ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?, ಕಾಂಗ್ರೆಸ್ ಹೊಸ ತಂತ್ರ
Recommended Video

ಬೆಂಗಳೂರು, ಸೆಪ್ಟೆಂಬರ್ 14 : ಜಾರಕಿಹೊಳಿ ಸಹೋದರರ ಬಂಡಾಯ ಕಿಚ್ಚನ್ನು ಕಡಿಮೆ ಮಾಡಲು ಕಾಂಗ್ರೆಸ್ ಸೂತ್ರ ಸಿದ್ಧಪಡಿಸಿದೆ. ಸಂಪುಟ ವಿಸ್ತರಣೆ ಸಮಯದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ.
ಸದ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ರಮೇಶ್ ಜಾರಕಿಹೊಳಿ ಅವರು ಪೌರಾಡಳಿತ ಸಚಿವರಾಗಿದ್ದಾರೆ. ಸಂಪುಟ ವಿಸ್ತರಣೆ ಮಾಡುವಾಗ ಅವರನ್ನು ಕೆಳಗಿಳಿಸಿ, ಸತೀಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ.

ಸತೀಶ್ ಜಾರಕಿಹೊಳಿ ಅವರು ಎಲ್ಲಾ ನಾಯಕರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಆದರೆ, ಈಗಾಗಲೇ ಬಂಡಾಯ ಎದ್ದಿರುವ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವುದು ಅಷ್ಟು ಸುಲಭವೇ? ಕಾದು ನೋಡಬೇಕು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸತೀಶ್ ಜಾರಕಿಹೊಳಿ ಅವರು ಸಚಿವರಾಗಿದ್ದರು. ಸಂಪುಟ ಪುನಾರಚನೆ ಸಮಯದಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟು ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.
2018ರ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ (ಯಮಕನಮರಡಿ), ರಮೇಶ್ ಜಾಕಿಹೊಳಿ (ಗೋಕಾಕ್) ಇಬ್ಬರೂ ಜಯಗಳಿಸಿದ್ದಾರೆ. ಆದರೆ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.












Click it and Unblock the Notifications