Lock Down: ಬಟ್ಟೆ ತೊಳೆದು, ಇಸ್ತ್ರಿ ಮಾಡುವ 6 ಲಕ್ಷ ಮಡಿವಾಳರನ್ನು ರಕ್ಷಿಸಿ
ಬೆಂಗಳೂರು ಏಪ್ರಿಲ್ 3: ವಿಶ್ವದಲ್ಲಿ ಮಹಾಮಾರಿಯಾಗಿ ಹರಡುತ್ತಿರುವ ಕೊರೋನಾ ವೈರಸ್ ಸೋಂಕು ತಡೆಯ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ವೃತ್ತಿನಿರತ ಮಡಿವಾಳರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಮಡಿವಾಳರ ಸಂಘ ರಾಜ್ಯ ಸರ್ಕಾರವನ್ನು ಮನವಿ ಮಾಡಿದೆ.
Recommended Video
ರಾಜ್ಯ ಸರ್ಕಾರ ಈಗಾಗಲೇ ಲಾಕ್ ಡೌನ್ ನಿಂದ ಕಷ್ಟಕ್ಕೊಳಕ್ಕಾಗಿರುವ ಜನರಿಗೆ ಸರ್ಕಾರ ನೆರವು ಒದಗಿಸುತ್ತಿದೆ. ಕರ್ನಾಟಕದಲ್ಲಿ ಸುಮಾರು 10 ಲಕ್ಷ ಜನ ಮಡಿವಾಳರಿದ್ದಾರೆ. ಇವರಲ್ಲಿ ಸುಮಾರು 6 ಲಕ್ಷ ಜನ ಕುಲಕಸುಬನ್ನೇ ನಂಬಿಕೊಂಡಿದ್ದು, ಬಡತನ ರೇಖೆಗಿಂತ ಕೆಳಗಿನವರಾಗಿದ್ದರು. ಅನೇಕರು ಅಸಂಘಟಿತ ಕಾರ್ಮಿಕರ ಪಟ್ಟಿಯಲ್ಲಿ ಕೂಡ ನೊಂದಣಿ ಮಾಡಿಸಿಲ್ಲ. ಬಟ್ಟೆ ತೊಳೆದು ಐರನ್ ಮಾಡಿ ಜೀವನ ಸಾಗಿಸುತ್ತಿರುವ ಮಡಿವಾಳರು, ಸರ್ಕಾರದ ಸವಲತ್ತುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷರಾದ ಸಿ ನಂಜಪ್ಪ ಹೇಳಿದ್ದಾರೆ.

ಸರ್ಕಾರ ಮಡಿವಾಳ ಜನಾಂಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸುತ್ತಿದೆ. ಕಳೆದ 72 ವರ್ಷದಲ್ಲಿ ಮಡಿವಾಳದ ಜನಾಂಗವನ್ನು ಪ್ರತಿನಿಧಿಸುವ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರಾಗಲಿ ಇಲ್ಲದಿರುವುದು ಸಮುದಾಯವನ್ನು ನಿರ್ಲಕ್ಷ್ಯಿಸಿರುವುದಕ್ಕೆ ಸಾಕ್ಷಿ. ಆದ್ದರಿಂದ ತಮಗೆ ತಕ್ಷಣ ನ್ಯಾಯ ಒದಗಿಸಬೇಕೆಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಂಘದ ಉಪಾಧ್ಯಕ್ಷ ಆರ್ ವಿ ರಾಜಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಯಲ್ಲಪ್ಪ ಮನವಿ ಮಾಡಿದ್ದಾರೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications