ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಬೆಲ್ ಸ್ಟಾರ್ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್‌ನಿಂದ ಕರೆ!

|
Google Oneindia Kannada News

Recommended Video

ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈ ಕಮಾಂಡ್ ನಿಂದ ಕರೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 17 : ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಸಮಾನ ಶಮನಕ್ಕೆ ವೇದಿಕೆ ಸಿದ್ಧವಾಗಿದೆ. ದೆಹಲಿಗೆ ಬರುವಂತೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ.

ಜಾರಕಿಹೊಳಿ ಸಹೋದರರಿಂದ ಸರ್ಕಾರ ಉರುಳಿಸುವುದು ಅಸಾಧ್ಯ: ಮೊಯ್ಲಿ ಜಾರಕಿಹೊಳಿ ಸಹೋದರರಿಂದ ಸರ್ಕಾರ ಉರುಳಿಸುವುದು ಅಸಾಧ್ಯ: ಮೊಯ್ಲಿ

ಸೋಮವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿ ಅವರಿಗೆ ದೂರವವಾಣಿ ಕರೆ ಮಾಡಿದರು. 'ಮಂಗಳವಾರ ಅಥವ ಬುಧವಾರ ದೆಹಲಿಗೆ ಬರುವಂತೆ' ಸೂಚನೆ ನೀಡಿದರು.

ಜಾರಕಿಹೊಳಿ ಸಹೋದರರು ಬಿಜೆಪಿ ಸೇರಿದರೆ ಆಗುವ 5 ಲಾಭಗಳು!ಜಾರಕಿಹೊಳಿ ಸಹೋದರರು ಬಿಜೆಪಿ ಸೇರಿದರೆ ಆಗುವ 5 ಲಾಭಗಳು!

ಭಾನುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್‌ನಲ್ಲಿನ ಸಮಸ್ಯೆ ಬಗೆಹರಿಸುವ ಜವಾಬ್ದಾರಿಯನ್ನು ನೀಡಿದ್ದರು. ಜಾರಕಿಹೊಳಿ ಸಹೋದರರ ಜೊತೆ ಮಾತುಕತೆ ನಡೆಸಿ ಎಂದು ಸೂಚನೆ ನೀಡಿದ್ದರು.

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?, ಕಾಂಗ್ರೆಸ್ ಹೊಸ ತಂತ್ರ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?, ಕಾಂಗ್ರೆಸ್ ಹೊಸ ತಂತ್ರ

ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ಬಂದಿದ್ದು, ಸಂಜೆ 4 ಗಂಟೆಗೆ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ. ಹಲವು ದಿನದ ರಾಜಕೀಯ ಬೆಳವಣಿಗೆ ಬಳಿಕ ಈ ಭೇಟಿ ಭಾರಿ ಮಹತ್ವ ಪಡೆದಿದೆ.

ರಾಜೀನಾಮೆ ನೀಡುವುದಿಲ್ಲ

ರಾಜೀನಾಮೆ ನೀಡುವುದಿಲ್ಲ

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಸಚಿವ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವುದಿಲ್ಲ. ಕಾಂಗ್ರೆಸ್‌ನಲ್ಲಿಯೇ ಇದ್ದು, ಸರ್ಕಾರಕ್ಕೆ ಸಹಕಾರ ನೀಡಲಿದ್ದಾರೆ' ಎಂದು ಹೇಳಿದರು.

'ಕೆ.ಸಿ.ವೇಣುಗೋಪಾಲ್ ಅವರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಮಂಗಳವಾರ ಅಥವ ಬುಧವಾರ ದೆಹಲಿಗೆ ಭೇಟಿ ನೀಡುತ್ತೇನೆ' ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಸಿದ್ದರಾಮಯ್ಯಗೆ ಸೂಚನೆ

ಸಿದ್ದರಾಮಯ್ಯಗೆ ಸೂಚನೆ

ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಕೆ.ಸಿ.ವೇಣುಗೋಪಾಲ್ ಅವರು, 'ಜಾರಕಿಹೊಳಿ ಸಹೋದರರ ಜೊತೆ ಮಾತುಕತೆ ನಡೆಸಿ ಅಸಮಾಧಾನ ಬಗೆಹರಿಸಿ, ಬಳಿಕ ದೆಹಲಿಗೆ ಬನ್ನಿ' ಎಂದು ಸೂಚಿಸಿ ದೆಹಲಿಗೆ ವಾಪಸ್ ಆಗಿದ್ದರು.

ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ ಅವರನ್ನು ಇಂದು ಸಂಜೆ 4 ಗಂಟೆಗೆ ಭೇಟಿಯಾಗಲಿದ್ದಾರೆ. ಬಳಿಕ ಮಂಗಳವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ದೆಹಲಿಗೆ ಕಾಂಗ್ರೆಸ್ ನಾಯಕರ ದಂಡು

ದೆಹಲಿಗೆ ಕಾಂಗ್ರೆಸ್ ನಾಯಕರ ದಂಡು

ಬುಧವಾರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಕರ್ನಾಟಕದ ಹಲವು ಕಾಂಗ್ರೆಸ್ ನಾಯಕರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜಾರಕಿಹೊಳಿ ಸಹೋದರರ ಸಿಟ್ಟು, ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್, ಜಾರಕಿಹೊಳಿ ಸಹೋದರರು ಮಂಗಳವಾರ ದೆಹಲಿಗೆ ತೆರಳಲಿದ್ದಾರೆ.

ಕಾದು ನೋಡುವ ತಂತ್ರ

ಕಾದು ನೋಡುವ ತಂತ್ರ

ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಗಳನ್ನು ಪ್ರತಿಪಕ್ಷ ಬಿಜೆಪಿ ಕಾದು ನೋಡುತ್ತಿದೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ರಮೇಶ್ ಜಾರಕಿಹೊಳಿ ನಡುವಿನ ಭೇಟಿ ಬಳಿಕ ಮುಂದೇನಾಗಲಿದೆ? ಎಂಬ ಕುತೂಹಲ ಬಿಜೆಪಿ ನಾಯಕರಿಗೂ ಇದೆ. ಆಪರೇಷನ್ ಕಮಲದ ಸುದ್ದಿ ರಾಜ್ಯ ರಾಜಕೀಯದಲ್ಲಿ ಹಬ್ಬಿದೆ. ಆದರೆ, ಯಾರು ಬಿಜೆಪಿ ಸೇರಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.

English summary
In a phone call AICC general secretary and Karnataka Congress in charge K.C. Venugopal directed Satish Jarkiholi to come for Delhi to meet high command leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X