ಸಿಎಂ ಆಗಲು ಕುಮಾರಸ್ವಾಮಿ ಭೇಟಿಯಾದ ಸತೀಶ್ ಜಾರಕಿಹೊಳಿ: ದೇವೇಗೌಡ ಸ್ಫೋಟಕ ಹೇಳಿಕೆ
ಮೈಸೂರು, ಮಾರ್ಚ್ 27: ರಾಜಕೀಯದಲ್ಲಿ ಶತ್ರುವಿನ ಶತ್ರು ಮಿತ್ರ ಎಂಬ ತಂತ್ರಗಾರಿಕೆ ಸಾಕಷ್ಟು ಬಾರಿ ಪ್ರಯೋಗವಾಗುತ್ತದೆ. ಇದೀಗ ಕರ್ನಾಟಕ ರಾಜಕೀಯದಲ್ಲೂ ಈ ಪ್ರಯೋಗ ಮಾಡುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ. ಅದೂ, ಉಪಮುಖ್ಯಮಂತ್ರಿ ಹಾಗೂ ಸಿಎಂ ಸ್ಥಾನ ಆಕಾಂಕ್ಷಿಯಾದ ಡಿಕೆ ಶಿವಕುಮಾರ್ ವಿರುದ್ಧ. ಕಾಂಗ್ರೆಸ್ ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಕೆಲವು ವಿರೋಧಿಗಳು ಒಂದಾಗುತ್ತಿದ್ದಾರೆ. ಡಿ ಕೆ ಶಿವಕುಮಾರ್ ಜೊತೆಗೆ ರಾಜಕೀಯ ಸ್ವರೂಪ ಮೀರಿ ವೈಯಕ್ತಿಕ ವಿಚಾರವಾಗಿ ಇವರ ನುಡವೆ ಕಿತ್ತಾಟ ನಡೆದಿದ್ದವು. ಇದೀಗ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯಲು ಹಲವು ನಾಯಕರು ಒಂದಾಗಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನ ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇನ್ನೂ ಈ ನಾಯಕ ಚರ್ಚೆ ರಾಜ್ಯ ರಾಜಕೀಯದಲ್ಲಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಸತೀಶ್ ಜಾರಕಿಹೊಳಿ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ಭೇಟಿ ಬಗ್ಗೆ ಮಾಜಿ ಸಚಿವ ಜಿ ಟಿ ದೇವೇಗೌಡ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಕುರಿತು ಜಿ ಟಿ ದೇವೇಗೌಡ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮುಂದೆ ಮುಖ್ಯಮಂತ್ರಿ ಆಗುವ ಸಂದರ್ಭ ಬಂದರೆ, ಅವಕಾಶ ಸಿಕ್ಕಿದರೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಬಳಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿರಬಹುದು. ಸಿಎಂ ಆಗುವ ಅವಕಾಶ ಸಿಕ್ಕದರೆ ಜೆಡಿಎಸ್ನ 18 ಶಾಸಕರ ಬೆಂಬಲ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೊಸ್ ಬಾಂಬ್ ಸಿಡಿಸಿದ್ದಾರೆ.
ಸದ್ಯದ ಪರಿಸ್ಥಿತಿ ನೋಡಿದರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ. ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಅಂದ್ರೇ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಸತೀಶ್ ಜಾರಕಿಹೊಳಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ಅಲ್ಲ ಎಲ್ಲಾ ವಿಚಾರದಲ್ಲೂ ನಾನು ತಟಸ್ಥ ತಟಸ್ಥ ಎಂದು ಜೆಡಿಎಸ್ ನ ಹಿರಿಯ ಶಾಸಕ ಜಿ ಟಿ ದೇವೇಗೌಡ ಅವರು ಹೇಳಿದರು.
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದ ಅವರು, ಅದು ಬಿಜೆಪಿಯ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ, ಈ ಹಿಂದೆ ಅವರ ಬಗ್ಗೆ ಮಾತನಾಡಿದ್ದೆ. ಆಗ ಅವರೇ ಪೋನ್ ಮಾಡಿ ಮಾತನಾಡಿ ಸರಿ ಮಾಡಿಕೊಂಡರು. ಈಗ ನಮ್ಮ ಮಧ್ಯೆ ಏನೂ ಇಲ್ಲ. ಮೇಲಾಗಿ ಇದು ಬಿಜೆಪಿ ಪಕ್ಷದ ಆಂತರೀಕ ವಿಚಾರ. ಮುಂದೆ ಇನ್ನೂ ಏನೇನು ಬೆಳವಣಿಗೆ ನಡೆಯುತ್ತೋ ಕಾದು ನೋಡೋಣ ಎಂದು ತಿಳಿಸಿದರು.
ಹನಿಟ್ರ್ಯಾಪ್ ವಿಚಾರವಾಗಿ ಜಿ ಟಿ ದೇವೇಗೌಡ ಅವರು ಮಾತನಾಡಿ, ಸದನದಲ್ಲಿ ಸುನಿಲ್ ಕುಮಾರ್, ರಾಜಣ್ಣ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ತನ್ನದೇ ಆದ ಇತಿಹಾಸ ಇದೆ, ಇತ್ತೀಚಿನ ದಿನಗಳ ಘಟನೆ ನೋಡಿದ್ರೇ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ. ಸದನದಲ್ಲಿ ರಾಜ್ಯದ ಅಭಿವೃದ್ಧಿ ವಿಚಾರ ಚರ್ಚೆ ಆಗಬೇಕಿತ್ತು. ಕೇವಲ ಗಲಾಟೆ ಗದ್ದಲದಲ್ಲೇ ಸದನ ಮುಗಿಯುತು. ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದ್ರು ಅಂತ ಜನತೆಗೆ ಗೊತ್ತಾಗಲೇ ಇಲ್ಲ. ಹನಿಟ್ರ್ಯಾಪ್ ಏಕೆ ಆಯ್ತು, ಏನು ಎಂಬುದನ್ನು ತನಿಖೆ ಮಾಡಬೇಕು, ತನಿಖೆ ಮಾಡಿದಾಗಲೇ ಎಲ್ಲವೂ ತಿಳಿಯುತ್ತದೆ ಎಂದರು.












Click it and Unblock the Notifications