ಸಿಎಂ ಗದ್ದುಗೆ ಗುದ್ದಾಟ; ಸತೀಶ್ ಜಾರಕಿಹೊಳಿ ನೆಕ್ಸ್ಟ್ ಸಿಎಂ; ಕಾಂಗ್ರೆಸ್ ಶಾಸಕನ ಸ್ಟೋಟಕ ಭವಿಷ್ಯ!
ಬೆಂಗಳೂರು, ನವೆಂಬರ್ 21: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಮೂಲಕ ಭರ್ಜರಿ ಜಯಗಳಿಸಿದ್ದು, ಸರ್ಕಾರ ರಚನೆಯ ಆರು ತಿಂಗಳು ಪೂರೈಸುವ ಮೊದಲೇ ಮುಖ್ಯಮಂತ್ರಿ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಕೂಗು ಕೇಳಿ ಬಂದಿದೆ.
ಹೌದು, ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಕುರಿತು ಹೇಳಿಕೆಯನ್ನ ನಿಲ್ಲಿಸುವಂತೆ ರಾಜ್ಯ ನಾಯಕರಿಗೆ ಆದೇಶ ನೀಡಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿದ್ದಾರೆ

ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ರಾಜ್ಯ ನಾಯಕರಿಗೆ ಆದೇಶ ನೀಡಿದ್ರು ಸಹ ಕಾಂಗ್ರೆಸ್ ಶಾಸಕರು ಮತ್ತೆ ಸಿಎಂ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಶಾಸಕ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಕಂಪನ ಸೃಷ್ಟಿಸಿದೆ. ಸತೀಶ್ ಜಾರಕಿಹೊಳಿಯನ್ನು ಸಿಎಂ ಆಗಿ ನೋಡಬೇಕೆಂದು ಹೇಳುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗುತ್ತಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ ಎಂದರು.
ಈ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆಗಮಿಸಬೇಕಿತ್ತು. ಆದರೆ, ಕೆಲಸದ ನಿಮಿತ್ತ ವಿದೇಶಕ್ಕೆ ಹೋಗಬೇಕಾಯಿತು. ಅವರು ಕರೆ ಮಾಡಿ ಸಭೆಗೆ ಹಾಜರಾಗುವಂತೆ ಹೇಳಿದರು. ಮುಂದಿನ ದಿನಗಳಲ್ಲಿ ಗಡಿ ಜಿಲ್ಲೆ ಬೆಳಗಾವಿಯಿಂದ ಮುಖ್ಯಮಂತ್ರಿಯಾಗಲಿದ್ದಾರೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಅವರ ಆಪ್ತರಾಗಿರುವ ಶಾಸಕರಾದ ವಿಶ್ವಾಸ್ ವೈದ್ಯ ಹೇಳಿದ್ದಾರೆ.
ಈಗಾಗಲೇ ದಸರಾ ವೇಳೆ ಮೈಸೂರಿಗೆ ತೆರಳಲು ಸತೀಶ್ ಜಾರಕಿಹೊಳಿ ಹಾಗೂ ಸುಮಾರು 20 ಶಾಸಕರು ರೆಡಿಯಾಗಿದ್ರು, ಹೈಕಮಾಂಡ್ ತಡೆದ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರ ಜತೆ ದುಬೈಗೆ ಹಾರಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂಲಕ ಬೆಳಗಾವಿ ರಾಜಕೀಯದಲ್ಲಿ ನಿರಂತರ ಹಸ್ತಕ್ಷೇಪ ಮಾಡುತ್ತಿರುವ ಶಿವಕುಮಾರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಆಪ್ತ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications