Breaking; ಸವದತ್ತಿ ಬಿಜೆಪಿ ಶಾಸಕ ಆನಂದ್ ಮಾಮನಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ಸೆಪ್ಟೆಂಬರ್ 15: ಕರ್ನಾಟಕ ವಿಧಾನಸಭೆ ಉಪ ಸಭಾಪತಿ, ಬಿಜೆಪಿ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ದಿನಗಳ ಹಿಂದೆ ಸವದತ್ತಿ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ಅಥವ ಶನಿವಾರ ಆನಂದ್ ಮಾಮನಿಯನ್ನು ಚೆನ್ನೈನಿಂದ ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗುತ್ತದೆ. ಸಕ್ಕರೆ ಕಾಯಿಲೆ, ತೀವ್ರವಾದ ಕತ್ತು ನೋವಿನಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

Savadatti BJP MLA Anand Mamani Admitted To Hospital

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆನಂದ್ ಮಾಮನಿ ಆರೋಗ್ಯ ವಿಚಾರಿಸಿದ್ದಾರೆ. ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದ್ದಾರೆ. ಎರಡು ದಿನದಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತದೆ.

ಆನಂದ್ ಮಾಮನಿ ಆರೋಗ್ಯ ಸ್ಥಿರವಾಗಿದೆ. ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಎರಡು ದಿನದಲ್ಲಿ ಅವರು ಬೆಂಗಳೂರಿಗೆ ವಾಪಸ್‌ ಆಗುತ್ತಾರೆ ಎಂದು ಆಪ್ತರು ಹೇಳಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಆನಂದ್ ಮಾಮನಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿದ್ದಾರೆ. ಈಗ 10 ದಿನಗಳ ಮುಂಗಾರು ಅಧಿವೇಶನ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿದೆ.

ಆನಂದ್ ಮಾಮನಿ 2018ರ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಲ್ಲಿ 62,480 ಮತಗಳನ್ನು ಪಡೆದು ಪಕ್ಷೇತರ ಅಭ್ಯರ್ಥಿ ಆನಂದ್ ಚೋಪ್ರಾ (56,189) ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+