ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Lock Down: ಬಟ್ಟೆ ತೊಳೆದು, ಇಸ್ತ್ರಿ ಮಾಡುವ 6 ಲಕ್ಷ ಮಡಿವಾಳರನ್ನು ರಕ್ಷಿಸಿ

|
Google Oneindia Kannada News

ಬೆಂಗಳೂರು ಏಪ್ರಿಲ್‌ 3: ವಿಶ್ವದಲ್ಲಿ ಮಹಾಮಾರಿಯಾಗಿ ಹರಡುತ್ತಿರುವ ಕೊರೋನಾ ವೈರಸ್ ಸೋಂಕು ತಡೆಯ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ವೃತ್ತಿನಿರತ ಮಡಿವಾಳರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಮಡಿವಾಳರ ಸಂಘ ರಾಜ್ಯ ಸರ್ಕಾರವನ್ನು ಮನವಿ ಮಾಡಿದೆ.

Recommended Video

ದೇಶದ ಜನತೆಗೆ ಕರೆ ಕೊಟ್ಟ ಮೋದಿ..! | ಈ ಕರೆಯ ಹಿಂದಿನ ಉದ್ದೇಶ ಏನು..? | Narendra Modi

ಏ.5ರಂದು ದೀಪ ಹಚ್ಚಿ ಲಕ್ಷ್ಮಣ ರೇಖೆ ದಾಟಬೇಡಿ, ಇದೇ ರಾಮಬಾಣ: ಮೋದಿ ಏ.5ರಂದು ದೀಪ ಹಚ್ಚಿ ಲಕ್ಷ್ಮಣ ರೇಖೆ ದಾಟಬೇಡಿ, ಇದೇ ರಾಮಬಾಣ: ಮೋದಿ

ರಾಜ್ಯ ಸರ್ಕಾರ ಈಗಾಗಲೇ ಲಾಕ್ ಡೌನ್ ನಿಂದ ಕಷ್ಟಕ್ಕೊಳಕ್ಕಾಗಿರುವ ಜನರಿಗೆ ಸರ್ಕಾರ ನೆರವು ಒದಗಿಸುತ್ತಿದೆ. ಕರ್ನಾಟಕದಲ್ಲಿ ಸುಮಾರು 10 ಲಕ್ಷ ಜನ ಮಡಿವಾಳರಿದ್ದಾರೆ. ಇವರಲ್ಲಿ ಸುಮಾರು 6 ಲಕ್ಷ ಜನ ಕುಲಕಸುಬನ್ನೇ ನಂಬಿಕೊಂಡಿದ್ದು, ಬಡತನ ರೇಖೆಗಿಂತ ಕೆಳಗಿನವರಾಗಿದ್ದರು. ಅನೇಕರು ಅಸಂಘಟಿತ ಕಾರ್ಮಿಕರ ಪಟ್ಟಿಯಲ್ಲಿ ಕೂಡ ನೊಂದಣಿ ಮಾಡಿಸಿಲ್ಲ. ಬಟ್ಟೆ ತೊಳೆದು ಐರನ್ ಮಾಡಿ ಜೀವನ ಸಾಗಿಸುತ್ತಿರುವ ಮಡಿವಾಳರು, ಸರ್ಕಾರದ ಸವಲತ್ತುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷರಾದ ಸಿ ನಂಜಪ್ಪ ಹೇಳಿದ್ದಾರೆ.

Save Dhobi community during the Coronavirus Lock Down

ಸರ್ಕಾರ ಮಡಿವಾಳ ಜನಾಂಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸುತ್ತಿದೆ. ಕಳೆದ 72 ವರ್ಷದಲ್ಲಿ ಮಡಿವಾಳದ ಜನಾಂಗವನ್ನು ಪ್ರತಿನಿಧಿಸುವ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರಾಗಲಿ ಇಲ್ಲದಿರುವುದು ಸಮುದಾಯವನ್ನು ನಿರ್ಲಕ್ಷ್ಯಿಸಿರುವುದಕ್ಕೆ ಸಾಕ್ಷಿ. ಆದ್ದರಿಂದ ತಮಗೆ ತಕ್ಷಣ ನ್ಯಾಯ ಒದಗಿಸಬೇಕೆಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಂಘದ ಉಪಾಧ್ಯಕ್ಷ ಆರ್‌ ವಿ ರಾಜಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಯಲ್ಲಪ್ಪ ಮನವಿ ಮಾಡಿದ್ದಾರೆ.

English summary
Save Dhobi(Madiwala) community during the Coronavirus Lock Down and provide them basic needs an appeal made with CM of Karnataka by Madiwala association
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X