿ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ಇಲ್ಲಿ ಸ್ಕೀಮ್ ಲಾಂಚ್‌ಗೆ ಸಿದ್ಧತೆ ನಡೆಸುವಂತೆ ತಿಳಿಸಲಾಗಿತ್ತು ಮತ್ತು ಸಿದ್ಧತೆಗಳನ್ನು ಆರಂಭಿಸಿದ್ದರು, ಆದರೆ ಈಗ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ ಎಂದು ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಕಾರ್ಯಕ್ರಮದ ವೇಳಾಪಟ್ಟಿ ಮತ್ತು ಸ್ಥಳವನ್ನು ಪ್ರಕಟಿಸಿದ್ದರು. ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಹೈಕಮಾಂಡ್ ಕಾರಣ ನೀಡಬೇಕು ಎಂದು ಅವರು ಹೇಳಿದರು.
ರಾಹುಲ್ ಗಾಂಧಿಗಾಗಿ ಕಾರ್ಯಕ್ರಮ ಸ್ಥಳಾಂತರ
ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಗೃಹ ಲಕ್ಷ್ಮಿ ಯೋಜನೆ ಆರಂಭವನ್ನು ಸ್ಥಳಾಂತರಿಸಲು ಕಾರಣಗಳನ್ನು ನೀಡಿಲ್ಲ, ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡಿನಲ್ಲಿ ಕಾರ್ಯಕ್ರಮವನ್ನು ನಿಗದಿಪಡಿಸಿದ್ದಾರೆ, ಆದ್ದರಿಂದ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಹೇಳಿದರು. ಈ ಬಗ್ಗೆ ಸಿದ್ದರಾಮಯ್ಯ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಜಾರಕಿಹೊಳಿ ಹೇಳಿದರು. ರಾಜ್ಯ ನಾಯಕರ ಜತೆ ಮಾತುಕತೆ ನಡೆಯುತ್ತಿರುವುದರಿಂದ ಯಾರು ಬರುತ್ತಾರೆ ಎನ್ನುವುದು ಗೊತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್‌ನ ಉನ್ನತ ನಾಯಕರನ್ನು ಚೆಕ್‌ಮೇಟ್ ಮಾಡುತ್ತೇವೆ ಎಂಬ ಬಿಜೆಪಿ ನಾಯಕ ಸಿಟಿ ರವಿ ಅವರ ಹೇಳಿಕೆಯನ್ನು ಅವರು ತಳ್ಳಿಹಾಕಿದರು. ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ, ಬದಲಿಗೆ ಕಾಂಗ್ರೆಸ್ ವಿರೋಧ ಪಕ್ಷದ ಶಾಸಕರನ್ನು ಬೇಟೆಯಾಡುವ ಸ್ಥಿತಿಯಲ್ಲಿದೆ ಎಂದರು.
ಬೆಳಗಾವಿ ಜಿಲ್ಲೆ ತ್ರಿವಿಭಜನೆ ಹಾಗೂ ಹೆಚ್ಚಿನ ಬೇಡಿಕೆಗಳು ಮುನ್ನೆಲೆಗೆ ಬರುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, "ಪ್ರತಿಯೊಬ್ಬರಿಗೂ ಅವರವರ ಸ್ವಂತ ಬೇಡಿಕೆಗಳನ್ನು ಮಾಡುವ ಹಕ್ಕಿದೆ ಮತ್ತು ಅದನ್ನು ಸರ್ಕಾರ ನಿರ್ಧರಿಸುತ್ತದೆ. ನವೆಂಬರ್ 1 ರ ಮೊದಲು ಬೆಳಗಾವಿ ತಾಲೂಕು ವಿಭಜನೆ ಆಗಬೇಕು ಮತ್ತು ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲೆಯ ವಿಭಜನೆ ಸ್ವಲ್ಪ ಸಮಯದ ನಂತರ ಆಗಬಹುದು" ಎಂದು ಹೇಳಿದರು.
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೆಪ್ಟೆಂಬರ್ ಮೊದಲ ವಾರದಿಂದ ಸುಮಾರು ಎರಡರಿಂದ ಮೂರು ಸಭೆಗಳನ್ನು ನಡೆಸಲಾಗುವುದು ಎಂದ ಅವರು, ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಎಂಎಲ್ಸಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿಯಿಂದ ಪ್ರಕಾಶ ಚಿಂಗಳೆ, ಕಿರಣ್ ಸಾಧುನ್ವರ್ ಬೆಳಗಾವಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಎಂದು ಹೇಳಿದರು.












Click it and Unblock the Notifications